For Quick Alerts
ALLOW NOTIFICATIONS  
For Daily Alerts
 

KKR vs RR: ಬಟ್ಲರ್ ಮತ್ತೊಂದು ಶತಕ: ಕೊಲ್ಕತ್ತಾಗೆ ಬೃಹತ್ ಮೊತ್ತ ಗುರಿ ನೀಡಿದ ರಾಜಸ್ಥಾನ್

IPL 2022, KKR vs RR: Jos Buttler century, KKR need 218 runs to win

ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಸಂಪೂರ್ಣ ಮೇಲುಗೈ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ರಾಜಸ್ಥಾನ್ ರಾಯಲ್ಸ್ ತಂಡದ ಪರವಾಗಿ ಜೋಸ್ ಬಟ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ್ದು ಬೃಹತ್ ಮೊತ್ತಕ್ಕೆ ಕಾರಣವಾಗಿದ್ದಾರೆ. ಈ ಬಾರಿಯ ಆವೃತ್ತಿಯಲ್ಲಿ ಜೋಸ್ ಬಟ್ಲರ್ 2ನೇ ಶತಕ ಸಿಡಿಸಿದ್ದು ಭರ್ಜರಿ ಫಾರ್ಮ್ ಮುಂದುವರಿಸಿದ್ದಾರೆ.

ಜೋಸ್ ಬಟ್ಲರ್ ಈ ಪಂದ್ಯದಲ್ಲಿ ಒಟ್ಟು 61 ಎಸೆತಗಳನ್ನು ಎದುರಿಸಿದ್ದು 103 ರನ್‌ಗಳಿಸಿದ್ದಾರೆ. ಸ್ಪೋಟಕ ಬ್ಯಾಟಿಂಗ್‌ನ ಕಾರಣದಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 217 ರನ್‌ಗಳಿಸಿದೆ. ಈ ಮೂಲಕ ಬೃಹತ್ ಗುರಿಯನ್ನು ಕೆಕೆಆರ್ ಮುಂದಿಟ್ಟಿದೆ. ಬಟ್ಲರ್ ಹೊರತುಪಡಿಸಿ ಆರ್‌ಆರ್ ಪರವಾಗಿ ಪಡಿಕ್ಕಲ್ 24 ರನ್‌ಗಳಿಸಿದರೆ ಸಂಜು ಸ್ಯಾಮ್ಸನ್ 38 ರನ್‌ಗಳಿಸಿದರು. ಶಿಮ್ರಾನ್ ಹೇಟ್ಮೇಯರ್ 26 ರನ್‌ಗಳಿಸಿ ಅಜೇಯವಾಗುಳಿದರು.

ರಾಜಸ್ಥಾನ್ ರಾಯಲ್ಸ್ ತಂಡ ನೀಡಿರುವ ಈ ಬೃಹತ್ ಮೊತ್ತವನ್ನು ಕೆಕೆಆರ್ ಬೆನ್ನಟ್ಟಲು ಆರಂಭಿಸಿದೆ. ಸತತ ಎರಡು ಸೋಲನ್ನು ಅನುಭವಿಸಿರುವ ಕೆಕೆಆರ್ ಈ ಬೃಹತ್ ಮೊತ್ತವನ್ನು ಬೆನ್ನಟ್ಟಿ ಸೋಲಿನ ಸರಪಳಿ ಮುರಿಯಲಿದೆಯಾ ಎಂಬುದು ಕುತೂಹಲ ಮೂಡಿಸಿದೆ.

ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಕರುಣ್ ನಾಯರ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಓಬೇದ್ ಮೆಕಾಯ್, ಯುಜ್ವೇಂದ್ರ ಚಹಾಲ್
ಬೆಂಚ್: ಕುಲದೀಪ್ ಸೇನ್, ಜೇಮ್ಸ್ ನೀಶಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ನಾಥನ್ ಕೌಲ್ಟರ್-ನೈಲ್, ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಡೇರಿಲ್ ಮಿಚೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಯಶಸ್ವಿ ಜೈಸ್ವಾಲ್, ಅನುನಯ್ ಸಿಂಗ್, ಧ್ರುವ ಜುರೆಲ್, ಶುಭಂ ಗರ್ವಾಲ್

ಕೊಲ್ಕತ್ತಾ ನೈಟ್ ರೈಡರ್ಸ್: ವೆಂಕಟೇಶ್ ಅಯ್ಯರ್, ಆರೋನ್ ಫಿಂಚ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಆಂಡ್ರೆ ರಸೆಲ್, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಶಿವಂ ಮಾವಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ
ಬೆಂಚ್: ಅಮನ್ ಹಕೀಮ್ ಖಾನ್, ಟಿಮ್ ಸೌಥಿ, ಸ್ಯಾಮ್ ಬಿಲ್ಲಿಂಗ್ಸ್, ಮೊಹಮ್ಮದ್ ನಬಿ, ಚಾಮಿಕಾ ಕರುಣಾರತ್ನೆ, ಅಜಿಂಕ್ಯ ರಹಾನೆ, ಬಾಬಾ ಇಂದ್ರಜಿತ್, ರಿಂಕು ಸಿಂಗ್, ಅನುಕುಲ್ ರಾಯ್, ಪ್ರಥಮ್ ಸಿಂಗ್, ಅಭಿಜಿತ್ ತೋಮರ್, ಅಶೋಕ್ ಶರ್ಮಾ, ರಮೇಶ್ ಕುಮಾರ್, ಹರ್ಷಿತ್ ರಾಣಾ

Story first published: Tuesday, April 19, 2022, 14:24 [IST]
Other articles published on Apr 19, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+