KKR vs PBKS: ನಿಮ್ಮ ಡ್ರೀಮ್ ಟೀಮ್‌ನಲ್ಲಿ ಈ 3 ಆಟಗಾರರಿದ್ದರೆ ಸೋಲು ಖಚಿತ! ಈತನಿಗೆ ನಾಯಕತ್ವ ನೀಡಿ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭವಾಗಿದ್ದು, ಎಲ್ಲಾ ತಂಡಗಳು ತಮ್ಮ ಮೊದಲ ಪಂದ್ಯಗಳನ್ನು ಆಡಿ ಮುಗಿಸಿದ ನಂತರ ಟೂರ್ನಿಯ ರೋಚಕತೆ ಮತ್ತಷ್ಟು ಹೆಚ್ಚಾಗಿದೆ. ಇನ್ನು ಕಳೆದ ಬಾರಿಯ ಟೂರ್ನಿಯಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಚೊಚ್ಚಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ಶುಭಾರಂಭವನ್ನು ಮಾಡಿ ನಂತರ ತನ್ನ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋಲನ್ನು ಅನುಭವಿಸಿದೆ. ಇತ್ತ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಯಾಂಕ್ ಅಗರ್ವಾಲ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ಪಂಜಾಬ್ ಕಿಂಗ್ಸ್ ಟೂರ್ನಿಯಲ್ಲಿನ ತನ್ನ ಚೊಚ್ಚಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಶುಭಾರಂಭವನ್ನು ಮಾಡಿದ್ದು, ತನ್ನ ಎರಡನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಾಡುತ್ತಿದೆ.
ಇನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಈ ಪಂದ್ಯ ಇಂದು ( ಏಪ್ರಿಲ್ 1 ) ಮುಂಬೈನ ವಾಂಖೆಡೆ ಕ್ರಿಕಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಂಜೆ 7.30ಕ್ಕೆ ಆರಂಭವಾಗಲಿದೆ. ತನ್ನ ಮೊದಲ ಪಂದ್ಯದಲ್ಲಿ ಗೆಲುವನ್ನು ಕಂಡಿರುವ ಪಂಜಾಬ್ ಕಿಂಗ್ಸ್ ಈ ಪಂದ್ಯದಲ್ಲಿ ಜಯ ಸಾಧಿಸುವುದರ ಮೂಲಕ ಸತತ ಗೆಲುವು ದಾಖಲಿಸುವ ಯೋಜನೆಯಲ್ಲಿದ್ದರೆ, ಇತ್ತ ತನ್ನ ಪ್ರಥಮ ಪಂದ್ಯದಲ್ಲಿ ಗೆದ್ದು, ಎರಡನೇ ಪಂದ್ಯದಲ್ಲಿ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯಲಿರುವ ತನ್ನ ಮೂರನೇ ಪಂದ್ಯದಲ್ಲಿ ಗೆದ್ದು ಯಶಸ್ಸಿನ ಹಾದಿಗೆ ಮರಳುವ ತವಕದಲ್ಲಿದೆ. ಹೀಗೆ ಈ ಪಂದ್ಯದಲ್ಲಿ ಇತ್ತಂಡಗಳು ಗೆಲುವು ಸಾಧಿಸುವುದರ ಕುರಿತು ಚಿಂತನೆ ನಡೆಸುತ್ತಿದ್ದರೆ, ಕ್ರಿಕೆಟ್ ಪ್ರೇಮಿಗಳು ಮಾತ್ರ ಎರಡೂ ತಂಡಗಳ ಆಟಗಾರರನ್ನೊಳಗೊಂಡಂತೆ ಡ್ರೀಮ್ ಟೀಮ್ ರಚಿಸಿ ಉತ್ತಮ ತಂಡಗಳನ್ನು ರಚಿಸುತ್ತಿದ್ದಾರೆ.
ಹೀಗೆ ಕ್ರಿಕೆಟ್ ಪ್ರೇಮಿಗಳು ರಚಿಸುತ್ತಿರುವ ಡ್ರೀಮ್ ಟೀಮ್‌ನಲ್ಲಿ ಯಾವ ಆಟಗಾರರು ಉತ್ತಮ ಪ್ರದರ್ಶನ ನೀಡಬಲ್ಲರು, ಯಾವ ತಂಡ ಕಳಪೆ ಪ್ರದರ್ಶನ ನೀಡಬಹುದು, ಯಾವ ಆಟಗಾರನನ್ನು ತಂಡಕ್ಕೆ ಸೇರಿಸಿಕೊಳ್ಳಬೇಕು ಮತ್ತು ಯಾವ ಆಟಗಾರರನ್ನು ತಂಡದಿಂದ ಹೊರಗಿಡಬೇಕು ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ.

ಈ ಮೂವರು ಆಟಗಾರರನ್ನು ಹೊರಗಿಡಿ
ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ನೀವು ರಚಿಸುತ್ತಿರುವ ಡ್ರೀಮ್ ಟೀಮ್‌ನಿಂದ ಶೆಲ್ಡನ್ ಜಾಕ್ಸನ್, ರಾಜ್ ಬಾವಾ ಮತ್ತು ಸಂದೀಪ್ ಶರ್ಮ ಈ ಮೂವರು ಆಟಗಾರರನ್ನು ಹೊರಗಿಡುವುದು ಉತ್ತಮ ಎನ್ನಬಹುದು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಶೆಲ್ಡನ್ ಜಾಕ್ಸನ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪ್ರಥಮ ಪಂದ್ಯದಲ್ಲಿ ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿಸಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಎರಡನೇ ಪಂದ್ಯದಲ್ಲಿ ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿಸಿತ್ತು. ಹೀಗೆ ಮೇಲಿನ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಅವಕಾಶ ಪಡೆದುಕೊಳ್ಳದ ಶೆಲ್ಡನ್ ಜಾಕ್ಸನ್ ಬದಲು ಬೇರೆ ವಿಕೆಟ್ ಕೀಪರ್‌ನ್ನು ನಿಮ್ಮ ಡ್ರೀಮ್ ಟೀಮ್‌ನಲ್ಲಿ ಆರಿಸಿಕೊಳ್ಳುವುದು ಉತ್ತಮ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿ ಶೂನ್ಯ ಸುತ್ತಿದ್ದ ಪಂಜಾಬ್ ಕಿಂಗ್ಸ್ ತಂಡದ ರಾಜ್ ಬಾವಾ ಈ ಪಂದ್ಯದಲ್ಲಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿದ್ದು, ಬದಲಾಗಿ ಕಗಿಸೊ ರಬಾಡ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 37 ರನ್ ನೀಡಿ ಯಾವುದೇ ವಿಕೆಟ್ ಪಡೆಯದೇ ದುಬಾರಿಯಾಗಿದ್ದ ಸಂದೀಪ್ ಶರ್ಮಾರನ್ನು ಇಂದಿನ ಪಂದ್ಯದ ಡ್ರೀಮ್ ಟೀಮ್‌ನಲ್ಲಿ ಕೈಬಿಡುವುದು ಉತ್ತಮ.

ನಾಯಕ ಮತ್ತು ಉಪನಾಯಕ
ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯಕ್ಕೆ ನೀವು ರಚಿಸುವ ಪಂದ್ಯಕ್ಕೆ ಮಯಾಂಕ್ ಅಗರ್ವಾಲ್ ಅಥವಾ ಶ್ರೇಯಸ್ ಐಯ್ಯರ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡುವುದು ಉತ್ತಮ. ಹಾಗೂ ಭಾನುಕಾ ರಾಜಪಕ್ಸ ಅಥವಾ ಅಜಿಂಕ್ಯಾ ರಹಾನೆಗೆ ಉಪನಾಯಕನ ಸ್ಥಾನ ನೀಡುವುದು ಉತ್ತಮ.

ಡ್ರೀಮ್ ಟೀಮ್ ಹೀಗಿರಲಿ
ತಂಡ 1: ಭಾನುಕಾ ರಾಜಪಕ್ಸೆ (ಉಪನಾಯಕ) , ಶಿಖರ್ ಧವನ್, ಅಜಿಂಕ್ಯ ರಹಾನೆ, ಮಯಾಂಕ್ ಅಗರ್ವಾಲ್ (ನಾಯಕ), ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ಆಂಡ್ರೆ ರಸೆಲ್, ಒಡಿಯನ್ ಸ್ಮಿತ್, ಟಿಮ್ ಸೌಥಿ, ಉಮೇಶ್ ಯಾದವ್, ರಾಹುಲ್ ಚಾಹರ್
ತಂಡ 2: ಅಜಿಂಕ್ಯ ರಹಾನೆ (ಉಪನಾಯಕ), ಮಯಾಂಕ್ ಅಗರ್ವಾಲ್, ಶ್ರೇಯಸ್ ಅಯ್ಯರ್ (ನಾಯಕ), ಶಾರುಖ್ ಖಾನ್, ಸುನಿಲ್ ನರೈನ್, ಲಿಯಾಮ್ ಲಿವಿಂಗ್ಸ್ಟೋನ್, ವೆಂಕಟೇಶ್ ಅಯ್ಯರ್, ಟಿಮ್ ಸೌಥಿ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications