ಮುಂಬೈ ವಿರುದ್ಧ ಶತಕ ಬಾರಿಸಿ ಗೆದ್ದ ಖುಷಿಯಲ್ಲಿದ್ದ ರಾಹುಲ್‌ಗೆ ಆಘಾತ; ಬ್ಯಾನ್ ಆಗ್ತಾರಾ ರಾಹುಲ್?

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 37ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸೆಣಸಾಟ ನಡೆಸಿದ್ದು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 36 ರನ್‌ಗಳ ಗೆಲುವನ್ನು ಸಾಧಿಸಿದೆ. ಈ ಗೆಲುವಿನ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಪ್ಲೇಆಫ್ ಪ್ರವೇಶಿಸುವ ಆಸೆಯನ್ನು ಮತ್ತಷ್ಟು ಬಲಪಡಿಸಿಕೊಂಡಿದ್ದು, ಸೋಲನ್ನು ಕಂಡ ಮುಂಬೈ ಇಂಡಿಯನ್ಸ್ ತನ್ನ ಸೋಲಿನ ಸರಪಳಿಯನ್ನು ಮುಂದುವರೆಸಿದೆ.
ಲಕ್ನೋ ವಿರುದ್ಧ ಸೋತ ಮುಂಬೈ ಇಂಡಿಯನ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಒಟ್ಟು 8 ಪಂದ್ಯಗಳನ್ನು ಪೂರೈಸಿದ್ದು, ಎಲ್ಲಾ ಪಂದ್ಯಗಳಲ್ಲಿಯೂ ಸೋತು ಗೆಲುವಿನ ಖಾತೆ ತೆರೆಯಲಾದೇ ಮಕಾಡೆ ಮಲಗಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಕಲೆಹಾಕಿ ಎದುರಾಳಿ ಮುಂಬೈ ಇಂಡಿಯನ್ಸ್ ತಂಡಕ್ಕೆ 169 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತಲು ಯತ್ನಿಸಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 132 ರನ್ ಕಲೆಹಾಕಿ 36 ರನ್‌ಗಳ ಹೀನಾಯ ಸೋಲನ್ನು ಕಂಡು ಈ ಬಾರಿಯೂ ಸಹ ಗೆಲುವಿನ ಖಾತೆ ತೆರೆಯುವಲ್ಲಿ ವಿಫಲವಾಯಿತು.
ಇನ್ನು ಲಕ್ನೋ ಸೂಪರ್ ಜೈಂಟ್ಸ್ ಪರ ತಂಡದ ಎಲ್ಲಾ ಬ್ಯಾಟ್ಸ್‌ಮನ್‌ಗಳು ವಿಫಲರಾದರೆ, ನಾಯಕ ಕೆಎಲ್ ರಾಹುಲ್ ಮಾತ್ರ ಭರ್ಜರಿ ಶತಕ ಸಿಡಿಸಿ ಮಿಂಚಿದರು. ಒಂದೆಡೆ ತಂಡದ ಪ್ರಮುಖ ವಿಕೆಟ್ ಉರುಳಿತ್ತಿದ್ದರೆ ಮತ್ತೊಂದೆಡೆ ಏಕಾಂಗಿ ಹೋರಾಟ ನಡೆಸಿದ ಕೆಎಲ್ ರಾಹುಲ್ 62 ಎಸೆತಗಳಲ್ಲಿ 103 ರನ್ ಬಾರಿಸಿ ಅಜೇಯರಾಗಿ ಉಳಿದರು ಹಾಗೂ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಕೆಎಲ್ ರಾಹುಲ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನೂ ಸಹ ಪಡೆದರು. ಹೀಗೆ ಉತ್ತಮ ಪ್ರದರ್ಶನ ನೀಡಿ ಮಿಂಚಿದ ಕೆಎಲ್ ರಾಹುಲ್‌ಗೆ ಪಂದ್ಯ ಮುಕ್ತಾಯವಾದ ನಂತರ ದಂಡ ವಿಧಿಸಲಾಗಿದೆ. ಈ ಕುರಿತಾದ ಮತ್ತಷ್ಟು ಮಾಹಿತಿ ಕೆಳಕಂಡಂತಿದೆ..

ನಿಧಾನಗತಿಯ ಬೌಲಿಂಗ್‌ಗೆ ದಂಡ
ಹೌದು, ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕೆ ನಿಯಮದ ಪ್ರಕಾರ ಕೆಎಲ್ ರಾಹುಲ್‌ಗೆ 24 ಲಕ್ಷ ದಂಡವನ್ನು ವಿಧಿಸಲಾಗಿದೆ. ಇನ್ನು ಇದು ಎರಡನೇ ಬಾರಿಗೆ ಲಕ್ನೋ ಸೂಪರ್ ಜೈಂಟ್ಸ್ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣ ಕೆಎಲ್ ರಾಹುಲ್‌ಗೆ 24 ಲಕ್ಷ ದಂಡದ ಜೊತೆ ತಂಡದ ಇತರೆ ಅಟಗಾರರಿಗೆ ತಲಾ 6 ಲಕ್ಷ ಅಥವಾ ಶೇ.25ರಷ್ಟು ದಂಡವನ್ನು ವಿಧಿಸಲಾಗಿದೆ.

ಮತ್ತೊಮ್ಮೆ ತಪ್ಪಾದರೆ ಕೆಎಲ್ ರಾಹುಲ್ ಬ್ಯಾನ್
ಇನ್ನು ಕೆಎಲ್ ರಾಹುಲ್ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಇದು ಎರಡನೇ ಬಾರಿಗೆ ನಿಧಾನಗತಿಯ ಬೌಲಿಂಗ್ ಮಾಡಿದ ಅಪರಾಧದಡಿಯಲ್ಲಿ ದಂಡಕ್ಕೆ ಗುರಿಯಾಗಿದ್ದಾರೆ. ಹೀಗೆ ಎರಡು ಬಾರಿ ನಿಧಾನಗತಿಯ ಬೌಲಿಂಗ್ ಮಾಡಿ ಅಪರಾಧವೆಸಗಿರುವ ಕೆಎಲ್ ರಾಹುಲ್ ಮತ್ತೊಮ್ಮೆ ನಿಧಾನಗತಿಯ ಬೌಲಿಂಗ್ ಮಾಡಿಸಿದ ಅಪರಾಧವೆಸಗಿದರೆ 30 ಲಕ್ಷ ದಂಡ ಹಾಗೂ ಒಂದು ಪಂದ್ಯದ ಬ್ಯಾನ್ ಶಿಕ್ಷೆ ಅನುಭವಿಸಲಿದ್ದಾರೆ.

ಶತಕ ಬಾರಿಸಿ ಅಬ್ಬರಿಸಿ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಏರಿಕೆ ಕಂಡ ಕೆಎಲ್
ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಶತಕ ಬಾರಿಸಿ ಅಬ್ಬರಿಸಿದ ಕೆಎಲ್ ರಾಹುಲ್ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಏರಿಕೆ ಕಂಡಿದ್ದಾರೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 8 ಪಂದ್ಯಗಳನ್ನಾಡಿ 368 ರನ್ ಕಲೆಹಾಕಿರುವ ಕೆಎಲ್ ರಾಹುಲ್ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ದ್ವಿತೀಯ ಸ್ಥಾನದಲ್ಲಿದ್ದರೆ, 7 ಪಂದ್ಯಗಳನ್ನಾಡಿ 491 ರನ್ ರನ್ ಬಾರಿಸಿರುವ ಜೋಸ್ ಬಟ್ಲರ್ ಪ್ರಥಮ ಸ್ಥಾನದಲ್ಲಿದ್ದಾರೆ ಹಾಗೂ 6 ಪಂದ್ಯಗಳನ್ನಾಡಿ 295 ರನ್ ಗಳಿಸಿರುವ ಹಾರ್ದಿಕ್ ಪಾಂಡ್ಯ ತೃತೀಯ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications