ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ನನ್ನ ಯಶಸ್ಸಿಗೆ ಆತನೇ ಕಾರಣ: ಕುಲ್‌ದೀಪ್ ಯಾದವ್ ಕ್ರೆಡಿಟ್ ನೀಡಿದ್ದು ಯಾರಿಗೆ?

IPL 2022: Kuldeep Yadav praises DC captain Rishabh Pant for his support behind the wicket

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಭಾರತದ ಇಬ್ಬರು ಸ್ಪಿನ್ನರ್‌ಗಳು ಅದ್ಭುತ ಪ್ರದರ್ಶನವನ್ನು ನೀಡುತ್ತಿದ್ದು ಎದುರಾಳಿಗಳಿಗೆ ಭೀತಿ ಹುಟ್ಟಿಸಿದ್ದಾರೆ. ಒಂದೆಡೆ ಯುಜುವೇಂದ್ರ ಚಾಹಲ್ ಪಂದ್ಯದಿಂದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಮಿಂಚುತ್ತಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಬೌಲರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಕುಲ್‌ದೀಪ್ ಯಾದವ್. ಕಳೆದ ಐಪಿಎಲ್ ಆವೃತ್ತಿಯಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆಯುವುದಕ್ಕೂ ಪರದಾಡಿದ್ದ ಕುಲ್‌ದೀಪ್ ಅಮೋಘ ಪ್ರದರ್ಶನದ ಮೂಲಕ ಮಿಂಚುತ್ತಿದ್ದಾರೆ.

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿಯೂ ಕುಲ್‌ದೀಪ್ ಯಾದವ್ ಎರಡು ವಿಕೆಟ್ ಪಡೆದು ಮಿಂಚಿದ್ದಾರೆ. ಈ ಪ್ರದರ್ಶನದ ಬಳಿಕ ಮಾತನಾಡಿದ ಡಿಸಿ ಸ್ಪಿನ್ನರ್ ಐಪಿಎಲ್‌ನಲ್ಲಿ ಇಷ್ಟು ಅದ್ಭುತ ಪ್ರದರ್ಶನ ನೀಡಲು ಯಾರು ಕಾರಣ ಎಂಬುದನ್ನು ಹೇಳಿಕೊಂಡಿದ್ದಾರೆ. ತಂಡದ ನಾಯಕನಿಗೆ ಕುಲ್‌ದೀಪ್ ಸಂಪೂರ್ಣವಾಗಿ ಶ್ರೇಯಸ್ಸು ನೀಡಿದ್ದಾರೆ.

"ನಾನು ಸುದೀರ್ಘ ಕಾಲದ ಬಳಿಕ ನನ್ನ ಬೌಲಿಂಗ್‌ಅನ್ನು ಆನಂದಿಸುತ್ತಿದ್ದೇನೆ. ಇದರ ಸಂಪೂರ್ಣ ಶ್ರೇಯಸ್ಸು ವಿಕೆಟ್ ಹಿಂದೆ ನಿಂತಿರುವ ರಿಷಬ್ ಪಂತ್‌ಗೆ ಸಲ್ಲಬೇಕಿದೆ. ಯಾಕೆಂದರೆ ಆತ ಸ್ಪಿನ್ನರ್‌ಗಳಿಗೆ ಅದ್ಭುತವಾಗಿ ಬೆಂಬಲವನ್ನು ನೀಡುತ್ತಿದ್ದಾರೆ. ಆತ ವಿಚಲಿತಗೊಳ್ಳದಿರುವ ಕಾರಣ ಬೌಲರ್‌ಗಳಿಗೆ ಸಾಕಷ್ಟು ಆತ್ಮವಿಶ್ವಾಸವನ್ನು ತುಂಬುತ್ತಾರೆ. ಅದುವೇ ಯಶಸ್ಸಿಗೆ ಪ್ರಮುಖ ಕಾರಣ" ಎಂದು ನಾಯಕನ ಬಗ್ಗೆ ಕುಲ್‌ದೀಪ್ ಯಾದವ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಈ ಬಾರಿಯ ಐಪಿಎಲ್‌ನ ಮೊದಲ 6 ಪಂದ್ಯಗಳಲ್ಲಿ ಕುಲ್‌ದೀಪ್ ಯಾದವ್ 13 ವಿಕೆಟ್ ಸಂಪಾದಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಗೆದ್ದಿರುವ ಪಂದ್ಯಗಳಲ್ಲಿ ಕುಲ್‌ದೀಪ್ ಯಾದವ್ ಪಾತ್ರ ಬಹಳ ಮಹತ್ವದ್ದಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಗೆದ್ದಿರುವ ಮೂರು ಪಂದ್ಯಗಳಲ್ಲಿ ಮೂರರಲ್ಲಿ ಕೂಡ ಕುಲ್‌ದೀಪ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿರುವುದು ಇದಕ್ಕೆ ಸಾಕ್ಷಿಯಾಗಿದೆ. "ಐಪಿಎಲ್‌ನಲ್ಲಿ ನ್ನ ಆತ್ಮವಿಸ್ವಾಸ ಹೆಚ್ಚಾಗಿದೆ. ನನ್ನ ಎಸೆತಗಳಿಗೆ ಬೌಲರ್‌ಗಳು ಯಾವ ರೀತಿಯಾಗಿ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದನ್ನು ನಾನು ಮನಸ್ಸಿನಲ್ಲಿ ಸ್ಪಷ್ಟವಾಗಿ ಅರ್ಥ ಮಾಡಿಕೊಂಡಿದ್ದೇನೆ" ಎಂದಿದ್ದಾರೆ ಕುಲ್‌ದೀಪ್ ಯಾದವ್.

IPL 2022: Kuldeep Yadav praises DC captain Rishabh Pant for his support behind the wicket

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಮೋಘ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ತಂಡವನ್ನು ಅಗ್ಗಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಇನ್ನು ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗಳು ಸಾಂಘಿಕ ಪ್ರದರ್ಶನ ನೀಡಿ ಮಿಂಚಿದ್ದಾರೆ. ಖಲೀಲ್ ಅಹ್ಮದ್, ಲಲಿತ್ ಯಾದವ್, ಅಕ್ಷರ್ ಪಟೇಲ್ ಹಾಗೂ ಕುಲ್‌ದೀಪ್ ಯಾದವ್ ತಲಾ 2 ವಿಕೆಟ್ ಪಡೆದು ಮಿಂಚಿದರು. ಮುಸ್ತಫಿಜುರ್ ಒಂದು ವಿಕೆಟ್ ಪಡೆದರು. ಈ ಮೂಲಕ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಪಂಜಾಬ್ ಕಿಂಗ್ಸ್ ತಂಡವನ್ನು ಕೇವಲ 115 ರನ್‌ಗಳಿಗೆ ಕಟ್ಟಿ ಹಾಕುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲರ್‌ಗಳು ಯಶಸ್ವಿಯಾದರು.

Rohit Sharma ಟಾಸ್ ವೇಳೆಯಲ್ಲಿ Jadeja ಕಾಲೆಳೆದದ್ದು ಹೀಗೆ | Oneindia Kannada

ಇನ್ನು ಪಂಜಾಬ್ ಕಿಂಗ್ಸ್ ತಂಡ ನೀಡಿದ 116 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಆರಂಭಿಕರಾದ ಪೃಥ್ವಿ ಶಾ ಹಾಗೂ ಡೇವಿಡ್ ವಾರ್ನರ್ ಅದ್ಭುತವಾಗಿ ಬ್ಯಾಟಿಂಗ್ ಪ್ರದರ್ಶಿಸಿದರು. ಪಂಜಾಬ್ ಬೌಲರ್‌ಗಳ ಮೇಲೆ ದಂಡೆತ್ತಿ ಹೋದ ಈ ಇಬ್ಬರು ಆಟಗಾರರು ಮೊದಲ ವಿಕೆಟ್‌ಗೆ ಕೇವಲ 6.3 ಓವರ್‌ಗಳಲ್ಲಿ 83 ರನ್‌ಗಳ ಜೊತೆಯಾಟ ನೀಡಿ ಬೇರ್ಪಟ್ಟರು. ಪೃರ್ಥವು ಶಾ 20 ಎಸೆತಗಳಲ್ಲಿ 41 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಡೇವಿಡ್ ವಾರ್ನರ್ ನಂತರ ತಮ್ಮ ಸ್ಪೋಟಕ ಬ್ಯಾಟಿಂಗ್ ಮುಂದುವರಿಸಿದರು. 30 ಎಸೆತಗಳಲ್ಲಿ 60 ರನ್‌ಗಳಿಸಿ ವಾರ್ನರ್ ಅಜೇಯವಾಗುಳಿದರು. ಸರ್ಫರಾಜ್ ಖಾನ್ 12 ರನ್‌ಗಳಿಸಿ ಅಜೇಯವಾಗುಳಿದರು. ಅಂತಿಮವಾಗಿ ಕೇವಲ 10.3 ಓವರ್‌ಗಳಲ್ಲಿ ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾಗಿದೆ.

Story first published: Thursday, April 21, 2022, 17:39 [IST]
Other articles published on Apr 21, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X