PBKS vs KKR: 8 ಸಿಕ್ಸರ್ ಚಚ್ಚಿ ಅಬ್ಬರಿಸಿದ ರಸೆಲ್; ಪಂಜಾಬ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಕೆಕೆಆರ್

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇಂದು ( ಏಪ್ರಿಲ್ 1 ) ನಡೆದ 8ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಟ ನಡೆಸಿದವು. ಹಾಗೂ ಈ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿಯೂ ಉತ್ತಮ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್ ರೈಡರ್ಸ್ ಟೂರ್ನಿಯಲ್ಲಿ ತನ್ನ ಎರಡನೇ ಗೆಲುವನ್ನು ದಾಖಲಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಐಯ್ಯರ್ ಬೌಲಿಂಗ್ ಆಯ್ದುಕೊಂಡು ಎದುರಾಳಿ ಪಂಜಾಬ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಹೀಗೆ ಮೊದಲು ಬ್ಯಾಟಿಂಗ್ ಆರಂಭಿಸಿದ ಪಂಜಾಬ್ ಕಿಂಗ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್ ಅಗರ್ವಾಲ್ ಮೊದಲ ಓವರ್‌ನಲ್ಲಿಯೇ 5 ಓವರ್‌ಗಳಲ್ಲಿ 1 ರನ್ ಗಳಿಸಿ ಔಟ್ ಆದರು. ಹೀಗೆ ಆರಂಭಿಕ ಆಘಾತ ಅನುಭವಿಸಿದ ಪಂಜಾಬ್ ಕಿಂಗ್ಸ್ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಭಾನುಕಾ ರಾಜಪಕ್ಸೆ 9 ಎಸೆತಗಳಿಗೆ 31 ರನ್ ಚಚ್ಚಿದರು. ಎರಡನೇ ಓವರ್‌ನ ಅಂತಿಮ ಎಸೆತದಲ್ಲಿ ಟಿಮ್ ಸೌಥಿಗೆ ಬೌಂಡರಿ ಬಾರಿಸಿದರು, ಮೂರನೇ ಓವರ್ ಮಾಡಿದ ಉಮೇಶ್ ಯಾದವ್‌ಗೂ ಬೌಂಡರಿ ಬಾರಿಸಿದರು ಹಾಗೂ ಪಂದ್ಯದ ನಾಲ್ಕನೇ ಓವರ್ ಬೌಲಿಂಗ್ ಮಾಡಿದ ಶಿವಮ್ ಮಾವಿಗೆ ಒಂದು ಬೌಂಡರಿ ಮತ್ತು ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿ ಓವರ್‌ನ ಐದನೇ ಎಸೆತದಲ್ಲಿ ಟಿಮ್ ಸೌಥಿಗೆ ಕ್ಯಾಚ್ ನೀಡುವ ಮೂಲಕ ಔಟ್ ಆದರು. ಇನ್ನುಳಿದಂತೆ ಮತ್ತೋರ್ವ ಆರಂಭಿಕ ಆಟಗಾರ ಶಿಖರ್ ಧವನ್ 16 ರನ್, ಲಿಯಾಮ್ ಲಿವಿಂಗ್‌ಸ್ಟನ್ 19 ರನ್, ರಾಜ್ ಬಾವಾ 11 ರನ್, ಶಾರುಖ್ ಖಾನ್ 0, ಹರ್‌ಪ್ರೀತ್ ಬ್ರಾರ್ 14 ರನ್, ರಾಹುಲ್ ಚಹರ್ ೦, ಕಗಿಸೊ ರಬಾಡಾ 25 ರನ್, ಅರ್ಷದೀಪ್ ಸಿಂಗ್ ೦ ಮತ್ತು ಓಡಿಯನ್ ಸ್ಮಿತ್ ಅಜೇಯ 9 ರನ್ ಗಳಿಸಿದ್ದರು. ಈ ಮೂಲಕ ಆರಂಭದಲ್ಲಿ ಭಾನುಕಾ ರಾಜಪಕ್ಸೆ ಅಬ್ಬರದ ಬ್ಯಾಟಿಂಗ್ ಮೂಲಕ ದೊಡ್ಡ ಮೊತ್ತ ಕಲೆಹಾಕುವ ಭರವಸೆ ಮೂಡಿಸಿದ್ದ ಪಂಜಾಬ್ ಕಿಂಗ್ಸ್ 18.2 ಓವರ್‌ಗಳಲ್ಲೇ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 137 ರನ್ ಗಳಿಸಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 138 ರನ್‌ಗಳ ಗುರಿ ನೀಡಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಬೌಲರ್ ಉಮೇಶ್ ಯಾದವ್ 4 ವಿಕೆಟ್ ಪಡೆದರೆ, ಟಿಮ್ ಸೌಥಿ 2 ವಿಕೆಟ್ ಹಾಗೂ ಶಿವಮ್ ಮಾವಿ, ಸುನಿಲ್ ನರೈನ್ ಹಾಗೂ ಆಂಡ್ರೆ ರಸೆಲ್ ತಲಾ ಒಂದೊಂದು ವಿಕೆಟ್ ಪಡೆದರು.
ಹೀಗೆ ಮೊದಲ ಪಂದ್ಯದಲ್ಲಿ ಅಬ್ಬರಿಸಿದ್ದ ಪಂಜಾಬ್ ಕಿಂಗ್ಸ್ ಬ್ಯಾಟ್ಸ್‌ಮನ್‌ಗಳನ್ನು ಸಾಮಾನ್ಯ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾದ ಕೋಲ್ಕತ್ತಾ ನೈಟ್ ರೈಡರ್ಸ್ ಆಂಡ್ರೆ ರಸೆಲ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. 31 ಎಸೆತಗಳನ್ನು ಎದುರಿಸಿದ ರಸೆಲ್ ಅಜೇಯ 70 ರನ್ ಬಾರಿಸಿದ್ದು, 2 ಬೌಂಡರಿ ಮತ್ತು 8 ಸಿಕ್ಸರ್ ಚಚ್ಚಿ ಇನ್ನೂ 33 ಎಸೆತಗಳು ಬಾಕಿ ಇರುವಾಗಲೇ ಕೆಕೆಆರ್ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಅಜಿಂಕ್ಯ ರಹಾನೆ 12 ಮತ್ತು ವೆಂಕಟೇಶ್ ಐಯ್ಯರ್ 3 ರನ್ ಗಳಿಸಿದರು. ಇನ್ನುಳಿದಂತೆ ನಾಯಕ ಶ್ರೇಯಸ್ ಐಯ್ಯರ್ 26 ರನ್ ಗಳಿಸಿದರೆ, ನಿತೀಶ್ ರಾಣಾ ಶೂನ್ಯ ಸುತ್ತಿದ್ದಾರೆ. ಇನ್ನು ರಸೆಲ್ ಅಬ್ಬರದ ಆಟಕ್ಕೆ ಸಾಥ್ ನೀಡಿದ ಸ್ಯಾಮ್ ಬಿಲ್ಲಿಂಗ್ಸ್ ಅಜೇಯ 24 ರನ್ ಗಳಿಸಿದರು. ಈ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ 14.3 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಹಾಗೂ ಈ ಗೆಲುವಿನೊಂದಿಗೆ ಕೋಲ್ಕತ್ತಾ ನೈಟ್ ರೈಡರ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ಆಡುವ ಬಳ
ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಶ್ರೇಯಸ್ ಅಯ್ಯರ್(ನಾಯಕ), ಸ್ಯಾಮ್ ಬಿಲ್ಲಿಂಗ್ಸ್(ವಿಕೆಟ್ ಕೀಪರ್), ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್, ಶಿವಂ ಮಾವಿ, ವರುಣ್ ಚಕ್ರವರ್ತಿ
ಪಂಜಾಬ್ ಕಿಂಗ್ಸ್ ಆಡುವ ಬಳಗ: ಮಯಾಂಕ್ ಅಗರ್ವಾಲ್ ( ನಾಯಕ ), ಶಿಖರ್ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಭಾನುಕಾ ರಾಜಪಕ್ಸೆ ( ವಿಕೆಟ್ ಕೀಪರ್ ), ಶಾರುಖ್ ಖಾನ್, ಓಡಿಯನ್ ಸ್ಮಿತ್, ರಾಜ್ ಬಾವಾ, ಅರ್ಷ್‌ದೀಪ್ ಸಿಂಗ್, ಹರ್‌ಪ್ರೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಾಹರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications