PBKS vs KKR: 4 ವಿಕೆಟ್ ಪಡೆದ ಉಮೇಶ್ ಯಾದವ್; 137 ರನ್‌ಗಳಿಗೆ ಆಲ್ಔಟ್ ಆದ ಪಂಜಾಬ್ ಕಿಂಗ್ಸ್

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 8ನೇ ಪಂದ್ಯ ಇಂದು ( ಏಪ್ರಿಲ್ 1 ) ನಡೆಯುತ್ತಿದ್ದು, ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಟ ನಡೆಸುತ್ತಿವೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಚೊಚ್ಚಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿದು ಜಯ ಗಳಿಸಿ ಅಬ್ಬರಿಸಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ನಂತರ ನಡೆದ ತನ್ನ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೆಣಸಾಟ ನಡೆಸಿ ಸೋಲನ್ನು ಅನುಭವಿಸಿತ್ತು. ಇತ್ತ ಟೂರ್ನಿಯ ತನ್ನ ಚೊಚ್ಚಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಣಕ್ಕಿಳಿದಿದ್ದ ಪಂಜಾಬ್ ಕಿಂಗ್ಸ್ ಬೃಹತ್ ಮೊತ್ತವನ್ನು ಬೆನ್ನತ್ತಿ ಜಯ ಸಾಧಿಸಿತ್ತು. ಹೀಗೆ ಮೊದಲ ಪಂದ್ಯದಲ್ಲಿ ಗೆದ್ದು ಎರಡನೇ ಪಂದ್ಯದಲ್ಲಿ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತನ್ನ ಈ ಮೂರನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿ ಯಶಸ್ಸಿನ ಹಾದಿಗೆ ಮರಳುವ ಯೋಜನೆಯಲ್ಲಿ ಕಣಕ್ಕಿಳಿದಿದ್ದರೆ, ಟೂರ್ನಿಯಲ್ಲಿ ತಾನಾಡಿರುವ ಮೊದಲ ಪಂದ್ಯದಲ್ಲಿ ಅಬ್ಬರದ ಜಯ ಸಾಧಿಸಿರುವ ಪಂಜಾಬ್ ಕಿಂಗ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಈ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ತಲುಪುವತ್ತ ಕಣ್ಣಿಟ್ಟಿದೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಐಯ್ಯರ್ ಬೌಲಿಂಗ್ ಆಯ್ದುಕೊಂಡು ಎದುರಾಳಿ ಪಂಜಾಬ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಹೀಗೆ ಮೊದಲು ಬ್ಯಾಟಿಂಗ್ ಆರಂಭಿಸಿದ ಪಂಜಾಬ್ ಕಿಂಗ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್ ಅಗರ್ವಾಲ್ ಮೊದಲ ಓವರ್‌ನಲ್ಲಿಯೇ 5 ಓವರ್‌ಗಳಲ್ಲಿ 1 ರನ್ ಗಳಿಸಿ ಔಟ್ ಆದರು. ಹೀಗೆ ಆರಂಭಿಕ ಆಘಾತ ಅನುಭವಿಸಿದ ಪಂಜಾಬ್ ಕಿಂಗ್ಸ್ ಪರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಭಾನುಕಾ ರಾಜಪಕ್ಸೆ 9 ಎಸೆತಗಳಿಗೆ 31 ರನ್ ಚಚ್ಚಿದರು. ಎರಡನೇ ಓವರ್‌ನ ಅಂತಿಮ ಎಸೆತದಲ್ಲಿ ಟಿಮ್ ಸೌಥಿಗೆ ಬೌಂಡರಿ ಬಾರಿಸಿದರು, ಮೂರನೇ ಓವರ್ ಮಾಡಿದ ಉಮೇಶ್ ಯಾದವ್‌ಗೂ ಬೌಂಡರಿ ಬಾರಿಸಿದರು ಹಾಗೂ ಪಂದ್ಯದ ನಾಲ್ಕನೇ ಓವರ್ ಬೌಲಿಂಗ್ ಮಾಡಿದ ಶಿವಮ್ ಮಾವಿಗೆ ಒಂದು ಬೌಂಡರಿ ಮತ್ತು ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿ ಓವರ್‌ನ ಐದನೇ ಎಸೆತದಲ್ಲಿ ಟಿಮ್ ಸೌಥಿಗೆ ಕ್ಯಾಚ್ ನೀಡುವ ಮೂಲಕ ಔಟ್ ಆದರು.
ಇನ್ನುಳಿದಂತೆ ಮತ್ತೋರ್ವ ಆರಂಭಿಕ ಆಟಗಾರ ಶಿಖರ್ ಧವನ್ 16 ರನ್, ಲಿಯಾಮ್ ಲಿವಿಂಗ್‌ಸ್ಟನ್ 19 ರನ್, ರಾಜ್ ಬಾವಾ 11 ರನ್, ಶಾರುಖ್ ಖಾನ್ 0, ಹರ್‌ಪ್ರೀತ್ ಬ್ರಾರ್ 14 ರನ್, ರಾಹುಲ್ ಚಹರ್ ೦, ಕಗಿಸೊ ರಬಾಡಾ 25 ರನ್, ಅರ್ಷದೀಪ್ ಸಿಂಗ್ ೦ ಮತ್ತು ಓಡಿಯನ್ ಸ್ಮಿತ್ ಅಜೇಯ 9 ರನ್ ಗಳಿಸಿದ್ದರು. ಈ ಮೂಲಕ ಆರಂಭದಲ್ಲಿ ಭಾನುಕಾ ರಾಜಪಕ್ಸೆ ಅಬ್ಬರದ ಬ್ಯಾಟಿಂಗ್ ಮೂಲಕ ದೊಡ್ಡ ಮೊತ್ತ ಕಲೆಹಾಕುವ ಭರವಸೆ ಮೂಡಿಸಿದ್ದ ಪಂಜಾಬ್ ಕಿಂಗ್ಸ್ 18.2 ಓವರ್‌ಗಳಲ್ಲೇ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 137 ರನ್ ಗಳಿಸಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 138 ರನ್‌ಗಳ ಗುರಿ ನೀಡಿದೆ.
ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಬೌಲರ್ ಉಮೇಶ್ ಯಾದವ್ 4 ವಿಕೆಟ್ ಪಡೆದರೆ, ಟಿಮ್ ಸೌಥಿ 2 ವಿಕೆಟ್ ಹಾಗೂ ಶಿವಮ್ ಮಾವಿ, ಸುನಿಲ್ ನರೈನ್ ಹಾಗೂ ಆಂಡ್ರೆ ರಸೆಲ್ ತಲಾ ಒಂದೊಂದು ವಿಕೆಟ್ ಪಡೆದರು.
ಇನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ಆಡುವ ಬಳಗ ಈ ಕೆಳಕಂಡಂತಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಶ್ರೇಯಸ್ ಅಯ್ಯರ್(ನಾಯಕ), ಸ್ಯಾಮ್ ಬಿಲ್ಲಿಂಗ್ಸ್(ವಿಕೆಟ್ ಕೀಪರ್), ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್, ಶಿವಂ ಮಾವಿ, ವರುಣ್ ಚಕ್ರವರ್ತಿ
ಪಂಜಾಬ್ ಕಿಂಗ್ಸ್ ಆಡುವ ಬಳಗ: ಮಯಾಂಕ್ ಅಗರ್ವಾಲ್ ( ನಾಯಕ ), ಶಿಖರ್ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಭಾನುಕಾ ರಾಜಪಕ್ಸೆ ( ವಿಕೆಟ್ ಕೀಪರ್ ), ಶಾರುಖ್ ಖಾನ್, ಓಡಿಯನ್ ಸ್ಮಿತ್, ರಾಜ್ ಬಾವಾ, ಅರ್ಷ್‌ದೀಪ್ ಸಿಂಗ್, ಹರ್‌ಪ್ರೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಾಹರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications