ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

KKR vs LSG: ವಿಕೆಟ್ ಕಳೆದುಕೊಳ್ಳದೇ 210 ರನ್ ಚಚ್ಚಿ, 211 ರನ್ ಗುರಿ ನೀಡಿ ಇತಿಹಾಸ ಬರೆದ ಲಕ್ನೋ!

IPL 2022: LSG sets new openig record in IPL history; KKR needs 211 runs to win

ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಟೂರ್ನಿಯ 66ನೇ ಹಾಗೂ ತಮ್ಮ ಕೊನೆಯ ಲೀಗ್ ಹಂತದ ಪಂದ್ಯಗಳಲ್ಲಿ ಇಂದು ಸೆಣಸಾಟ ನಡೆಸುತ್ತಿವೆ. ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ಡಾ ಡಿವೈ ಪಾಟೀಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಆಯ್ದುಕೊಂಡರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಯಾವುದೇ ವಿಕೆಟ್ ಕಳೆದುಕೊಳ್ಳದೇ 20 ಓವರ್‌ಗಳಲ್ಲಿ 210 ರನ್ ಬಾರಿಸಿ ಎದುರಾಳಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 211 ರನ್‌ಗಳ ಗುರಿಯನ್ನು ನೀಡಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಮತ್ತು ಕ್ವಿಂಟನ್ ಡಿಕಾಕ್ ವಿಕೆಟ್ ಒಪ್ಪಸದೇ ಅಬ್ಬರಿಸಿದ್ದಾರೆ. ಕ್ವಿಂಟನ್ ಡಿ ಕಾಕ್ 70 ಎಸೆತಗಳಲ್ಲಿ ಅಜೇಯ 140 ರನ್ ಬಾರಿಸಿದರೆ, ಕೆಎಲ್ ರಾಹುಲ್ 51 ಎಸೆತಗಳಲ್ಲಿ 68 ರನ್ ಕಲೆಹಾಕಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ನೂತನ ಇತಿಹಾಸ ಬರೆದಿದ್ದಾರೆ. ಹೌದು, ಇದು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ತಂಡವೊಂದರ ಆರಂಭಿಕ ಜೋಡಿ ಕಲೆಹಾಕಿರುವ ಅತ್ಯಧಿಕ ರನ್ ಇದಾಗಿದೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 211 ರನ್‌ಗಳ ಗುರಿಯನ್ನು ನೀಡಿದೆ.

ಆಡುವ ಬಳಗಗಳು:

ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್)ಕೆಎಲ್ ರಾಹುಲ್ (ನಾಯಕ), ಅವಿನ್ ಲೆವಿಸ್, ದೀಪಕ್ ಹೂಡಾ, ಮನನ್ ವೋಹ್ರಾ, ಮಾರ್ಕಸ್ ಸ್ಟೊಯಿನಿಸ್, ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌಂತಮ್, ಮೊಹ್ಸಿನ್ ಖಾನ್, ಅವೇಶ್ ಖಾನ್ ಮತ್ತು ರವಿ ಬಿಷ್ಣೋಯ್

ರಷ್ಯಾ ಜೊತೆಗಿನ ಭಾರತದ ಬಂಧ ಬಿಡಿಸಲು ಅಮೆರಿಕದಿಂದ ಭಾರತಕ್ಕೆ ಬಿಗ್ ಆಫರ್ | Oneindia Kannada

ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ವೆಂಕಟೇಶ್ ಅಯ್ಯರ್, ಅಭಿಜೀತ್ ತೋಮರ್, ಶ್ರೇಯಸ್ ಅಯ್ಯರ್(ನಾಯಕ), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್(ವಿಕೆಟ್ ಕೀಪರ್), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಉಮೇಶ್ ಯಾದವ್, ಟಿಮ್ ಸೌಥಿ, ವರುಣ್ ಚಕ್ರವರ್ತಿ

Story first published: Thursday, May 19, 2022, 10:05 [IST]
Other articles published on May 19, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X