Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs GT Preview: ಪ್ರಿವ್ಯೂ, ಪಿಚ್ ರಿಪೋರ್ಟ್, ಹವಾಮಾನ ವರದಿ

IPL 2022: LSG vs GT Preview, Weather Forecast and Pitch Report details

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮಂಗಳವಾರ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವೆ ಕದನ ನಡೆಯಲಿದೆ. ಈ ಎರಡೂ ತಂಡಗಳಿಗೂ ಇದು ಚೊಚ್ಚಲ ಆವೃತ್ತಿಯಾಗಿದ್ದು ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದೆ. ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಈ ಎರಡು ತಂಡಗಳೇ ಇದ್ದು ಅಂಕಗಳಿಕೆಯಲ್ಲಿಯೂ ಸಮ ಸಾಧನೆ ಮಾಡಿದೆ. ಎರಡು ತಂಗಳು ಕೂಡ ಈವರೆಗೆ 11 ಪಂದ್ಯಗಳನ್ನು ಆಡಿದ್ದು ಅವುಗಳ ಪೈಕಿ 8 ಗೆಲುವು ಹಾಗೂ 3 ಸೋಲು ಅನುಭವಿಸಿದ್ದು 16 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಆದರೆ ಲಕ್ನೋ ಸೂಪರ್ ಜೈಂಟ್ಸ್ ತಂಡ ನೆಟ್‌ರನ್‌ರೇಟ್‌ನಲ್ಲಿ ಮೇಲುಗೈ ಸಾಧಿಸಿರುವ ಕಾರಣ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ ಜಿಟಿ ಎರಡನೇ ಸ್ಥಾನದಲ್ಲಿದೆ.

ಮಂಗಳವಾರ ನಡೆಯಲಿರುವ ಮುಖಾಮುಖಿಯಲ್ಲಿ ಯಾವ ತಂಡ ಅಗ್ರಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ. ಈ ಎರಡು ತಂಡಗಳು ಕೂಡ ಈ ಟೂರ್ನಿಯಲ್ಲಿ ಮೊದಲ ಸುತ್ತಿನಲ್ಲಿ ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿತ್ತು. ಆದರೆ ಸತತ ಗೆಲುವಿನಇಂದಾಗಿ ಯಶಸ್ಸಿನಲ್ಲಿ ತೇಲುತ್ತಿದ್ದ ಗುಜರಾತ್ ತಂಡ ಕಳೆದ ಎರಡು ಪಂದ್ಯಗಳಲ್ಲಿ ಸತತ ಸೋಲು ಅನುಭವಿಸಿದ್ದು ಹಿನ್ನಡೆ ಅನುಭವಿಸಿದೆ. ಆದರೆ ಲಕ್ನೋ ತಂಡ ಕಳೆದ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಬೀಗುತ್ತಿದ್ದ ಮಂಗಳವಾರದ ಕದನ ಕುತೂಹಲ ಹೆಚ್ಚಿಸಿದೆ.

ಸ್ಕ್ವಾಡ್‌ಗಳು: ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌತಮ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್, ಎವಿನ್ ಲೂಯಿಸ್, ಆಂಡ್ರ್ಯೂ ಟೈ, ಮನೀಶ್ ಪಾಂಡೆ, ಶಹಬಾಜ್ ನದೀಮ್, ಮನನ್ ವೋಹ್ರಾ, ಕೈಲ್ ಮೇಯರ್ಸ್, ಅಂಕಿತ್ ರಾಜ್‌ಪೂತ್, ಮೊಹ್ಸಿನ್ ಖಾನ್, ಕರಣ್ ಶರ್ಮಾ, ಮಯಾಂಕ್ ಯಾದವ್

IPL 2022: LSG vs GT Preview, Weather Forecast and Pitch Report details

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳ ನಡುವಿನ ಪಂದ್ಯ ಮೇ 10 ರಂದು ಮಂಗಳವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸೊಯೇಶನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ಪುಣೆಯ ಎಂಸಿಎ ಕ್ರೀಡಾಂಗಣ ಆರಂಭಿಕ ಹಂತದಲ್ಲಿ ಬ್ಯಾಟರ್‌ಗಳಿಗೆ ಹೆಚ್ಚಿನ ನೆರವು ನೀಡಲಿದೆ. ಆದರೆ ಪಂದ್ಯ ಮುಂದುವರಿದಂತೆ ಸ್ಪಿನ್ನರ್‌ಗಳು ಮಿಂಚುವ ಸಾಧ್ಯತೆಯಿದೆ. ಆದರೆ ರನ್ ಬೆನ್ನಟ್ಟುವ ತಂಡ ಈ ಪಿಚ್‌ನ ಲಾಭವನ್ನು ಪಡೆಯುವ ಸಾಧ್ಯತೆ ಹೆಚ್ಚಿದೆ. ಬೌಂಡರಿ ಗಾತ್ರ 80-85 ಮೀಟರ್‌ಗಳಿದೆ.

ಸಂಭಾವ್ಯ ಆಡುವ ಬಳಗ: ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಅವೇಶ್ ಖಾನ್, ಮೊಹ್ಸಿನ್ ಖಾನ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಪ್ರದೀಪ್ ಸಾಂಗ್ವಾನ್, ಲಾಕಿ ಫರ್ಗುಸನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ

Story first published: Tuesday, May 10, 2022, 16:21 [IST]
Other articles published on May 10, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+