Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

KKR vs SRH: ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ಗೆದ್ದಿರುವ ಬಲಿಷ್ಠ ತಂಡ ಯಾವುದು?

IPL 2022: Kolkata Knight Riders vs Sunrisers Hyderabad head to head record details in Kannada

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತವನ್ನು ಸಮೀಪಿಸುತ್ತಿದ್ದು, ಟೂರ್ನಿಯ 61ನೇ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಇತ್ತಂಡಗಳ ನಡುವಿನ ಈ ಪಂದ್ಯ ಇಂದು ( ಮೇ 14 ) ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇನ್ನು ಎರಡೂ ತಂಡಗಳ ಪ್ಲೇ ಆಫ್ ಪ್ರವೇಶಿಸುವ ಆಸೆ ಜೀವಂತವಾಗಿದ್ದು, ಕೋಲ್ಕತ್ತ ನೈಟ್ ರೈಡರ್ಸ್ ತಂಡಕ್ಕಿಂತ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಅವಕಾಶಗಳು ಹೆಚ್ಚಿವೆ. ಹೌದು, ಟೂರ್ನಿಯಲ್ಲಿ ಇಲ್ಲಿಯವರೆಗೂ 12 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಮಾತ್ರ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ 10 ಅಂಕಗಳನ್ನು ಪಡೆದುಕೊಂಡಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದು ಉಳಿದಿರುವ 2 ಪಂದ್ಯಗಳನ್ನು ಗೆದ್ದರೂ ಸಹ ಪ್ಲೇ ಆಫ್ ಪ್ರವೇಶಿಸುವ ಸಾಧ್ಯತೆಗಳು ತೀರಾ ಕಡಿಮೆ ಇವೆ.

ಇನ್ನು 11 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿರುವ ಸನ್ ರೈಸರ್ಸ್ ಹೈದರಾಬಾದ್ 5 ಪಂದ್ಯಗಳಲ್ಲಿ ಜಯ ಸಾಧಿಸಿ 6 ಪಂದ್ಯಗಳಲ್ಲಿ ಸೋಲು ಕಂಡು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಇನ್ನುಳಿದ ಎಲ್ಲಾ 3 ಪಂದ್ಯಗಳಲ್ಲಿಯೂ ಜಯ ಸಾಧಿಸಿ ಇತರೆ ತಂಡಗಳು ಸಹ ಸಮ ಅಂಕಗಳನ್ನು ಪಡೆದುಕೊಂಡು ಸನ್ ರೈಸರ್ಸ್ ಹೆಚ್ಚಿನ ನೆಟ್ ರನ್ ರೇಟ್ ಹೊಂದಿದರೆ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಲಭಿಸಲಿದೆ. ಹೀಗಾಗಿ ಇಂದಿನ ಪಂದ್ಯ ಸಾಕಷ್ಟು ಮಹತ್ವದ್ದಾಗಿದ್ದು ಯಾವ ತಂಡ ಗೆದ್ದು ತನ್ನ ಪ್ಲೇ ಆಫ್ ಹಾದಿಯನ್ನು ಬಲಿಷ್ಠಪಡಿಸಿಕೊಳ್ಳಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಇನ್ನು ಇತ್ತಂಡಗಳ ನಡುವೆ ಐಪಿಎಲ್ ಇತಿಹಾಸದಲ್ಲಿ ಎಷ್ಟು ಪಂದ್ಯಗಳು ನಡೆದಿವೆ ಹಾಗೂ ಈ ಪೈಕಿ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಗೆದ್ದು ಬಲಿಷ್ಠವಾಗಿದೆ ಎಂಬುದರ ಕುರಿತಾದ ಮಾಹಿತಿ ಕೆಳಕಂಡಂತಿದೆ.

ಒಟ್ಟಾರೆ ಐಪಿಎಲ್ ಮುಖಾಮುಖಿ: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಒಟ್ಟು 22 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಸನ್ ರೈಸರ್ಸ್ ಹೈದರಾಬಾದ್ 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ 14 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಈ ಮೂಲಕ ಇತ್ತಂಡಗಳ ಒಟ್ಟಾರೆ ಐಪಿಎಲ್ ಮುಖಾಮುಖಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸ್ಪಷ್ಟ ಮೇಲುಗೈ ಸಾಧಿಸಿದೆ.

ಕಳೆದ 5 ಪಂದ್ಯಗಳ ಮುಖಾಮುಖಿ: ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಈ ಬಾರಿಯ ಆವೃತ್ತಿಯಲ್ಲಿ ನಡೆದ ಪ್ರಥಮ ಪಂದ್ಯವೂ ಸೇರಿದಂತೆ ನಡೆದಿರುವ ಕೊನೆಯ 5 ಮುಖಾಮುಖಿ ಪಂದ್ಯಗಳ ಪೈಕಿ ಕೋಲ್ಕತ್ತ ನೈಟ್ ರೈಡರ್ಸ್ 4 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಗೆದ್ದಿದೆ. ಇನ್ನು ಈ ಬಾರಿಯ ಐಪಿಎಲ್ ಆವೃತ್ತಿಯ ಇತ್ತಂಡಗಳ ಪ್ರಥಮ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್‍ಗಳ ಗೆಲುವನ್ನು ಕಂಡಿತ್ತು.

ಕಳೆದ ಆವೃತ್ತಿಯ ಮುಖಾಮುಖಿ: ಕಳೆದ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಇತ್ತಂಡಗಳ ನಡುವೆ ನಡೆದಿದ್ದ 2 ಲೀಗ್ ಹಂತದ ಪಂದ್ಯಗಳ ಪೈಕಿ ಎರಡೂ ಪಂದ್ಯಗಳಲ್ಲಿಯೂ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಕೋಲ್ಕತಾ ನೈಟ್ ರೈಡರ್ಸ್ ಸೋಲುಣಿಸಿತ್ತು.

Story first published: Saturday, May 14, 2022, 17:18 [IST]
Other articles published on May 14, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+