IPL 2022: ಮಿಂಚು ಹರಿಸಲು ಸಜ್ಜಾದ ಓಪನರ್ಸ್: ಈ ಬಾರಿಯ ಟಾಪ್ 5 ಆರಂಭಿಕ ಜೋಡಿ

ಐಪಿಎಲ್ 2022ರ ಆವೃತ್ತಿಯ ಆರಂಭಕ್ಕೆ ಇನ್ನು ಬೆರಳೆಣಿಕೆಯ ದಿನಗಳು ಮಾತ್ರವೇ ಬಾಕಿಯಿದೆ. ಟೂರ್ನಿಯಲ್ಲಿ ಭಾಗವಹಿಸಲಿರುವ ಬಹುತೇಕ ಆಟಗಾರರು ಈಗಾಗಲೇ ತಮ್ಮ ತಮ್ಮ ತಂಡಗಳನ್ನು ಸೇರಿಕೊಂಡಿದ್ದಾರೆ. ಈ ಬಾರಿ ಹತ್ತು ತಂಡಗಳ ಟೂರ್ನಿಯಾಗಿರುವ ಕಾರಣ ಪಂದ್ತಯಾವಳಿಯ ಕುತೂಹಲ ಹೆಚ್ಚಾಗಿದೆ. ಈಗಾಗಲೇ ಇದ್ದ ತಂಡಗಳ ಜೊತೆಗೆ ಹೊಸದಾಗಿ ಸೇರ್ಪಡೆಯಾಗಿರುವ ತಂಡಗಳ ಪ್ರದರ್ಶನ ಹೇಗಿರಲಿದೆ ಎಂಬುದು ಅಭಿಮಾನಿಗಳ ಕಾತುರತೆಯನ್ನು ಹೆಚ್ಚಿಸಿದೆ.
ಇನ್ನು ಯಾವುದೇ ತಂಡ ಕೂಡ ಯಶಸ್ಸು ಸಾಧಿಸಬೇಕಾದರೆ ಆರಂಭಿಕ ಆಟಗಾರರ ಪ್ರದರ್ಶನ ಅತ್ಯಂತ ಪ್ರಮುಖವಾಗಿರುತ್ತದೆ. ಇದು ಈಗಾಗಲೇ ಹಲವು ಸಂದರ್ಭಗಳಲ್ಲಿ ಸಾಬೀತುಪಡಿಸಿದೆ. ಈ ಹಿಂದಿನ ಆವೃತ್ತಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ ತಂಡದ ಆರಂಭಿಕರಾದ ಫಾಫ್ ಡು ಪ್ಲೆಸಿಸ್ ಹಾಗೂ ಋತುರಾಜ್ ಗಾಯಕ್ವಾಡ್ ಜೋಡಿಯ ಪ್ರದರ್ಶನ ಇದಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ. ಹಾಗಾದರೆ ಈ ಬಾರಿ ಯಾವೆಲ್ಲಾ ತಂಡಗಳು ಅತ್ಯುತ್ತಮ ಆಟಗಾರರನ್ನು ಹೊಂದಿದೆ. ಟೂರ್ನಿಯ ಟಾಪ್ 5 ಆರಂಭಿಕ ಜೋಡಿ ಯಾವುದು? ಈ ವಿವರಗಳಲ್ಲಿ ಈ ವರದಿಯಲ್ಲಿ ನೋಡೋಣ. ಮುಂದೆ ಓದಿ..

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್
ಈ ಬಾರಿಯ ಐಪಿಎಲ್‌ಗೆ ಹೊಸದಾಗಿ ಸೇರ್ಪಡೆಯಾಗಿರುವ ತಂಡಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಕೂಡ ಒಂದಾಗಿದ್ದು ಹರಾಜಿಗೂ ಮುನ್ನ ಲಕ್ನೋ ಕೆಎಲ್ ರಾಹುಲ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿ ನಾಯಕನನ್ನಾಗಿ ಆಯ್ಕೆ ಮಾಡಿತ್ತು. ನಂತರ ಹರಾಜಿನಲ್ಲಿ ದಕ್ಷಿಣ ಆಫ್ರಿಖಾದ ಕ್ರಿಕೆಟಿಗ ಕ್ವಿಂಟನ್ ಡಿಕಾಕ್ ಅವರನ್ನು ಕೂಡ ತಂಡ ಸೇರ್ಪಡೆಗೊಳಿಸುವಲ್ಲಿ ಯಶಸ್ವಿಯಾಗಿದೆ. ಈಗಾಗಲೇ ಈ ಇಬ್ಬರು ಆಟಗಾರರು ಕೂಡ ತಮ್ಮ ತಮ್ಮ ತಂಡಗಳ ಪರವಾಗಿ ಆರಂಭಿಕರಾಗಿ ಅತ್ಯುತ್ತಮ ಯಶಸ್ಸು ಸಾಧಿಸಿದ್ದು ಈ ಬಾರಿ ಸೂಪರ್ ಜೈಂಟ್ಸ್ ತಂಡದ ಪರವಾಗಿ ಆರಂಭಿಕರಾಗಿ ಕಣಕ್ಕಿಳಿಯುವುದರಲ್ಲಿ ಅನುಮಾನವಿಲ್ಲ.

ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ ಹಾಗೂ ಶಿಖರ್ ಧವನ್
ಭಾರತೀಯ ತಂಡದ ಆಟಗಾರರಾದ ಮಯಾಂಕ್ ಅಗರ್ವಾಲ್ ಹಾಗೂ ಶಿಖರ್ ಧವನ್ ಈ ಬಾರಿಯ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿ ಜೊತೆಯಾಗಿ ಆಡಲಿದ್ದಾರೆ. ಮಯಾಮಕ್ ಅಗವಾರ್ಲ್ ನಾಯಕನಾಗಿ ಆಯ್ಕೆಯಾಗಿದ್ದರೆ ಸ್ಪೋಟಕ ಆರಂಭಿಕ ಆಟಗಾರ ಶಿಖರ್ ಧವನ್ ಅವರನ್ನು ಹರಾಜಿನ ಮೂಲಕ ತೆಕ್ಕೆಗೆ ಹಾಕಿಕೊಳ್ಳಲು ಪಂಜಾಬ್ ಕಿಂಗ್ಸ್ ಯಶಸ್ವಿಯಾಗಿದೆ. ಈ ಇಬ್ಬರು ಆಟಗಾರರು ಈ ಬಾರಿ ಪಂಜಾಬ್ ಕಿಂಗ್ಸ್ ಪರವಾಗಿ ಆರಂಭಿಕರಾಗಿ ಕಣಕ್ಕಿಳಿಯುವುದರಲ್ಲಿ ಅನುಮಾನವಿಲ್ಲ. ಅನುಭವಿ ಶಿಖರ್ ಧವನ್ ಭಾರತ ತಂಡದ ಪರವಾಗಿ ಮಾತ್ರವಲ್ಲದೆ ಐಪಿಎಲ್‌ನಲ್ಲಿಯೂ ಸತತವಾಗಿ ಸ್ಥಿರ ಪ್ರದರ್ಶನ ನಿಡಿಕೊಂಡು ಬಂದಿದ್ದಾರೆ. ಕಳೆದ ಆವೃತ್ತಿಯಲ್ಲೂ ತಮ್ಮ ಅತ್ಯುತ್ತಮ ಫಾರ್ಮ್ ಪ್ರದರ್ಶಿಸಿದ್ದ ಧವನ್ ಈ ಬಾರಿಯೂ ಅಬ್ಬರಿಸಲು ಸಜ್ಜಾಗಿದ್ದಾರೆ. ಇನ್ನು ನಾಯಕ ಮಯಾಂಕ್ ಅಗರ್ವಾಕ್ ಕೂಡ ಐಪಿಎಲ್‌ನಲ್ಲಿ ಅತ್ಯುತ್ತಮ ಆರಂಭಿಕ ಆಟಗಾರನಾಗಿ ಗುರುತಿಸಿಕೊಂಡಿದ್ದು ಅದ್ಭುತ ಆವೃತ್ತಿಗಾಗಿ ಎದುರು ನೋಡುತ್ತಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ ಮತ್ತು ಫೃಥ್ವಿ ಶಾ
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಆರಂಭಿಕನಾಗಿ ಮಿಂಚಿರುವ ಪೃಥ್ವಿ ಶಾ ಅವರನ್ನು ಈ ಬಾರಿ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಉಳಿಸಿಕೊಂಡಿತ್ತು. ನಂತರ ನಡೆದ ಹರಾಜಿನಲ್ಲಿ ಶಿಧನ್ ಧವನ್ ಅವರನ್ನು ಸೇರ್ಪಡೆಗೊಳಿಸಲು ವಿಫಲವಾದರು ಕೂಡ ಮತ್ತೋರ್ವ ಐಪಿಎಲ್ ಕಂಡ ಅದ್ಭುತ ಆರಂಭಿಕರಲ್ಲೊ ಒಬ್ಬರಾಗಿರುವ ಆಸ್ಟ್ರೇಲಿಯಾ ಮೂಲದ ಡೇವಿಡ್ ವಾರ್ನರ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸ್ಪೋಟಕ ಆರಂಭಿಕ ಆಟಗಾರರನ್ನು ಹೊಂದಿದಂತಾಗಿದೆ. ಈ ಜೋಡಿ ಕೂಡ ಈ ಬಾರಿಯ ಐಪಿಎಲ್‌ನ ಟಾಪ್ ಐದು ಅತ್ಯುತ್ತಮ ಆರಂಭಿಕ ಆಟಗಾರರಲ್ಲಿ ಒಬ್ಬರಾಗಿದ್ದಾರೆ.

ಮುಂಬೈ ಇಂಡಿಯನ್ಸ್ ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್
ಐಪಿಎಲ್‌ನ ಅತ್ಯಂತ ಯಶಸ್ವೀ ತಂಡವಾಗಿರುವ ಮುಂಬೈ ಇಂಡಿಯನ್ಸ್ ಈ ಬಾರಿ ಕ್ವಿಂಟನ್ ಡಿಕಾಕ್ ಅವರನ್ನು ಮತ್ತೆ ತಂಡಕ್ಕೆ ಸೇರ್ಪಡೆಗೊಳಿಸಲು ವಿಫಲವಾಗಿದೆ. ಆದರೆ ಮುಂಬೈ ಇಂಡಿಯನ್ಸ್ ರಂಡದ ಆರಂಭಿಕ ಜೋಡಿ ಈಗಲೂ ಟಾಪ್ 5ರಲ್ಲಿ ಕಾಣಿಸಿಕೊಳ್ಳುವುದಲ್ಲಿ ಅನುಮಾನವಿಲ್ಲ. ನಾಯಕ ರೋಹಿತ್ ಶರ್ಮಾಗೆ ಯುವ ಆಟಗಾರ ಇಶಾನ್ ಕಿಶನ್ ಆರಂಭಿಕನಾಗಿ ಈ ಬಾರಿಯ ಟೂರ್ನಿಯಲ್ಲಿ ಸಾಥ್ ನೀಡಲಿದ್ದಾರೆ. ಇಶಾನ್ ಕಿಶನ್ ಐಪಿಎಲ್‌ನಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ತಂಡದ ಪರವಾಗಿಯೂ ಆರಂಭಿಕನಾಗಿ ಸಮರ್ಥ ಎಂದು ಸಿಕ್ಕ ಅವಕಾಶದಲ್ಲಿ ಸಾಬೀತುಪಡಿಸಿದ್ದಾರೆ. ಇದೀಗ ಐಪಿಎಲ್‌ನಲ್ಲಿ ಆರಂಭಿಕನಾಗಿ ನಾಯಕ ರೋಹಿತ್ ಶರ್ಮಾಗೆ ಸಾಥ್ ನೀಡಲು ಸಜ್ಜಾಗಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿಸ್
ಈ ಬಾರಿಯ ಐಪಿಎಲ್‌ನಲ್ಲಿ ಅತ್ಯುತ್ತಮ ಆರಂಭಿಕ ಜೋಡಿಯಲ್ಲಿ ಐದನೇ ಜೋಡಿಯಾಗಿ ಆರ್‌ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಆರಂಭಿಕನಾಗಿ ಅದ್ಭುತ ಯಶಸ್ಸು ಸಾಧಿಸಿದ್ದರೆ ಈ ಬಾರಿಯ ಆರ್‌ಸಿಬಿ ತಂಡಕ್ಕೆ ಹೊಸದಾಗಿ ಸೇರ್ಪಡೆಯಾಗಿ ನಾಯಕನಾಗಿ ಆಯ್ಕೆಯಾಗಿರುವ ಫಾಫ್ ಡು ಪ್ಲೆಸಿಸ್ ಅದ್ಭುತ ಆರಂಭಿಕ ಆಟಗಾರ ಎಂಬುದರಲ್ಲಿ ಅನುಮಾನವಿಲ್ಲ. ಈ ಜೋಡಿ ಈ ಬಾರಿ ಆರ್‌ಸಿಬಿ ಪರವಾಗಿ ಯಾವ ರೀತಿ ಮ್ಯಾಜಿಕ್ ಮಾಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಮತ್ತೊಂದೆಡೆ ತಂಡದ ಹೊಂದಾಣಿಕೆಯ ದೃಷ್ಟಿಯಿಂದ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡಲಿಳಿಯಲಿ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದು ಈ ಬಗ್ಗೆ ಮ್ಯಾನೇಜ್‌ಮೆಂಟ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಕೂಡ ಕುತೂಹಲ ಮೂಡಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications