
ಐಪಿಎಲ್ 2022ರ ಆವೃತ್ತಿಯ 47ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 153 ರನ್‌ಗಳ ಗುರಿ ನಿಗದಿಪಡಿಸಿದೆ. ರಾಜಸ್ಥಾನ್ ರಾಯಲ್ಸ್ ತಂಡ ನೀಡಿದ ಈ ಗುರಿಯನ್ನು ಬೆನ್ನಟ್ಟಲು ಆರಂಭಿಸಿದೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ.
ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ದೇವದತ್ ಪಡಿಕ್ಕಲ್ ಕೇವಲ 2 ರನ್‌ಗಳಿಗೆ ಔಟ್ ಆದರು. ಟೂರ್ನಿಯಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಜೋಸ್ ಬಟ್ಲರ್ 22 ರನ್‌ಗಳಿಗೆ ವಿಕೆಟ್ ಕಳೆದುಕೊಂಡಿದ್ದಾರೆ. ನಾಯಕ ಸಂಜು ಸ್ಯಾಮ್ಸನ್ 54 ರನ್‌ಗಳ ಕೊಡುಗೆ ನೀಡಿದ್ದಾರೆ. ಮತ್ತೊಮ್ಮೆ ತಂಡದಲ್ಲಿ ಅವಕಾಶ ಪಡೆದುಕೊಂಡ ಕರುಣ್ ನಾಯಕರ್ 13 ರನ್‌ಗಳಿಸಿದರೆ ರಿಯಾನ್ ಪರಾಗ್ 19, ಹೇಟ್ಮೇಯರ್ 27 ರನ್‌ಗಳ ಕೊಡುಗೆ ನೀಡಿದ್ದಾರೆ. ಆರ್ ಅಶ್ವಿನ್ 6 ರನ್‌ಗಳಿಸಿ ಔಟಾಗದೆ ಉಳಿದಿದ್ದಾರೆ.
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್/ ನಾಯಕ), ಕರುಣ್ ನಾಯರ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಕುಲದೀಪ್ ಸೇನ್
ಬೆಂಚ್: ಜೇಮ್ಸ್ ನೀಶಮ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಓಬೇದ್ ಮೆಕಾಯ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಯಶಸ್ವಿ ಜೈಸ್ವಾಲ್, ಅನುನಯ್ ಸಿಂಗ್, ಧ್ರುವ್ ಜುರೆಲ್, ಶುಭಂ ಗರ್ವಾಲ್, ಡೇರಿಲ್ ಮಿಚೆಲ್
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಆರನ್ ಫಿಂಚ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್ (ನಾಯಕ), ಬಾಬಾ ಇಂದ್ರಜಿತ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಅನುಕುಲ್ ರಾಯ್, ಆಂಡ್ರೆ ರಸೆಲ್, ರಿಂಕು ಸಿಂಗ್, ಉಮೇಶ್ ಯಾದವ್, ಟಿಮ್ ಸೌಥಿ, ಶಿವಂ ಮಾವಿ
ಬೆಂಚ್: ಅಜಿಂಕ್ಯ ರಹಾನೆ, ಮೊಹಮ್ಮದ್ ನಬಿ, ಸ್ಯಾಮ್ ಬಿಲ್ಲಿಂಗ್ಸ್, ಪ್ಯಾಟ್ ಕಮಿನ್ಸ್, ಶೆಲ್ಡನ್ ಜಾಕ್ಸನ್, ಚಾಮಿಕಾ ಕರುಣಾರತ್ನೆ, ಪ್ರಥಮ್ ಸಿಂಗ್, ಅಭಿಜಿತ್ ತೋಮರ್, ವರುಣ್ ಚಕ್ರವರ್ತಿ, ಅಮನ್ ಹಕೀಮ್ ಖಾನ್, ಅಶೋಕ್ ಶರ್ಮಾ, ರಮೇಶ್ ಕುಮಾರ್, ವೆಂಕಟೇಶ್ ಅಯ್ಯರ್, ಹರ್ಷಿತ್ ರಾಣಾ