
ಐಪಿಎಲ್‌ನಲ್ಲಿ ಶನಿವಾರ ಎರಡು ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದರೆ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಸೆಣೆಸಾಟವನ್ನು ನಡೆಸಲಿದೆ. ಶನಿವಾರದ ಈ ಎರಡು ಕದನಗಳು ಅಭಿಮಾನಿಗಳಿಗೆ ಸಾಕಷ್ಟು ರೋಚಕ ಅನುಭವವನ್ನು ನೀಡುವುದರಲ್ಲಿ ಅನುಮಾನವಿಲ್ಲ.
ಇನ್ನು ಮಧ್ಯಾಹ್ನ 3:30ಕ್ಕೆ ನಡೆಯಲಿರುವ ಸೆಣೆಸಾಟದಲ್ಲಿ KKR vs GT ತಂಡಗಳು ಮುಖಾಮುಖಿಯಾಗಲಿದೆ. ಗುಜರಾತ್ ಟೈಟನ್ಸ್ ಈ ಬಾರಿಯ ಟೂರ್ನಿಯಲ್ಲಿ ಅದ್ಭುಯ ಪ್ರದರ್ಶನ ನೀಡಿಕೊಂಡು ಬರುತ್ತಿದ್ದು ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಸತತ ಎರಡು ಗೆಲುವು ಸಾಧಿಸಿರುವ ಗುಜರಾತ್ ಟೈಟನ್ಸ್ ತಂಡ 6 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿದ್ದು 10 ಅಂಕಗಳನ್ನು ಹೊಂದಿದೆ. ಇತ್ತ ಕೆಕೆಆರ್ ತಂಡ ಅದ್ಭುತ ಆರಂಭದ ಬಳಿಕ ಸತತವಾಗಿ ವೈಫಲ್ಯ ಅನುಭವಿಸುತ್ತಿದೆ. ಈಗಾಗಲೇ ಹ್ಯಾಟ್ರಿಕ್ ಸೋಲು ಅನುಭವಿಸಿರುವ ಕೆಕೆಆರ್ ಗೆಲುವಿನ ಲಯಕ್ಕೆ ಮರಳಲು ಕಾಯುತ್ತಿದೆ.
ಸ್ಕ್ವಾಡ್‌ಗಳು: KKR: ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್(ನಾಯಕ), ಪ್ಯಾಟ್ ಕಮ್ಮಿನ್ಸ್, ಅಭಿಜೀತ್ ತೋಮರ್, ಸ್ಯಾಮ್ ಬಿಲ್ಲಿಂಗ್ಸ್, ಆರೋನ್ ಫಿಂಚ್, ರಮೇಶ್ ಕುಮಾರ್, ಮೊಹಮ್ಮದ್ ನಬಿ, ಅಮನ್ ಖಾನ್, ಉಮೇಶ್ ಯಾದವ್, ನಿತೀಶ್ ರಾಣಾ, ಶಿವಂ ಮಾವಿ, ಶೆಲ್ಡನ್ ಜಾಕ್ಸನ್ , ರಿಂಕು ಸಿಂಗ್, ಅನುಕುಲ್ ರಾಯ್, ರಸಿಖ್ ದಾರ್, ಚಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ಅಶೋಕ್ ಶರ್ಮಾ, ಪ್ರಥಮ್ ಸಿಂಗ್.
GT: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್
ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಗುಜರಾತ್ ಟೈಟನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 23 ರಂದು ಶನಿವಾರ ನಡೆಯಲಿದ್ದು ಸಂಜೆ 3:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ಹಿಂದಿನ ಪಂದ್ಯಗಳಲ್ಲಿಯೂ ಬ್ಯಾಟರ್‌ಗಳು ಅಬ್ಬರದ ಪ್ರದರ್ಶನ ನೀಡಿ ಮಿಂಚಿದ್ದಾರೆ. ಹೀಗಾಗಿ ಮತ್ತೊಂದು ಹೈಸ್ಕೋರ್ ಪಂದ್ಯ ನಡೆದರೆ ಅಚ್ಚರಿಯಿಲ್ಲ. ಪಿಚ್ ಹಸಿರಿನಿಂದ ಕೂಡಿದ್ದ ಸ್ಪಿನ್ನರ್‌ಗಳಿಗೆ ನೆರವು ನೀಡುವ ಸಾಧ್ಯತೆ ಕಡಿಮೆಯಿದೆ. ಆದರೆ ವೇಗಿಗಳಿಗೆ ಈ ಪಿಚ್ ಲಾಭದಾಯಕವಾಗಿರಲಿದೆ.
ಕೋಲ್ಕತ್ತಾ ನೈಟ್ ರೈಡರ್ಸ್: ವೆಂಕಟೇಶ್ ಅಯ್ಯರ್, ಆರನ್ ಫಿಂಚ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಆಂಡ್ರೆ ರಸೆಲ್, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಶಿವಂ ಮಾವಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ
ಗುಜರಾತ್ ಟೈಟಾನ್ಸ್: ಮ್ಯಾಥ್ಯೂ ವೇಡ್/ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್/ಯಶ್ ದಯಾಲ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ