Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs KKR: ಕೊಲ್ಕತ್ತಾಗೆ ಸವಾಲಿನ ಮೊತ್ತ ನಿಗದಿಪಡಿಸಿದ ಲಕ್ನೋ

IPL 2022, LSG vs KKR: Lucknow Super giants Sets Target Of 177 Runs To KKR

ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯ ಭಾರೀ ಪೈಪೋಟಿಗೆ ಕಾರಣವಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಅಂತಿಮ ಹಂತದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಕಾರಣ ಸವಾಲಿನ ಮೊತ್ತ ಪೇರಿಸಲು ಯಶಸ್ವಿಯಾಗಿದೆ. ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ 177 ರನ್‌ಗಳ ಗುರಿ ನಿಗದಿಪಡಿಸಿದೆ.

ಈ ಪಂದ್ಯದಲ್ಲಿ ಲಕ್ನೋ ನಾಯಕ ಕೆಎಲ್ ರಾಹುಲ್ ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದಿದ್ದರೂ ಒಂದೂ ಎಸೆತವನ್ನು ಎದುರಿಸುವ ಮುನ್ನವೇ ರನೌಟ್‌ಗೆ ಬಲಿಯಾದರು. ಆದರೆ ಎರಡನೇ ವಿಕೆಟ್‌ಗೆ ಜೊತೆಯಾದ ಕ್ವಿಂಟನ್ ಡಿಕಾಕ್ ಹಾಗೂ ದೀಒಕ್ ಹೂಡಾ ಅದ್ಭುತ ಪ್ರದರ್ಶನ ನೀಡಿದ್ದು ಎರಡನೇ ವಿಕೆಟ್‌ಗೆ 71 ರನ್‌ಗಳ ಜೊತೆಯಾಟವನ್ನು ನೀಡಿದರು. ಮಧ್ಯಮ ಓವರ್‌ಗಳಲ್ಲಿ ಲಕ್ನೋ ತಂಡ ಹಿನ್ನಡೆಯನ್ನು ಅನುಭವಿಸಿತು. ಹೆಚ್ಚು ವೇಗವಾಗಿ ರನ್‌ಗಳನ್ನು ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಅಂತಿಮ ಹಂತದಲ್ಲಿ ಮಾರ್ಕಸ್ ಸ್ಟೋಯ್ನಿಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಆಡುವ ಬಳಗ: ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ಕೃನಾಲ್ ಪಾಂಡ್ಯ, ಆಯುಷ್ ಬದೋನಿ, ಜೇಸನ್ ಹೋಲ್ಡರ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್, ಮೊಹ್ಸಿನ್ ಖಾನ್
ಬೆಂಚ್: ಕೃಷ್ಣಪ್ಪ ಗೌತಮ್, ಮನೀಶ್ ಪಾಂಡೆ, ಶಹಬಾಜ್ ನದೀಮ್, ಮನನ್ ವೋಹ್ರಾ, ಕೈಲ್ ಮೇಯರ್ಸ್, ಎವಿನ್ ಲೂಯಿಸ್, ಅಂಕಿತ್ ರಾಜ್‌ಪೂತ್, ಆಂಡ್ರ್ಯೂ ಟೈ, ಕರಣ್ ಶರ್ಮಾ, ಮಯಾಂಕ್ ಯಾದವ್

ಕೊಲಕ್ತ್ತಾ ನೈಟ್ ರೈಡರ್ಸ್: ಆರೋನ್ ಫಿಂಚ್, ಬಾಬಾ ಇಂದ್ರಜಿತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ರಿಂಕು ಸಿಂಗ್, ಅನುಕುಲ್ ರಾಯ್, ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಶಿವಂ ಮಾವಿ, ಹರ್ಷಿತ್ ರಾಣಾ
ಬೆಂಚ್: ಉಮೇಶ್ ಯಾದವ್, ಪ್ಯಾಟ್ ಕಮಿನ್ಸ್, ಸ್ಯಾಮ್ ಬಿಲ್ಲಿಂಗ್ಸ್, ವೆಂಕಟೇಶ್ ಅಯ್ಯರ್, ವರುಣ್ ಚಕ್ರವರ್ತಿ, ಅಜಿಂಕ್ಯ ರಹಾನೆ, ಮೊಹಮ್ಮದ್ ನಬಿ, ಶೆಲ್ಡನ್ ಜಾಕ್ಸನ್, ಚಾಮಿಕಾ ಕರುಣಾರತ್ನೆ, ಪ್ರಥಮ್ ಸಿಂಗ್, ಅಭಿಜಿತ್ ತೋಮರ್, ಅಮನ್ ಹಕೀಮ್ ಖಾನ್, ಅಶೋಕ್ ಶರ್ಮಾ, ರಮೇಶ್ ಕುಮಾರ್

Story first published: Saturday, May 7, 2022, 21:20 [IST]
Other articles published on May 7, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+