For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ರಾಹುಲ್ ಅರ್ಧ ಶತಕ: ಟಿ20 ಕ್ರಿಕೆಟ್‌ನಲ್ಲಿ ಕನ್ನಡಿಗನಿಂದ ವಿಶೇಷ ದಾಖಲೆ

IPL 2022: KL Rahul Completed 50 Fifties In T20 Cricket Becomes 5th Indian cricketer

ಲಕ್ನೋ ಸೂಪರ್ ಜೈಂಟ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿದ್ದು ಟೂರ್ನಿಯಲ್ಲಿ ಎರಡನೇ ಗೆಲುವಿನ ರುಚಿ ಕಂಡಿದೆ. ಆಘಾತಕಾರಿ ಆರಂಭದ ನಂತರ ನಾಯಕ ಕೆಎಲ್ ರಾಹುಲ್ ಹಾಗೂ ದೀಪಕ್ ಹೂಡಾ ಅವರ ಅದ್ಭುತ ಪ್ರದರ್ಶನದಿಂದಾಗಿ ಉತ್ತಮ ಮೊತ್ತ ಗಳಿಸಿದ ಕೆಎಲ್ ರಾಹುಲ್ ಪಡೆ ಬಳಿಕ ಈ ಮೊತ್ತವನ್ನು ರಕ್ಷಣೆ ಮಾಡುವಲ್ಲಿ ಸಫಲವಾಗಿದೆ. ಈ ಗೆಲುವಿನ ಜೊತೆಗೆ ಟಿ20 ಕ್ರಿಕೆಟ್‌ನಲ್ಲಿ ಕೆಎಲ್ ರಾಹುಲ್ ಮಹತ್ವದ ಸಾಧನೆಯೊಂದನ್ನು ಮಾಡಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 5ನೇ ಕ್ರಿಕೆಟಿಗ ಎನಿಸಿದ್ದಾರೆ ಕೆಎಲ್ ರಾಹುಲ್.

ಕನ್ನಡಿಗ ಕೆಎಲ್ ರಾಹುಲ್ ಈ ಬಾರಿಯ ಐಪಿಎಲ್‌ನಲ್ಲಿಯೂ ಅದ್ಭುತ ಫಾರ್ಮ್ ಮುಂದುವರಿಸಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರಂಭೀಕ ಆಘಾತ ಅನುಭವಿಸಿದ ನಂತರ ಜವಾಬ್ಧಾರಿಯುತ ಪ್ರದರ್ಶನ ನೀಡಿದ ಕೆಎಲ್ ರಾಹುಲ್ ಭರ್ಜರಿ ಅರ್ಧ ಶತಕವನ್ನು ಸಿಡಿಸಿದ್ದಾರೆ. ಈ ಅರ್ಧ ಶತಕ ವಿಶೇಷ ಮೈಲುಗಲ್ಲಿನ ಅರ್ಧ ಶತಕವಾಗಿದೆ ಎಂಬುದು ವಿಶೇಷ. ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ಈ ಮೂಲಕ 50ನೇ ಅರ್ಧ ಶತಕವನ್ನು ಸಿಡಿಸಿದಂತಾಗಿದೆ. ಈ ಸಾಧನೆ ಮಾಡಿದ ಭಾರತದ 5ನೇ ದಾಂಡಿಗ ಎಂಬ ಹೆಗ್ಗಳಿಕೆಗೆ ಕೆಎಲ್ ರಾಹುಲ್ ಪಾತ್ರರಾಗಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯತದಲ್ಲಿ ಕೆಎಲ್ ರಾಹುಲ್ 50 ಎಸೆತಗಳನ್ನು ಎದುರಿಸಿದ್ದು 68 ರನ್‌ಗಳಿಸಿದರು. ಅಲ್ಲದೆ ದೀಪಕ್ ಹೂಡಾ ಜೊತೆಗೆ ಅದ್ಭುತ ಜೊತೆಯಾಟದಲ್ಲಿ ಭಾಗಿಯಾದರು. ಈ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರಾಹುಲ್ ಪಡೆ ಸವಾಲಿನ ಮೊತ್ತ ಗಳಿಸಲು ಸಾಧ್ಯವಾಗಿದೆ. ಅಂತಿಮವಾಗಿ ಬೌಲಿಂಗ್‌ನಲ್ಲಿಯೂ ಮಿಂಚಿದ ಲಕ್ನೋ ತಂಡ 12 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಎರಡನೇ ಗೆಲುವು ಕಂಡಿದೆ ಲಕ್ನೋ ಸೂಪರ್ ಜೈಂಟ್ಸ್ ತಂಡ.

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ರೊಮಾರಿಯೋ ಶೆಫರ್ಡ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್
ಬೆಂಚ್ ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಗ್ಲೆನ್ ಫಿಲಿಪ್ಸ್, ಶಶಾಂಕ್ ಸಿಂಗ್, ರವಿಕುಮಾರ್ ಸಮರ್ಥ್, ವಿಷ್ಣು ವಿನೋದ್, ಪ್ರಿಯಾಂ ಗಾರ್ಗ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ, ಮಾರ್ಕೊ ಜಾನ್ಸೆನ್, ಸೌರಭ್ ದುಬೆ

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಎವಿನ್ ಲೂಯಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಆಂಡ್ರ್ಯೂ ಟೈ, ರವಿ ಬಿಷ್ಣೋಯ್, ಅವೇಶ್ ಖಾನ್
ಬೆಂಚ್: ಶಹಬಾಜ್ ನದೀಮ್, ಕೃಷ್ಣಪ್ಪ ಗೌತಮ್, ಅಂಕಿತ್ ರಾಜ್‌ಪೂತ್, ಮೊಹ್ಸಿನ್ ಖಾನ್, ಕರಣ್ ಶರ್ಮಾ, ಮಯಾಂಕ್ ಯಾದವ್, ಕೈಲ್ ಮೇಯರ್ಸ್, ಮನನ್ ವೋಹ್ರಾ, ದುಷ್ಮಂತ ಚಮೀರಾ

ಈ ಎಡವಟ್ಟು,ವೀಕ್ನೆಸ್ ಗಳನ್ನ CSK ಸರಿಪಡಿಸಿಕೊಂಡ್ರೆ ಬಚಾವ್!!ಇಲ್ದಿದ್ರೆ....

Story first published: Tuesday, April 5, 2022, 10:54 [IST]
Other articles published on Apr 5, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+