KKR vs RR: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಪಂದ್ಯ ಗೆದ್ದಿರುವ ಬಲಿಷ್ಠ ತಂಡ ಯಾವುದು?

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 47ನೇ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಇಂದು ( ಮೇ 2 ) ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿವೆ.
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಇಲ್ಲಿಯವರೆಗೂ 9 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು, 3 ಪಂದ್ಯಗಳಲ್ಲಿ ಸೋತು 12 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, 9 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ 6 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಇನ್ನು ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇದು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಈ ಹಿಂದೆ ಏಪ್ರಿಲ್ 18ರಂದು ನಡೆದಿದ್ದ ಟೂರ್ನಿಯ 30ನೇ ಪಂದ್ಯದಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು. ಹಾಗೂ ಆ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 7 ರನ್‌ಗಳ ರೋಚಕ ಜಯ ಸಾಧಿಸಿತ್ತು.
ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿ ಎದುರಾಳಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಗೆಲ್ಲಲು 218 ರನ್‌ಗಳ ಗುರಿಯನ್ನು ನೀಡಿತ್ತು. ಇನ್ನು ಈ ಗುರಿಯನ್ನು ಬೆನ್ನತ್ತಲು ಪ್ರಯತ್ನಿಸಿ 19.4 ಓವರ್‌ಗಳಲ್ಲಿ 210 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲನ್ನು ಅನುಭವಿಸಿತ್ತು. ಹೀಗೆ ಈ ಬಾರಿಯ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮೇಲುಗೈ ಸಾಧಿಸಿರುವ ರಾಜಸ್ಥಾನ್ ರಾಯಲ್ಸ್ ಮತ್ತೊಂದು ಪಂದ್ಯದಲ್ಲಿ ಗೆದ್ದು ತನ್ನ ಪ್ಲೇ ಆಫ್ ಹಾದಿಯನ್ನು ಸುಲಭ ಮಾಡಿಕೊಳ್ಳುವ ಯೋಜನೆಯಲ್ಲಿದ್ದರೆ, ಪ್ಲೇಆಫ್ ಪ್ರವೇಶಿಸಲು ಉಳಿದ ಎಲ್ಲಾ ಪಂದ್ಯಗಳಲ್ಲಿಯೂ ಗೆಲ್ಲಲೇಬೇಕಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಈ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಯತ್ನಿಸಲಿದೆ. ಇನ್ನು ಇತ್ತಂಡಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನಡೆದಿರುವ ಮುಖಾಮುಖಿ ಪಂದ್ಯಗಳಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಗೆದ್ದು ಮೇಲುಗೈ ಸಾಧಿಸಿದೆ ಎಂಬುದರ ಕುರಿತಾದ ವಿವರ ಈ ಕೆಳಕಂಡಂತಿದೆ.
ಒಟ್ಟಾರೆ ಐಪಿಎಲ್ ಮುಖಾಮುಖಿ:
ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ಐಪಿಎಲ್ ಇತಿಹಾಸದಲ್ಲಿ ಒಟ್ಟು 26 ಪಂದ್ಯಗಳು ನಡೆದಿದ್ದು, ಈ ಪೈಕಿ ಕೋಲ್ಕತ್ತಾ ನೈಟ್ ರೈಡರ್ಸ್ 13 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ರಾಜಸ್ಥಾನ್ ರಾಯಲ್ಸ್ 12 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ. ಈ ಮೂಲಕ ಇತ್ತಂಡಗಳ ನಡುವಿನ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತುಸು ಮೇಲುಗೈ ಸಾಧಿಸಿದೆ.
ಕೊನೆಯ 5 ಐಪಿಎಲ್ ಮುಖಾಮುಖಿ
ಈ ಬಾರಿಯ ಟೂರ್ನಿಯ ಪಂದ್ಯವೂ ಸೇರಿದಂತೆ ಇತ್ತಂಡಗಳ ನಡುವೆ ನಡೆದಿರುವ ಕೊನೆಯ 5 ಇಂಡಿಯನ್ ಪ್ರೀಮಿಯರ್ ಲೀಗ್ ಮುಖಾಮುಖಿ ಪಂದ್ಯಗಳಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ರಾಜಸ್ಥಾನ್ ರಾಯಲ್ಸ್ 2 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ಮೇಲುಗೈ ಸಾಧಿಸಿದೆ.
ಕಳೆದ ಬಾರಿಯ ಐಪಿಎಲ್ ಆವೃತ್ತಿಯ ಮುಖಾಮುಖಿ
ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಲೀಗ್ ಹಂತದ ಎರಡು ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 6 ವಿಕೆಟ್‌ಗಳ ಗೆಲುವು ಕಂಡಿತ್ತು ಹಾಗೂ ದ್ವಿತೀಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ 86 ರನ್‌ಗಳ ಜಯ ಸಾಧಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications