KKR vs RCB Head to Head: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಠ ತಂಡ ಯಾವುದು ಗೊತ್ತಾ?

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಗೊಂಡಿದ್ದು, ಕಳೆದ ಮಾರ್ಚ್ 27ರ ಭಾನುವಾರದಂದು ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಳಪೆ ಆರಂಭವನ್ನು ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಇನ್ನೂರರ ಗಡಿ ದಾಟಿಯೂ ಕೂಡ ಸೋಲನ್ನುಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಲ್ಲಿನ ತನ್ನ ದ್ವಿತೀಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ಇತ್ತಂಡಗಳ ನಡುವಿನ ಈ ಪಂದ್ಯ ಮಾರ್ಚ್ 30ರ ಸಂಜೆ 7.30ಕ್ಕೆ ಆರಂಭಗೊಳ್ಳಲಿದ್ದು, ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಅತ್ತ ಈ ಬಾರಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಜಯ ಸಾಧಿಸುವುದರ ಮೂಲಕ ಶುಭಾರಂಭವನ್ನು ಮಾಡಿರುವ ಶ್ರೇಯಸ್ ಐಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ತನ್ನ ಎರಡನೇ ಪಂದ್ಯದಲ್ಲಿ ಸೆಣಸಾಡಲು ಸಜ್ಜಾಗಿದ್ದು, ಎರಡನೇ ಗೆಲುವಿನತ್ತ ಗುರಿ ಹೊಂದಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಇದುವರೆಗೂ ಒಟ್ಟು ಎಷ್ಟು ಪಂದ್ಯಗಳು ನಡೆದಿವೆ ಹಾಗೂ ಈ ಪಂದ್ಯಗಳ ಪೈಕಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದು ಬಲಿಷ್ಠವೆನಿಸಿಕೊಂಡಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ ಓದಿ..

ಒಟ್ಟಾರೆ ಐಪಿಎಲ್ ಮುಖಾಮುಖಿ
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 29 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು 13 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ 16 ಪಂದ್ಯಗಳಲ್ಲಿ ಗೆದ್ದಿದೆ. ಈ ಮೂಲಕ ಇತ್ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮೇಲುಗೈ ಸಾಧಿಸಿದೆ.

ಕೊನೆಯ 5 ಪಂದ್ಯಗಳ ಮುಖಾಮುಖಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ನಡೆದಿರುವ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು 3 ಪಂದ್ಯಗಳಲ್ಲಿ ಜಯ ಸಾಧಿಸಿದೆ. 2020ರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇತ್ತಂಡಗಳ ಎರಡೂ ಪಂದ್ಯಗಳಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು ಕಂಡಿತ್ತು. ಹಾಗೂ 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇತ್ತಂಡಗಳ ನಡುವೆ ನಡೆದಿದ್ದ ಲೀಗ್ ಹಂತದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯ ಸಾಧಿಸಿತ್ತು ಹಾಗೂ ದ್ವಿತೀಯ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಜಯ ಸಾಧಿಸಿತ್ತು. ಇನ್ನು ಇದೇ ಆವೃತ್ತಿಯಲ್ಲಿ ಇತ್ತಂಡಗಳು ಎಲಿಮಿನೇಟರ್ ಸುತ್ತಿನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಿದ್ದವು. ಹಾಗೂ ಈ ಪಂದ್ಯದಲ್ಲಿಯೂ ಕೋಲ್ಕತ್ತಾ ನೈಟ್ ರೈಡರ್ಸ್ ಜಯ ಸಾಧಿಸಿತ್ತು.


ಕಡಿಮೆ ರನ್ ಹಾಗೂ ಹೆಚ್ಚು ರನ್
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿರುವ ಪಂದ್ಯಗಳ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗರಿಷ್ಠ ರನ್ 213 ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಕಲೆಹಾಕಿರುವ ಗರಿಷ್ಟ ರನ್ 222 ರನ್. ಹಾಗೂ ಇತ್ತಂಡಗಳ ನಡುವೆ ನಡೆದಿರುವ ಪಂದ್ಯಗಳ ಪೈಕಿ ಕೋಲ್ಕತ್ತಾ ನೈಟ್ ರೈಡರ್ಸ್ ಕಲೆಹಾಕಿರುವ ಕಡಿಮೆ ರನ್ ಎಂದರೆ 84 ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಲೆಹಾಕಿರುವ ಕಡಿಮೆ ರನ್ 49.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications