
ಐಪಿಎಲ್ 15ನೇ ಆವೃತ್ತಿಯ 37ನೇ ಪಂದ್ಯ ಭಾನುವಾರ ನಡೆಯಲಿದ್ದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ವಾಂಖೆಡೆ ಸ್ಟೇಡಿಯಮ್‌ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಟೂರ್ನಿಯಲ್ಲಿ ಸೋಲುಗಳನ್ನು ಮಾತ್ರವೇ ಕಂಡಿರುವ ಮುಂಬೈ ಇಂಡಿಯನ್ಸ್ ಈ ಪಂದ್ಯದಲ್ಲಿಯಾದರೂ ಗೆಲುವಿನ ರುಚಿ ಅನುಭವಿಸಲಿದೆಯಾ ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ಸವಾಲನ್ನು ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹೇಗೆ ಸ್ವೀಕರಿಸಲಿದೆ ಎಂಬುದಕ್ಕೆ ಭಾನುವಾರ ಉತ್ತರ ದೊರೆಯಲಿದೆ.
ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್‌ನಲ್ಲಿ 7 ಪಂದ್ಯಗಳನ್ನು ಆಡಿದ್ದು ಎಲ್ಲಾ ಪಂದ್ಯಗಳಲ್ಲಿಯೂ ಸೋಲು ಅನುಭವಿಸಿದೆ. ಈ ಮೂಲಕ ಟೂರ್ನಿಯಿಂದ ಬಹುತೇಕ ಹೊರಬಿದ್ದಿದೆ. ಮತ್ತೊಂದೆಡೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿದ 7 ಪಂದ್ಯಗಳಲ್ಲಿ 4 ಗೆಲುವು ಹಾಗೂ 3 ಸೋಲು ಅನುಭವಿಸಿದೆ. ಕಳೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಅನುಭವಿಸಿದ ಸೋಲು ಎಲ್‌ಎಸ್‌ಜಿ ತಂಡಕ್ಕೆ ಹಿನ್ನಡೆಯುಂಟು ಮಾಡಿದೆ. ಹೀಗಾಗಿ ಮತ್ತೆ ಗೆಲುವಿನ ಲಯಕ್ಕೆ ಮರಳುವ ಪ್ರಯತ್ನದಲ್ಲಿದೆ ಲಕ್ನೋ ಸೂಪರ್ ಜೈಂಟ್ಸ್ ತಂಡ.
ಸ್ಕ್ವಾಡ್‌ಗಳು: ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌತಮ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್, ಎವಿನ್ ಲೂಯಿಸ್, ಆಂಡ್ರ್ಯೂ ಟೈ, ಮನೀಶ್ ಪಾಂಡೆ, ಶಹಬಾಜ್ ನದೀಮ್, ಮನನ್ ವೋಹ್ರಾ, ಕೈಲ್ ಮೇಯರ್ಸ್, ಅಂಕಿತ್ ರಾಜ್‌ಪೂತ್, ಮೊಹ್ಸಿನ್ ಖಾನ್, ಕರಣ್ ಶರ್ಮಾ, ಮಯಾಂಕ್ ಯಾದವ್
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಕೀರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್, ರಮಣ್‌ದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಫ್ಯಾಬಿಯನ್ ಅಲೆನ್, ಡೆವಾಲ್ಡ್ ಬ್ರೆವಿಸ್, ಬಾಸಿಲ್ ಥಂಪಿ, ಎಂ ಅಶ್ವಿನ್, ಜಯದೇವ್ ಉನದ್ಕತ್, ಮಯಾಂಕ್ ಮರ್ಕಂಡೆ, ತಿಲಕ್ ಮಾರ್ಕಂಡೆ , ಸಂಜಯ್ ಯಾದವ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್
ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 24 ರಂದು ಭಾನುವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಸ್ವರ್ಗ ಎನಿಸಿಕೊಂಡಿದೆ. ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಕಾರಣ ದೊಡ್ಡ ಮೊತ್ತವನ್ನು ಇಲ್ಲಿ ನಿರೀಕ್ಷಿಸಲಾಗುತ್ತಿದೆ. ಇನ್ನಿಂಗ್ಸ್‌ನ ಆರಂಭದಲ್ಲಿ ವೇಗಿಗಳಿಗೆ ಸ್ವಲ್ಪ ನೆರವು ಸಿಗಬಹುದು. ಇನ್ನು ಇಬ್ಬನಿ ಈ ಪಂದ್ಯದಲ್ಲಿಯೂ ಹೆಚ್ಚಿನ ಪರಿಣಾಮವನ್ನು ಬೀರಬಹುದು.
ಸಂಭಾವ್ಯ ಆಡುವ ಬಳಗ: ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮನೀಶ್ ಪಾಂಡೆ/ ಮನನ್ ವೋಹ್ರಾ, ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ಆಯುಷ್ ಬಡೋನಿ, ಜೇಸನ್ ಹೋಲ್ಡರ್, ಕೃನಾಲ್ ಪಾಂಡ್ಯ, ದುಷ್ಮಂತ ಚಮೀರಾ, ಅವೇಶ್ ಖಾನ್, ರವಿ ಬಿಷ್ಣೋಯ್
ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್(ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಜಯದೇವ್ ಉನದ್ಕತ್, ಹೃತಿಕ್ ಶೋಕೀನ್, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್.