LSG vs KKR: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಹೀನಾಯವಾಗಿ ಸೋತ ಕೆಕೆಆರ್

ಐಪಿಎಲ್ ಅಂಗಳದಲ್ಲಿ ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಹೀನಾಯ ಸೋಲು ಅನುಭವಿಸಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡ ನೀಡಿದ್ದ 177 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೇವಲ 101 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡ 75 ರನ್‌ಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದೆ.
ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಯಾವ ಹಂತದಲ್ಲಿಯೂ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಪ್ರತಿರೋಧವೊಡ್ಡಲು ಸಫಲವಾಗಲಿಲ್ಲ. 177 ರನ್‌ಗಳ ಸವಾಳಿನ ಗುರಿಯನ್ನು ಬೆನ್ನಟ್ಟಿದ ಕೆಕೆಆರ್ ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತ್ತು. ಆರಂಭಿಕರಾದ ಬಾಬಾ ಇಂದ್ರಜಿತ್, ಅನುಭವಿ ಆರೋನ್ ಫಿಂಚ್, ನಾಯಕ ಶ್ರೇಯಸ್ ಐಯ್ಯರ್, ನಿತೀಶ್ ರಾಣಾ, ರಿಂಕು ಸಿಂಗ್ ಈ ಎಲ್ಲಾ ಅಗ್ರ ಕ್ರಮಾಂಕದ ಆಟಗಾರರು ಕೂಡ ಎಲ್‌ಎಸ್‌ಜಿ ಬೌಲಿಂಗ್ ದಾಳಿಯನ್ನು ಎದುರಿಸಲು ಸಂಪೂರ್ಣವಾಗಿ ವಿಫಲವಾದರು.
ಆದರೆ ಆಂಡ್ರೆ ರಸೆಲ್ ಮಾತ್ರ ಕೆಲ ಕೆಲ ಅಬ್ಬರದ ಪ್ರದರ್ಶನ ನೀಡಿ ಸಣ್ಣ ಚೇತರಿಕೆ ನೀಡಿದರು. 19 ಎಸೆತಗಳನ್ನು ಎದುರಿಸಿದ ಆಂಡ್ರೆ ರಸೆಲ್ 45 ರನ್ ಸಿಡಿಸಿ ಮಿಂಚಿದರು. ಇದರಲ್ಲಿ ಐದು ಭರ್ಜರಿ ಸಿಕ್ಸರ್ ಹಾಗೂ ಮೂರು ಬೌಂಡರಿ ಒಳಗೊಂಡಿತ್ತು. ಸುನಿಲ್ ನರೈನ್ ಕೂಡ 12 ಎಸೆತಗಳಲ್ಲಿ 22 ರನ್‌ಗಳ ಕೊಡುಗೆ ನೀಡಿದರು. ಈ ಇಬ್ಬರು ಆಟಗಾರರ ಕೊಡುಗೆಯಿಂದ ಕೆಕೆಆರ್ 101 ರನ್‌ಗಳನ್ನು ಗಳಿಸಲು ಶಕ್ತವಾಯಿತು.
ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿ 177 ರನ್‌ಗಳ ಗುರಿ ನಿಗದಿಪಡಿಸಿತ್ತು. ಈ ಪಂದ್ಯದಲ್ಲಿ ಲಕ್ನೋ ನಾಯಕ ಕೆಎಲ್ ರಾಹುಲ್ ಎಂದಿನಂತೆ ಆರಂಭಿಕನಾಗಿ ಕಣಕ್ಕಿಳಿದಿದ್ದರೂ ಒಂದೂ ಎಸೆತವನ್ನು ಎದುರಿಸುವ ಮುನ್ನವೇ ರನೌಟ್‌ಗೆ ಬಲಿಯಾದರು. ಆದರೆ ಎರಡನೇ ವಿಕೆಟ್‌ಗೆ ಜೊತೆಯಾದ ಕ್ವಿಂಟನ್ ಡಿಕಾಕ್ ಹಾಗೂ ದೀಒಕ್ ಹೂಡಾ ಅದ್ಭುತ ಪ್ರದರ್ಶನ ನೀಡಿದ್ದು ಎರಡನೇ ವಿಕೆಟ್‌ಗೆ 71 ರನ್‌ಗಳ ಜೊತೆಯಾಟವನ್ನು ನೀಡಿದರು.
ಮಧ್ಯಮ ಓವರ್‌ಗಳಲ್ಲಿ ಲಕ್ನೋ ತಂಡ ಹಿನ್ನಡೆಯನ್ನು ಅನುಭವಿಸಿತು. ಹೆಚ್ಚು ವೇಗವಾಗಿ ರನ್‌ಗಳನ್ನು ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಅಂತಿಮ ಹಂತದಲ್ಲಿ ಮಾರ್ಕಸ್ ಸ್ಟೋಯ್ನಿಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇನ್ನು ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರವಾಗಿ ಆವೇಶ್ ಖಾನ್ ಹಾಗೂ ಜೇಸನ್ ಹೋಲ್ಡರ್ ತಲಾ 3 ವಿಕೆಟ್ ಕಬಳಿಸಿ ಮಿಂಚಿದರು.
ಆಡುವ ಬಳಗ: ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ಕೃನಾಲ್ ಪಾಂಡ್ಯ, ಆಯುಷ್ ಬದೋನಿ, ಜೇಸನ್ ಹೋಲ್ಡರ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್, ಮೊಹ್ಸಿನ್ ಖಾನ್
ಬೆಂಚ್: ಕೃಷ್ಣಪ್ಪ ಗೌತಮ್, ಮನೀಶ್ ಪಾಂಡೆ, ಶಹಬಾಜ್ ನದೀಮ್, ಮನನ್ ವೋಹ್ರಾ, ಕೈಲ್ ಮೇಯರ್ಸ್, ಎವಿನ್ ಲೂಯಿಸ್, ಅಂಕಿತ್ ರಾಜ್‌ಪೂತ್, ಆಂಡ್ರ್ಯೂ ಟೈ, ಕರಣ್ ಶರ್ಮಾ, ಮಯಾಂಕ್ ಯಾದವ್
ಕೊಲಕ್ತ್ತಾ ನೈಟ್ ರೈಡರ್ಸ್: ಆರೋನ್ ಫಿಂಚ್, ಬಾಬಾ ಇಂದ್ರಜಿತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ರಿಂಕು ಸಿಂಗ್, ಅನುಕುಲ್ ರಾಯ್, ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಶಿವಂ ಮಾವಿ, ಹರ್ಷಿತ್ ರಾಣಾ
ಬೆಂಚ್: ಉಮೇಶ್ ಯಾದವ್, ಪ್ಯಾಟ್ ಕಮಿನ್ಸ್, ಸ್ಯಾಮ್ ಬಿಲ್ಲಿಂಗ್ಸ್, ವೆಂಕಟೇಶ್ ಅಯ್ಯರ್, ವರುಣ್ ಚಕ್ರವರ್ತಿ, ಅಜಿಂಕ್ಯ ರಹಾನೆ, ಮೊಹಮ್ಮದ್ ನಬಿ, ಶೆಲ್ಡನ್ ಜಾಕ್ಸನ್, ಚಾಮಿಕಾ ಕರುಣಾರತ್ನೆ, ಪ್ರಥಮ್ ಸಿಂಗ್, ಅಭಿಜಿತ್ ತೋಮರ್, ಅಮನ್ ಹಕೀಮ್ ಖಾನ್, ಅಶೋಕ್ ಶರ್ಮಾ, ರಮೇಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications