KKR vs MI Head to Head: ಇತ್ತಂಡಗಳ ಮುಖಾಮುಖಿಯಲ್ಲಿ ದೊಡ್ಡ ಸೋಲು ಕಂಡು ತೀರಾ ಕೆಟ್ಟ ಸ್ಥಾನದಲ್ಲಿದೆ ಈ ತಂಡ!

2020ರ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಚಾಂಪಿಯನ್ಸ್ ಆಗಿ ಹೊರಹೊಮ್ಮುವುದರ ಮೂಲಕ ತನ್ನ ಐದನೇ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದ ಬಲಿಷ್ಠ ಮುಂಬೈ ಇಂಡಿಯನ್ಸ್ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ಲೀಗ್ ಹಂತದಲ್ಲಿಯೇ ಹೊರಬಿದ್ದಿತ್ತು.
ಹೀಗೆ ಕಳೆದ ಬಾರಿಯ ಟೂರ್ನಿಯಲ್ಲಿ ನೀರಸ ಪ್ರದರ್ಶನ ತೋರಿದ್ದ ಮುಂಬೈ ಇಂಡಿಯನ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹಲವು ಬದಲಾವಣೆಗಳೊಂದಿಗೆ ಕಣಕ್ಕೆ ಇಳಿದಿದ್ದು, ಈ ಬಾರಿಯೂ ಕೂಡ ಟೂರ್ನಿಯಲ್ಲಿನ ತನ್ನ ಮೊದಲ 2 ಪಂದ್ಯಗಳಲ್ಲಿ ಸೋಲುವುದರ ಮೂಲಕ ಕಳಪೆ ಆರಂಭ ಪಡೆದುಕೊಂಡಿದೆ. ಹೌದು, ಮೊದಲಿಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 4 ವಿಕೆಟ್‍ಗಳ ಸೋಲನ್ನು ಕಂಡ ಮುಂಬೈ ಇಂಡಿಯನ್ಸ್ ನಂತರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 23 ರನ್‌ಗಳ ಸೋಲನ್ನು ಅನುಭವಿಸಿ ಇದೀಗ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.
ಇತ್ತ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿರುವ ಕೋಲ್ಕತಾ ನೈಟ್ ರೈಡರ್ಸ್ ತಮ್ಮ ನೂತನ ನಾಯಕ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ 2 ಪಂದ್ಯಗಳಲ್ಲಿ ಗೆದ್ದು, ಉಳಿದೊಂದು ಪಂದ್ಯದಲ್ಲಿ ಸೋಲನ್ನು ಕಂಡಿದೆ. ಮೊದಲಿಗೆ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಸೋಲುಣಿಸಿದ ಕೋಲ್ಕತಾ ನೈಟ್ ರೈಡರ್ಸ್ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ದ್ವಿತೀಯ ಪಂದ್ಯದಲ್ಲಿ ಸೋಲನ್ನು ಅನುಭವಿಸಿತು ಹಾಗೂ ತೃತೀಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಸದ್ಯ ಎರಡನೇ ಸ್ಥಾನದಲ್ಲಿದೆ. ಹೀಗೆ ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದುಕೊಂಡಿರುವ ಕೋಲ್ಕತಾ ನೈಟ್ ರೈಡರ್ಸ್ ತನ್ನ ನಾಲ್ಕನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಾಡಲಿದ್ದು, ಈ ಪಂದ್ಯ ಏಪ್ರಿಲ್ 6ರ ಬುಧವಾರದಂದು ಪುಣೆಯ ಎಂಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇನ್ನು ಇತ್ತಂಡಗಳ ನಡುವೆ ಐಪಿಎಲ್ ಇತಿಹಾಸದಲ್ಲಿ ನಡೆದಿರುವ ಮುಖಾಮುಖಿ ಪಂದ್ಯಗಳ ಫಲಿತಾಂಶ ಹಾಗೂ ಈ ಮುಖಾಮುಖಿಯಲ್ಲಿ ಯಾರು ಬಲಿಷ್ಠರು ಎಂಬ ವಿವರ ಈ ಕೆಳಕಂಡಂತಿದೆ.

ಒಟ್ಟಾರೆ ಐಪಿಎಲ್ ಮುಖಾಮುಖಿ ಫಲಿತಾಂಶ
ಕೋಲ್ಕತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 29 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪಂದ್ಯಗಳ ಪೈಕಿ ಮುಂಬೈ ಇಂಡಿಯನ್ಸ್ 22 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ 7 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಐಪಿಎಲ್ ಮುಖಾಮುಖಿ ಪಂದ್ಯಗಳಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಸ್ಪಷ್ಟ ಹಾಗೂ ಬೃಹತ್ ಮೇಲುಗೈ ಸಾಧಿಸಿದೆ.

ಕೊನೆಯ 5 ಪಂದ್ಯಗಳ ಮುಖಾಮುಖಿ
ಕೋಲ್ಕತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಕೊನೆಯದಾಗಿ ನಡೆದಿರುವ 5 ಐಪಿಎಲ್ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಕೋಲ್ಕತ್ತ ನೈಟ್ ರೈಡರ್ಸ್ 2 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿಯೂ ಸಹ ಮುಂಬೈ ಇಂಡಿಯನ್ಸ್ ಮೇಲುಗೈ ಸಾಧಿಸಿದೆ.


ಕಳೆದ ಆವೃತ್ತಿಯ ಮುಖಾಮುಖಿ
ಇನ್ನು ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಲೀಗ್ ಹಂತದಲ್ಲಿಯೇ ಹೊರಬಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ ಫೈನಲ್ ಹಂತದವರೆಗೂ ಹೋಗಿ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲನ್ನು ಅನುಭವಿಸಿತ್ತು. ಇನ್ನು ಕಳೆದ ಆವೃತ್ತಿಯಲ್ಲಿ ಇತ್ತಂಡಗಳ ನಡುವಿನ ಮುಖಾಮುಖಿಯ ಮೊದಲ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 10 ರನ್‌ಗಳ ಜಯವನ್ನು ಸಾಧಿಸಿತ್ತು ಹಾಗೂ ದ್ವಿತೀಯ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್‍ಗಳ ಜಯ ಸಾಧಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications