Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs GT: ಐಪಿಎಲ್‌ನಲ್ಲಿ ಮೊದಲ ಶೂನ್ಯ ಸುತ್ತಿದ ಕೆಎಲ್ ರಾಹುಲ್

IPL 2022: KL Rahul out for duck 1st time in 6 years of IPL Career: watch
KL Rahul ಸೋತ ನಂತರ ಹೇಳಿದ್ದೇನು? | Oneindia Kannada

ಐಪಿಎಲ್ 15ನೇ ಆವೃತ್ತಿಯ ಮೂಲಕ ಮೊದಲ ಬಾರಿಗೆ ಟೂರ್ನಿಯಲ್ಲಿ ಕಣಕ್ಕಿಳಿದಿರುವ ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸೋಮವಾರ ಮುಖಾಮುಖಿಯಾಗಿದೆ. ತೀವ್ರ ಪೈಪೋಟಿಯಿಂದ ಕೂಡಿದ್ದ ಈ ಪಂದ್ಯದಲ್ಲಿ ಹಾರ್ದಿಲ್ ಪಾಂಡ್ಯಾ ನೇತೃತ್ವದ ಗುಜರಾತ್ ಟೈಟನ್ಸ್ ತಂಡ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ರೋಚಕವಾಗಿ ಮಣಿಸಿದೆ.

ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಗೋಲ್ಡನ್ ಡಕ್‌ಗೆ ಬಲಿಯಾಗಿದ್ದಾರೆ. ವಿಶೇಷವೆಂದರೆ ಕಳೆದ ಆರು ವರ್ಷಗಳಿಂದ ಐಪಿಎಲ್‌ನ ಭಾಗವಾಗಿರುವ ಕೆಎಲ್ ರಾಹುಲ್ ಇದೇ ಮೊದಲ ಬಾರಿಗೆ ಶೂನ್ಯ ಸುತ್ತಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಪಂದ್ಯದ ಪ್ರಥಮ ಎಸೆತದಲ್ಲಿಯೇ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸೇರಿದರು.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್‌ಗೆ ಇಳಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರವಾಗಿ ಆರಂಭಿಕರಾಗಿ ಕೆಎಲ್ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್ ಕಣಕ್ಕಿಳಿದಿದ್ದರು. ಗುಜರಾತ್ ಟೈಟನ್ಸ್ ತಂಡದ ಪರವಾಗಿ ಮೊಹಮ್ಮದ್ ಶಮಿ ಮೊದಲ ಓವರ್ ಎಸೆಯಲು ಕಣಕ್ಕಿಳಿದಿದ್ದರು. ಈ ಎಸೆತವನ್ನು ಬ್ಯಾಟ್ ಮೂಲಕ ತಳ್ಳಲು ಪ್ರಯತ್ನಿಸಿದ ರಾಹುಲ್ ಲೆಕ್ಕಾಚಾರ ತಪ್ಪಿತ್ತು. ಬ್ಯಾಟ್ ಸವರಿಕೊಂಡು ಸಾಗಿದ ಚೆಂಡು ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಬೊಗಸೆಯಲ್ಲಿ ಭದ್ರವಾಗಿತ್ತು. ಅಂಪಾಯರ್ ನಾಟೌಟ್ ಎಂದು ಘೋಷಿಸಿದರೂ ಡಿಆರ್‌ಎಸ್ ಮೊರೆ ಹೋದ ಜಿಟಿ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಇದರಲ್ಲಿ ಯಶಸ್ಸು ಸಾಧಿಸಿದರು. ಈ ಮೂಲಕ ಆರಂಭದಲ್ಲಿಯೇ ಮೇಲುಗೈ ಸಾಧಿಸಿತು ಗುಜರಾತ್ ಟೈಟನ್ಸ್.

ಕಳೆದ ಭಾರಿಯ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿದ್ದ ಕೆಎಲ್ ರಾಹುಲ್ ಈ ಬಾರಿ ಆ ಫ್ರಾಂಚೈಸಿ ತೊರೆದು ಲಕ್ನೋ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಅಲ್ಲದೆ ನಾಯಕತ್ವವನ್ನು ಕೂಡ ವಹಿಸಿಕೊಂಡಿದ್ದಾರೆ. ಅತ್ತ ಗುಜರಾತ್ ಟೈಟನ್ಸ್ ತಂಡದ ನಾಯಕತ್ವವನ್ನು ಹಾರ್ದಕ್ ಪಾಂಡ್ಯ ವಹಿಸಿಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ಕಳೆದ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರನಾಗಿದ್ದರು. ಇದೇ ಮೊದಲ ಬಾರಿಗೆ ಹಾರ್ದಿಕ್ ನಾಯಕತ್ವದ ಜವಾಬ್ಧಾರಿ ವಹಿಸಿಕೊಂಡಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಎವಿನ್ ಲೂಯಿಸ್, ಮನೀಶ್ ಪಾಂಡೆ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮೊಹ್ಸಿನ್ ಖಾನ್, ಆಯುಷ್ ಬಡೋನಿ, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭಮನ್ ಗಿಲ್, ಮ್ಯಾಥ್ಯೂ ವೇಡ್(ವಿಕೆಟ್ ಕೀಪರ್), ವಿಜಯ್ ಶಂಕರ್, ಅಭಿನವ್ ಮನೋಹರ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಲಾಕಿ ಫರ್ಗುಸನ್, ವರುಣ್ ಆರೋನ್, ಮೊಹಮ್ಮದ್ ಶಮಿ

Story first published: Tuesday, March 29, 2022, 10:46 [IST]
Other articles published on Mar 29, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+