PBKS vs KKR: ಪಂದ್ಯದ ಟಾಸ್ ವರದಿ, ಪ್ಲೇಯಿಂಗ್ ಇಲೆವೆನ್ ಮಾಹಿತಿ ಇಲ್ಲಿದೆ

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 8ನೇ ಪಂದ್ಯ ಇಂದು ( ಏಪ್ರಿಲ್ 1 ) ನಡೆಯುತ್ತಿದ್ದು, ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಟ ನಡೆಸುತ್ತಿವೆ. ಹಾಗೂ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಐಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದು, ಎದುರಾಳಿ ಪಂಜಾಬ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ. ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಚೊಚ್ಚಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಣಕ್ಕಿಳಿದು ಜಯ ಗಳಿಸಿ ಅಬ್ಬರಿಸಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ನಂತರ ನಡೆದ ತನ್ನ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೆಣಸಾಟ ನಡೆಸಿ ಸೋಲನ್ನು ಅನುಭವಿಸಿತ್ತು. ಇತ್ತ ಟೂರ್ನಿಯ ತನ್ನ ಚೊಚ್ಚಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಣಕ್ಕಿಳಿದಿದ್ದ ಪಂಜಾಬ್ ಕಿಂಗ್ಸ್ ಬೃಹತ್ ಮೊತ್ತವನ್ನು ಬೆನ್ನತ್ತಿ ಜಯ ಸಾಧಿಸಿತ್ತು.
ಹೀಗೆ ಮೊದಲ ಪಂದ್ಯದಲ್ಲಿ ಗೆದ್ದು ಎರಡನೇ ಪಂದ್ಯದಲ್ಲಿ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತನ್ನ ಈ ಮೂರನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿ ಯಶಸ್ಸಿನ ಹಾದಿಗೆ ಮರಳುವ ಯೋಜನೆಯಲ್ಲಿ ಕಣಕ್ಕಿಳಿದಿದ್ದರೆ, ಟೂರ್ನಿಯಲ್ಲಿ ತಾನಾಡಿರುವ ಮೊದಲ ಪಂದ್ಯದಲ್ಲಿ ಅಬ್ಬರದ ಜಯ ಸಾಧಿಸಿರುವ ಪಂಜಾಬ್ ಕಿಂಗ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಈ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ತಲುಪುವತ್ತ ಕಣ್ಣಿಟ್ಟಿದೆ.

ಇನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಈ ಪಂದ್ಯ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಇತ್ತಂಡಗಳ ಪರ ಕಣಕ್ಕಿಳಿಯುತ್ತಿರುವ ಆಡುವ ಬಳಗ ಈ ಕೆಳಕಂಡಂತಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಶ್ರೇಯಸ್ ಅಯ್ಯರ್(ನಾಯಕ), ಸ್ಯಾಮ್ ಬಿಲ್ಲಿಂಗ್ಸ್(ವಿಕೆಟ್ ಕೀಪರ್), ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್, ಶಿವಂ ಮಾವಿ, ವರುಣ್ ಚಕ್ರವರ್ತಿ
ಪಂಜಾಬ್ ಕಿಂಗ್ಸ್ ಆಡುವ ಬಳಗ: ಮಯಾಂಕ್ ಅಗರ್ವಾಲ್ ( ನಾಯಕ ), ಶಿಖರ್ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಭಾನುಕಾ ರಾಜಪಕ್ಸೆ ( ವಿಕೆಟ್ ಕೀಪರ್ ), ಶಾರುಖ್ ಖಾನ್, ಓಡಿಯನ್ ಸ್ಮಿತ್, ರಾಜ್ ಬಾವಾ, ಅರ್ಷ್‌ದೀಪ್ ಸಿಂಗ್, ಹರ್‌ಪ್ರೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಾಹರ್
ಕಳೆದ ಪಂದ್ಯಕ್ಕೆ ಅಲಭ್ಯರಾಗಿದ್ದ ಪಂಜಾಬ್ ಕಿಂಗ್ಸ್ ತಂಡದ ಮಾರಕ ವೇಗಿ ಕಗಿಸೊ ರಬಾಡಾ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿರುವುದು ತಂಡದ ಬಲವನ್ನು ಮತ್ತಷ್ಟು ಹೆಚ್ಚಿಸಿದೆ ಎನ್ನಬಹುದು. ಹೀಗೆ ಪಂಜಾಬ್ ಕಿಂಗ್ಸ್ ಈ ಪಂದ್ಯದಲ್ಲಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದ್ದು, ಸಂದೀಪ್ ಶರ್ಮಾ ಬದಲು ಕಗಿಸೊ ರಬಾಡಾರನ್ನು ಕಣಕ್ಕಿಳಿಸುತ್ತಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ ಕೂಡ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದ್ದು ಶೆಲ್ಡನ್ ಜಾಕ್ಸನ್ ಬದಲು ಶಿವಮ್ ಮಾವಿ ಕಣಕ್ಕಿಳಿಯುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications