LSG vs MI: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ, ಪ್ಲೇಯಿಂಗ್ 11

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ದುಕೊಂಡಿದ್ದು, ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ.
ಐಪಿಎಲ್ 2022ರ 37ನೇ ಪಂದ್ಯದಲ್ಲಿ ಕೆ.ಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕೇವಲ ಒಂದು ಬದಲಾವಣೆ ಮಾಡಲಾಗಿದ್ದು, ಅವೇಶ್ ಖಾನ್ ಬದಲು ಮೊಹ್ಸಿನ್ ಖಾನ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ನೀಡಲಾಗಿದೆ.
ಈಗಾಗಲೇ ಏಳು ಪಂದ್ಯ ಸೋತಿರುವ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಳೆದ ಪಂದ್ಯದಲ್ಲೇ ಆಡಿದ ತಂಡವನ್ನೇ ಕಣಕ್ಕಿಳಿಸುತ್ತಿದ್ದು, ಯಾವುದೇ ಆಟಗಾರನ ಬದಲಾವಣೆ ಆಗಿಲ್ಲ.
ಐಪಿಎಲ್ ಇತಿಹಾಸದಲ್ಲಿ ಅತಿ ಕೆಟ್ಟ ಆರಂಭ ಪಡೆದಿರುವ ಮುಂಬೈ ಇಂಡಿಯನ್ಸ್ ಈಗಾಗಲೇ ಆಡಿರುವ ಏಳು ಪಂದ್ಯಗಳಲ್ಲಿ ಸೋಲನ್ನ ಕಂಡಿದ್ದು, ತನ್ನ ಫೇವರಿಟ್ ಪಿಚ್ ವಾಂಖೆಡೆ ಮೈದಾನದಲ್ಲಿ ಗೆಲುವಿನ ಖಾತೆ ತೆರೆಯಲು ಸಜ್ಜಾಗಿದೆ. ಎರಡು ವರ್ಷಗಳ ಬಳಿಕ ರೋಹಿತ್ ಬಳಗ ವಾಂಖೆಡೆ ಮೈದಾನದಲ್ಲಿ ಆಡಲು ರೆಡಿಯಾಗಿದೆ.
ಆದ್ರೆ ಮತ್ತೊಂದೆಡೆ ಲಕ್ನೋ ಸೂಪರ್‌ಜೈಂಟ್ಸ್ ಮೂರು ವಿಭಾಗದಲ್ಲಿ ಬಲಿಷ್ಠವಾಗಿದ್ದು, ಪಾಯಿಂಟ್ಸ್ ಟೇಬಲ್‌ನಲ್ಲಿ ಐದನೇ ಸ್ಥಾನದಲ್ಲಿದೆ. ಲಕ್ನೋ ಕೂಡ ಕಳೆದ ಪಂದ್ಯದಲ್ಲಿ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 18 ರನ್‌ಗಳ ಅಂತರದಲ್ಲಿ ಸೋಲನ್ನಪ್ಪಿತು.
ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್‌ಜೈಂಟ್ಸ್ ಪ್ಲೇಯಿಂಗ್ ಇಲೆವೆನ್ ಅನ್ನು ಈ ಕೆಳಗೆ ನೋಡಬಹುದು
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಕೀರಾನ್ ಪೊಲಾರ್ಡ್, ಹೃತಿಕ್ ಶೋಕೀನ್, ಡೇನಿಯಲ್ ಸ್ಯಾಮ್ಸ್, ಜಯದೇವ್ ಉನಾದ್ಕತ್, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್
ಲಕ್ನೋ ಸೂಪರ್‌ಜೈಂಟ್ಸ್ ಪ್ಲೇಯಿಂಗ್ 11
ಕೆ.ಎಲ್ ರಾಹುಲ್(ನಾಯಕ), ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಮನೀಶ್ ಪಾಂಡೆ, ದೀಪಕ್ ಹೂಡಾ, ಮಾರ್ಕಸ್ ಸ್ಟೊಯ್ನಿಸ್, ಆಯುಷ್ ಬದೋನಿ, ಜೇಸನ್ ಹೋಲ್ಡರ್, ಕೃನಾಲ್ ಪಾಂಡ್ಯ, ದುಷ್ಮಂತ ಚಮೀರಾ, ಮೊಹ್ಸಿನ್ ಖಾನ್, ರವಿ ಬಿಷ್ಣೋಯ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications