For Quick Alerts
ALLOW NOTIFICATIONS  
For Daily Alerts
 

KKR vs MI: ಕೆಕೆಆರ್ ಬೌಲಿಂಗ್ ದಾಳಿಗೆ ತತ್ತರಿಸಿ ಮತ್ತೊಂದು ಸೋಲು ಕಂಡ ಮುಂಬೈ ಇಂಡಿಯನ್ಸ್

IPL 2022: Kolkata Knight Riders beat Mumbai Indians by 52 runs

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 56ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 52 ರನ್‌ಗಳ ಬೃಹತ್ ಗೆಲುವನ್ನು ದಾಖಲಿಸಿ ಅಂಕ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಿಂದ ಏಳನೇ ಸ್ಥಾನಕ್ಕೆ ಜಿಗಿತ ಕಂಡಿದೆ.

ಇನ್ನು ಈ ಪಂದ್ಯದಲ್ಲಿ ಸೋಲನ್ನು ಅನುಭವಿಸಿರುವ ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಒಂಬತ್ತನೇ ಪರಾಭವವನ್ನು ಕಂಡಿದೆ. ಮೊದಲು ಬೌಲಿಂಗ್ ಮಾಡಿ ಕೋಲ್ಕತ್ತ ನೈಟ್ ರೈಡರ್ಸ್ ತಂಡಕ್ಕೆ ಬೃಹತ್ ಮೊತ್ತ ಗಳಿಸದಂತೆ ಹಿಡಿತ ಸಾಧಿಸಿದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್‍ನಲ್ಲಿಯೂ ಅದೇ ರೀತಿಯ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದೆ. ಕೋಲ್ಕತಾ ನೈಟ್ ರೈಡರ್ಸ್ ಬೌಲಿಂಗ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್ 113 ರನ್‌ಗಳಿಗೆ ಆಲ್ ಔಟ್ ಆಗಿದೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 165 ರನ್ ಕಲೆಹಾಕಿ, ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು 166 ರನ್‌ಗಳ ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಮುಂಬೈ ಇಂಡಿಯನ್ಸ್ 17.3 ಓವರ್‌ಗಳಲ್ಲಿ 113 ರನ್‌ಗಳಿಗೆ ಆಲ್ ಔಟ್ ಆಗಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಇನ್ನಿಂಗ್ಸ್‌‌: ಕೋಲ್ಕತಾ ನೈಟ್ ರೈಡರ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಮತ್ತು ಅಜಿಂಕ್ಯ ರಹಾನೆ ಉತ್ತಮ ಆರಂಭವನ್ನೇ ಕಟ್ಟಿಕೊಟ್ಟರು. ವೆಂಕಟೇಶ್ ಅಯ್ಯರ್ 24 ಎಸೆತಗಳಲ್ಲಿ 43 ರನ್ ಚಚ್ಚಿದರೆ, ಅಜಿಂಕ್ಯ ರಹಾನೆ 24 ಎಸೆತಗಳಲ್ಲಿ 25 ರನ್ ಕಲೆ ಹಾಕಿದರು ಹಾಗೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ ರಾಣಾ 26 ಎಸೆತಗಳಲ್ಲಿ 43 ರನ್ ಗಳಿಸಿ ಮಿಂಚಿದರು. ಇನ್ನುಳಿದಂತೆ ತಂಡದ ನಾಯಕ ಶ್ರೇಯಸ್ ಅಯ್ಯರ್ 6 ರನ್, ಆ್ಯಂಡ್ರೆ ರಸೆಲ್ 9 ರನ್, ಶೆಲ್ಡನ್ ಜಾಕ್ಸನ್ 5 ರನ್, ಪ್ಯಾಟ್ ಕಮಿನ್ಸ್, ಟಿಮ್ ಸೌದಿ ಮತ್ತು ಸುನಿಲ್ ನರೈನ್ ಮೂವರೂ ಸಹ ಶೂನ್ಯಕ್ಕೆ ಪೆವಿಲಿಯನ್ ಸೇರಿಕೊಂಡರೆ, ವರುಣ್ ಚಕ್ರವರ್ತಿ ಯಾವುದೇ ರನ್ ಕಲೆ ಹಾಕದೆ ಅಜೇಯರಾಗಿ ಉಳಿದರು ಮತ್ತು ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಂಕು ಸಿಂಗ್ 19 ಎಸೆತಗಳಲ್ಲಿ ಅಜೇಯ 23 ರನ್ ಬಾರಿಸಿದರು.

ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಬೌಲರ್ ಜಸ್ ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ 5 ವಿಕೆಟ್ ಗೊಂಚಲು ಪಡೆದಿದ್ದು, ಯಶಸ್ಸಿನ ಹಾದಿಗೆ ಮರಳಿದ್ದಾರೆ. 4 ಓವರ್ ಬೌಲಿಂಗ್ ಮಾಡಿದ ಜಸ್ ಪ್ರೀತ್ ಬುಮ್ರಾ 1 ಮೇಡನ್ ಸಹಿತ ಕೇವಲ 10 ರನ್ ನೀಡಿ 5 ವಿಕೆಟ್ ಪಡೆದರು. ಇನ್ನುಳಿದಂತೆ ಕುಮಾರ್ ಕಾರ್ತಿಕೇಯ 2 ವಿಕೆಟ್ ಪಡೆದರೆ, ಮುರುಗನ್ ಅಶ್ವಿನ್ ಮತ್ತು ಡೇನಿಯಲ್ ಸಾಮ್ಸ್ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.

ಮುಂಬೈ ಇಂಡಿಯನ್ಸ್ ಇನ್ನಿಂಗ್ಸ್: ಕೋಲ್ಕತ್ತಾ ನೈಟ್ ರೈಡರ್ಸ್ ನೀಡಿದ ಗುರಿಯನ್ನು ಬೆನ್ನತ್ತಲು ಯತ್ನಿಸಿದ ಮುಂಬೈ ಇಂಡಿಯನ್ಸ್ ಪರ ಇಶಾನ್ ಕಿಶನ್ ಹೊರತುಪಡಿಸಿ ಬೇರೆ ಯಾವುದೇ ಆಟಗಾರ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಲೇ ಇಲ್ಲ. ಇಶಾನ್ ಕಿಶನ್ 43 ಎಸೆತಗಳಲ್ಲಿ 51 ರನ್ ಬಾರಿಸಿದರೆ, ರೋಹಿತ್ ಶರ್ಮಾ 2, ತಿಲಕ್ ವರ್ಮಾ 6, ರಮಣ್ ದೀಪ್ ಸಿಂಗ್ 12, ಟಿಮ್ ಡೇವಿಡ್ 13, ಕೀರನ್ ಪೊಲಾರ್ಡ್ 15, ಡೇನಿಯಲ್ ಸ್ಯಾಮ್ಸ್ 1, ಮುರುಗನ್ ಅಶ್ವಿನ್ 0, ಕುಮಾರ್ ಕಾರ್ತಿಕೇಯ 3, ಜಸ್ ಪ್ರೀತ್ ಬೂಮ್ರಾ 0 ಮತ್ತು ರಿಲೇ ಮೆರೆಡಿತ್ ಯಾವುದೇ ರನ್ ಗಳಿಸದೆ ಅಜೇಯರಾಗಿ ಉಳಿದರು.

ಕೋಲ್ಕತ್ತಾ ನೈಟ್ ರೈಡರ್ಸ್ ಪರ ಪ್ಯಾಟ್ ಕಮಿನ್ಸ್ 3 ವಿಕೆಟ್ ಪಡೆದು ಮಿಂಚಿದರೆ, ಆ್ಯಂಡ್ರೆ ರಸೆಲ್ 2 ವಿಕೆಟ್ ಹಾಗೂ ಟಿಮ್ ಸೌಥಿ ಮತ್ತು ವರುಣ್ ಚಕ್ರವರ್ತಿ ತಲಾ ಒಂದೊಂದು ವಿಕೆಟ್ ಪಡೆದರು.

Story first published: Tuesday, May 10, 2022, 9:22 [IST]
Other articles published on May 10, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+