KKR vs SRH: ಹ್ಯಾಟ್ರಿಕ್ ಗೆಲುವು ಸಾಧಿಸುತ್ತಾ ಹೈದರಾಬಾದ್? ಪಂದ್ಯದ ಟಾಸ್ ಮತ್ತು ಪ್ಲೇಯಿಂಗ್ XI ವರದಿ

ಕೇನ್ ವಿಲಿಯಮ್ಸನ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ಮತ್ತು ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಈ ಬಾರಿಯ ಐಪಿಎಲ್ ಟೂರ್ನಿಯ 25ನೇ ಪಂದ್ಯದಲ್ಲಿ ಇಂದು ( ಏಪ್ರಿಲ್ 15 ) ಮುಂಬೈನ ಬ್ರಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸುತ್ತಿದ್ದು ಟಾಸ್ ಗೆದ್ದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಫೀಲ್ಡಿಂಗ್ ಆಯ್ದುಕೊಂಡಿದ್ದು ಎದುರಾಳಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಆಡುವ ಬಳಗಗಳು
ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಆರನ್ ಫಿಂಚ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಆಂಡ್ರೆ ರಸೆಲ್, ಶೆಲ್ಡನ್ ಜಾಕ್ಸನ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಸುನಿಲ್ ನರೈನ್, ಉಮೇಶ್ ಯಾದವ್, ಅಮನ್ ಹಕೀಮ್ ಖಾನ್, ವರುಣ್ ಚಕ್ರವರ್ತಿ
ಕೋಲ್ಕತ್ತ ನೈಟ್ ರೈಡರ್ಸ್ ತಂಡಕ್ಕೆ ಆ್ಯರೋನ್ ಫಿಂಚ್ ಮತ್ತು ಅಮನ್ ಖಾನ್ ಆಗಮಿಸಿದ್ದು, ಶೆಲ್ಡನ್ ಜಾಕ್ಸನ್ ಕೂಡ ಮರಳಿದ್ದಾರೆ.
ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್ ( ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್, ಶಶಾಂಕ್ ಸಿಂಗ್, ಜಗದೀಶ ಸುಚಿತ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್
ಸನ್ ರೈಸರ್ಸ್ ಹೈದರಾಬಾದ್ ತಂಡದಿಂದ ಈ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ಹೊರಗುಳಿದಿದ್ದು ಬದಲಾಗಿ ಜಗದೀಶ ಸುಚಿತ್ ಕಣಕ್ಕಿಳಿಯುತ್ತಿದ್ದಾರೆ.
ಇನ್ನು ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಅತಿ ದೊಡ್ಡ ಮಟ್ಟದ ಸೋಲನ್ನು ಕಂಡು ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿಯೂ ತನ್ನ ಮೊದಲೆರಡು ಪಂದ್ಯಗಳಲ್ಲಿ ಸಾಲುಸಾಲಾಗಿ ಸೋತು ನಿರಾಸೆ ಮೂಡಿಸಿತ್ತು. ಆದರೆ ನಂತರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳ ವಿರುದ್ಧದ ಪಂದ್ಯಗಳಲ್ಲಿ ಸತತವಾಗಿ ಗೆದ್ದಿರುವ ಸನ್ ರೈಸರ್ಸ್ ಹೈದರಾಬಾದ್ ಯಶಸ್ಸಿನ ಅಲೆಯಲ್ಲಿದೆ.
ಹೀಗೆ ಸತತ 2 ಪಂದ್ಯಗಳಲ್ಲಿ ಗೆದ್ದಿರುವ ಸನ್ ರೈಸರ್ಸ್ ಹೈದರಾಬಾದ್ ತನ್ನ ಐದನೇ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಎದುರಿಸುತ್ತಿದ್ದು, ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 5 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು ಉಳಿದೆರಡು ಪಂದ್ಯಗಳಲ್ಲಿ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications