For Quick Alerts
ALLOW NOTIFICATIONS  
For Daily Alerts
 

LSG vs PBKS Preview: ಪ್ರಿವ್ಯೂ, ಪಿಚ್ ರಿಪೋರ್ಟ್, ಸಂಭಾವ್ಯ ತಂಡ, ಹವಾಮಾನ ವರದಿ

IPL 2022: LSG vs PBKS Preview, Predicted Playing 11, Pitch Report, And Weather Forecast

ಐಪಿಎಲ್ ಅಂಗಳದಲ್ಲಿ ಶುಕ್ರವಾರ 42ನೇ ಪಂದ್ಯ ನಡೆಯಲಿದ್ದು ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇಬ್ಬರು ಕನ್ನಡಿಗ ನಾಯಕರು ಈ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿರುವುದು ಕುತೂಹಲ ಮೂಡಿಸಿದೆ. ಕಳೆದ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿದ್ದ ಕೆಎಲ್ ರಾಹುಲ್ ಈ ಬಾರಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸುತ್ತಿದ್ದರೆ ಪಂಜಾಬ್ ಕಿಂಗ್ಸ್ ತಂಡದ ನಾಯಕತ್ವ ಮಯಾಂಕ್ ಅಗರ್ವಾಲ್ ಹೆಗಲಿಗೆ ಬಿದ್ದಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡ ತನ್ನ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು ಅಂಕಪಟ್ಟಿಯಲ್ಲಿ ಟಾಪ್ 4ರಲ್ಲಿ ಸ್ಥಾನವನ್ನು ಪಡೆದುಕೊಂಡಿದೆ. ಆಡಿರುವ 8 ಪಂದ್ಯಗಳ ಪೈಕಿ 5ರಲ್ಲಿ ಗೆಲುವು ಸಾಧಿಸಿದ್ದು ಪ್ಲೇಆಫ್‌ಗೇರುವ ಸ್ಪರ್ಧೆಯಲ್ಲಿ ಮುಂದಿದೆ. ಆದರೆ ಪಂಜಾಬ್ ಕಿಂಗ್ಸ್ ಕೆಲ ಅದ್ಭುತ ಪ್ರದರ್ಶನಗಳ ಹೊರತಾಗಿಯೂ ಅಂಕಪಟ್ಟಿಯಲ್ಲಿ ಹಿಂದುಳಿದಿದೆ. ಆಡಿರುವ 8 ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ 4 ಗೆಲುವು ಹಾಗೂ 4 ಸೋಲು ಅನುಭವಿಸಿದ್ದು 6ನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಗೆದ್ದು ಸ್ಥಾನವನ್ನು ಮತ್ತಷ್ಟು ಉತ್ತಮ ಪಡಿಸಿಕೊಳ್ಳುವ ಪ್ರಯತ್ನ ನಡೆಸಲಿದೆ.

ಸ್ಕ್ವಾಡ್‌ಗಳು: ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ರಾಹುಲ್ ಚಾಹರ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಪ್ರಭಾಸಿಮ್ರಾನ್ ಸಿಂಗ್, ಇಶಾನ್ ಪೊರೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಒಡಿಯನ್ ಸ್ಮಿತ್, ಸಂದೀಪ್ ಶರ್ಮಾ, ರಾಜ್ ಅಂಗದ್ ಬಾವಾ, ರಿಷಿ ಧವನ್, ಪ್ರೇರಕ್ ಮಂಕಡ್, ಅಥರ್ವ ಟೈಡೆ, ವೈಭವ್ ಅರೋರಾ, ಭಾನುಕಾ ರಾಜಪಕ್ಸೆ, ರಿಟಿಕ್ ಚಟರ್ಜಿ, ಬಲ್ತೇಜ್ ಧಂಡಾ, ಅನ್ಶ್ ಪಟೇಲ್, ಜಿತೇಶ್ ಶರ್ಮಾ, ಬೆನ್ನಿ ಹೋವೆಲ್, ನಾಥನ್ ಎಲ್ಲಿಸ್

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌತಮ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್, ಎವಿನ್ ಲೂಯಿಸ್, ಆಂಡ್ರ್ಯೂ ಟೈ, ಮನೀಶ್ ಪಾಂಡೆ, ಶಹಬಾಜ್ ನದೀಮ್, ಮನನ್ ವೋಹ್ರಾ, ಕೈಲ್ ಮೇಯರ್ಸ್, ಅಂಕಿತ್ ರಾಜ್‌ಪೂತ್, ಮೊಹ್ಸಿನ್ ಖಾನ್, ಕರಣ್ ಶರ್ಮಾ, ಮಯಾಂಕ್ ಯಾದವ್

ಪಂದ್ಯದ ದಿನಾಂಕ, ಸಮಯ ಹಾಗೂ ಸ್ಥಳ: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 28 ರಂದು ಶುಕ್ರವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನ ಪಿಚ್ ಆರಂಭಿಕ ಓವರ್‌ಗಳಲ್ಲಿ ಬ್ಯಾಟರ್‌ಗಳಿಗೆ ಉತ್ತಮ ರನ್ ಗಳಿಸಲು ಅವಕಾಶ ನೀಡುತ್ತದೆ. ಪಂದ್ಯ ಮುಂದುವರೆದಂತೆ ಸ್ಪಿನ್ನರ್‌ಗಳಿಗೆ ಪಿಚ್ ಸಹಾಯವನ್ನು ನೀಡುತ್ತದೆ. ವೇಗಿಗಳಿಗು ಕೂಡ ಪಿಚ್ ನೆರವು ನೀಡುತ್ತದೆ.

ಪಂಜಾಬ್ ಕಿಂಗ್ಸ್ ಸಂಭಾವ್ಯ ಆಡುವ ಬಳಗ: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಭಾನುಕಾ ರಾಜಪಕ್ಸೆ, ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಸಂದೀಪ್ ಶರ್ಮಾ, ಅರ್ಶ್‌ದೀಪ್ ಸಿಂಗ್

Rishab Pant ಆಟ ನೋಡಲು ಬಂದಿದ್ದ ಈ ವಿಶೇಷ ಅತಿಥಿ ಯಾರು | Oneindia Kannada

ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ಮನೀಶ್ ಪಾಂಡೆ, ದೀಪಕ್ ಹೂಡಾ, ಆಯುಷ್ ಬಡೋನಿ, ಮಾರ್ಕಸ್ ಸ್ಟೋನಿಸ್, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಮೊಹ್ಸಿನ್ ಖಾನ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್

Story first published: Thursday, April 28, 2022, 19:57 [IST]
Other articles published on Apr 28, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+