For Quick Alerts
ALLOW NOTIFICATIONS  
For Daily Alerts
 

LSG vs GT: ಗುಜರಾತ್ ಟೈಟನ್ಸ್ ಎದುರು ಕೆಎಲ್ ರಾಹುಲ್ ಬಳಗಕ್ಕೆ ಭಾರೀ ಮುಖಭಂಗ

IPL 2022: LSG vs GT Highlights: Gujarat Titans Beat Lucknow Super Giants by 62 runs

ಪ್ರಸ್ತುತ ನಡೆಯುತ್ತಿರುವ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದು, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗುಜರಾತ್ ಟೈಟನ್ಸ್ 62 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗುಜರಾತ್ ಟೈಟನ್ಸ್ 62 ರನ್‌ಗಳ ಅಂತರದ ಜಯ ದಾಖಲಿಸಿ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಿಂದ ಒಂದನೇ ಸ್ಥಾನಕ್ಕೆ ಜಿಗಿತ ಕಂಡಿದೆ.

ಇನ್ನು ಈ ಪಂದ್ಯದಲ್ಲಿ ಸೋಲನ್ನು ಅನುಭವಿಸಿರುವ ಲಕ್ನೋ ಸೂಪರ್ ಜೈಂಟ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನಾಲ್ಕನೇ ಪರಾಭವವನ್ನು ಕಂಡಿದೆ. ಮೊದಲು ಬೌಲಿಂಗ್ ಮಾಡಿ ಗುಜರಾತ್ ಟೈಟನ್ಸ್ ತಂಡ ಬೃಹತ್ ಮೊತ್ತ ಗಳಿಸದಂತೆ ಹಿಡಿತ ಸಾಧಿಸಿದ್ದ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟಿಂಗ್‌ನಲ್ಲಿಯೂ ಅದೇ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಗುಜರಾತ್ ಟೈಟನ್ಸ್ ಬೌಲರ್‌ಗಳ ದಾಳಿಗೆ ತತ್ತರಿಸಿದ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟ್ಸ್‌ಮನ್‌ಗಳು 82 ರನ್‌ಗಳಿಸಲಷ್ಟೇ ಶಕ್ತರಾದರು.

IPL 2022: LSG vs GT Highlights: Gujarat Titans Beat Lucknow Super Giants by 62 runs

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 144 ರನ್ ಕಲೆಹಾಕಿ, ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 145 ರನ್‌ಗಳ ಸಾಧಾರಣ ಮೊತ್ತದ ಗುರಿ ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಕೆಎಲ್ ರಾಹುಲ್ ಬಾಯ್ಸ್ 13.5 ಓವರ್‌ಗಳಲ್ಲಿ 82 ರನ್‌ಗಳಿಗೆ ಆಲ್ ಔಟ್ ಆದರು.

ಗುಜರಾತ್ ಟೈಟನ್ಸ್ ಬ್ಯಾಟಿಂಗ್
ಮೊದಲು ಬ್ಯಾಟ್ ಮಾಡಿದ್ದ ಗುಜರಾತ್ ಟೈಟನ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಶುಭ್‌ಮನ್ ಗಿಲ್ ಮತ್ತು ವೃದ್ದಿಮಾನ್ ಸಹಾ ಮೊದಲ ವಿಕೆಟ್‌ಗೆ ಉತ್ತಮ ಮೊತ್ತ ಕಲೆ ಹಾಕುವಲ್ಲಿ ಎಡವಿದರು. 2.4 ಓವರ್‌ಗಳಾಗಿದ್ದಾಗ ವೃದ್ದಿಮಾನ್ ಸಹಾ 11 ಎಸೆತಗಳಲ್ಲಿ 5 ರನ್ ಬಾರಿಸಿ ಔಟಾದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಥ್ಯೂ ವೇಡ್ 7 ಎಸೆತಗಳಲ್ಲಿ 10 ರನ್ ಕಲೆ ಹಾಕಿ ಔಟಾದರು. ಆರಂಭಿಕ ಆಟಗಾರ ಶುಭ್‌ಮನ್ ಗಿಲ್ 49 ಎಸೆತಗಳಲ್ಲಿ 63 ರನ್ ಗಳಿಸಿ ಮಿಂಚಿದರು.

ಇನ್ನುಳಿದಂತೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ 11 ರನ್, ಡೇವಿಡ್ ಮಿಲ್ಲರ್ 24 ಎಸೆತಗಳಲ್ಲಿ 26 ರನ್ ಗಳಿಸಿ ಹೋಲ್ಡರ್‌ಗೆ ವಿಕೆಟ್ ಒಪ್ಪಿಸಿದರು. ರಾಹುಲ್ ತೇವಾಟಿಯಾ 22 ರನ್ ಗಳಿಸಿ ಅಜೇಯರಾಗಿ ಉಳಿದರು.

ಹೀಗೆ ಗುಜರಾತ್ ಟೈಟನ್ಸ್ ತಂಡದ ಪರ ಶುಭ್‌ಮನ್ ಗಿಲ್, ಡೇವಿಡ್ ಮಿಲ್ಲರ್ ಮತ್ತು ರಾಹುಲ್ ತೇವಾಟಿಯಾ ಹೊರತುಪಡಿಸಿ ಉಳಿದ ಯಾವುದೇ ಆಟಗಾರರು ಸಹ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲರಾದರು.

IPL 2022: LSG vs GT Highlights: Gujarat Titans Beat Lucknow Super Giants by 62 runs

ಲಕ್ನೋ ಸೂಪರ್ ಜೈಂಟ್ಸ್ ಬೌಲಿಂಗ್
ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ರಮುಖ ಬೌಲರ್ ಆವೇಶ್ ಖಾನ್ ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ 26 ರನ್ ನೀಡಿ 5 ವಿಕೆಟ್ ಪಡೆದರು. ಇನ್ನುಳಿದಂತೆ ಮೊಹ್ಸಿನ್ ಖಾನ್, ಜೇಸನ್ ಹೋಲ್ಡರ್ ತಲಾ ಒಂದೊಂದು ವಿಕೆಟ್ ಪಡೆದರು.

Rashid Khan ಗುಜರಾತ್ ತಂಡಕ್ಕೆ ಕೊಟ್ಟ ಕೊಡುಗೆ ಇದೇ | Oneindia Kannada

ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟಿಂಗ್:
ಗುಜರಾತ್ ಟೈಟನ್ಸ್ ನೀಡಿದ ಸಾಧಾರಣ ಗುರಿಯನ್ನು ಬೆನ್ನತ್ತಲು ಯತ್ನಿಸಿದ ಲಕ್ನೋ ಸೂಪರ್ ಜೈಂಟ್ಸ್ ಪರ ದೀಪಕ್ ಹೂಡಾ ಹೊರತುಪಡಿಸಿ ಬೇರೆ ಯಾವುದೇ ಆಟಗಾರ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದರು. ದೀಪಕ್ ಹೂಡಾ 26 ಎಸೆತಗಳಲ್ಲಿ 27 ರನ್ ಬಾರಿಸಿದರೆ, ಕ್ವಿಂಟನ್ ಡಿಕಾಕ್ 11, ಕೆಎಲ್ ರಾಹುಲ್ 8, ಕರಣ್ ಶರ್ಮ 4, ಕೃಣಾಲ್ ಪಾಂಡ್ಯ 5, ಆಯುಷ್ ಬದೋನಿ 8, ಸ್ಟೋಯ್ನಿಸ್ 2, ಹೋಲ್ಡರ್1, ಮೊಹ್ಸಿನ್ ಖಾನ್ 1, ಚಮೀರ ಔಟಾಗದೇ 0, ಆವೇಶ್ ಖಾನ್ 12 ರನ್ ಗಳಿಸಿ ಔಟಾದರು.

ಗುಜರಾತ್ ಟೈಟನ್ಸ್ ಬೌಲಿಂಗ್
ಗುಜರಾತ್ ಟೈಟನ್ಸ್ ತಂಡದ ಪರ ರಶೀದ್ ಖಾನ್ 4 ವಿಕೆಟ್ ಪಡೆದು ಮಿಂಚಿದರೆ, ಯಶ್ ದಯಾಳ್ ಮತ್ತು ರವಿಶ್ರೀನಿವಾಸನ್ ಸಾಯಿ ಕಿಶೋರ್ ತಲಾ 2 ವಿಕೆಟ್ ಹಾಗೂ ಮೊಹಮ್ಮದ್ ಶಮಿ ಒಂದು ವಿಕೆಟ್ ಪಡೆದರು.

Story first published: Wednesday, May 11, 2022, 9:19 [IST]
Other articles published on May 11, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+