For Quick Alerts
ALLOW NOTIFICATIONS  
For Daily Alerts
 

LSG vs KKR: ರಿಂಕು ಸಿಂಗ್ ಅಬ್ಬರದ ಆಟ ವ್ಯರ್ಥ; ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಲಕ್ನೋಗೆ ರೋಚಕ ಜಯ!

IPL 2022: Lucknow Super Giants beats Kolkata Knight Riders by 2 runs
LSG vs KKR ಪಂದ್ಯ ಮುಗಿದ ನಂತರ Gambhir ಸಂಭ್ರಮ ಹೀಗಿತ್ತು | Oneindia Kannada

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 66ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ಮುಖಾಮುಖಿಯಾಗಿದ್ದು, ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 2 ರನ್‌ಗಳ ರೋಚಕ ಜಯ ಸಾಧಿಸುವುದರ ಮೂಲಕ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಈ ಗೆಲುವಿನ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಪ್ಲೇ ಆಫ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಂಡಿದ್ದು, ಈ ಬಾರಿಯ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ನಂತರ ಪ್ಲೇ ಆಫ್ ಸುತ್ತಿಗೆ ಲಗ್ಗೆ ಇಟ್ಟ ಎರಡನೇ ತಂಡವಾಗಿ ಲಕ್ನೋ ಸೂಪರ್ ಜೈಂಟ್ಸ್ ಹೊರಹೊಮ್ಮಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಆಯ್ದುಕೊಂಡರು. ಹೀಗೆ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ನಾಯಕ ಕೆ ಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಆರಂಭಿಕರಾಗಿ ಕಣಕ್ಕಿಳಿದು 210 ರನ್‌ಗಳ ಐತಿಹಾಸಿಕ ಜೊತೆಯಾಟವನ್ನು ಆಡಿದರು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 210 ರನ್ ಕಲೆಹಾಕಿ ಎದುರಾಳಿ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ 211 ರನ್‌ಗಳ ಗುರಿಯನ್ನು ನೀಡಿತು.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಕ್ವಿಂಟನ್ ಡಿ ಕಾಕ್ 70 ಎಸೆತಗಳಲ್ಲಿ ಅಜೇಯ 140 ರನ್ ಕಲೆಹಾಕಿ ಅಬ್ಬರಿಸಿದರೆ ನಾಯಕ ಕೆಎಲ್ ರಾಹುಲ್ 51 ಎಸೆತಗಳಲ್ಲಿ ಅಜೇಯ 68 ರನ್ ಬಾರಿಸಿದರು. ಹೀಗೆ ಇನಿಂಗ್ಸ್ ಉದ್ದಕ್ಕೂ ವಿಕೆಟ್ ಕಳೆದುಕೊಳ್ಳದೇ ಬ್ಯಾಟ್ ಬೀಸಿದ ಈ ಜೋಡಿ ಐಪಿಎಲ್ ಇತಿಹಾಸದಲ್ಲೇ ಅತಿಹೆಚ್ಚು ರನ್‌ಗಳ ಜತೆಯಾಟವಾಡಿದ ಆರಂಭಿಕ ಜೋಡಿ ಎಂಬ ದಾಖಲೆ ಬರೆಯಿತು.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ನೀಡಿದ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಕೋಲ್ಕತಾ ನೈಟ್ ರೈಡರ್ಸ್ ಆರಂಭದಲ್ಲಿಯೇ ವೆಂಕಟೇಶ್ ಅಯ್ಯರ್ ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಇನ್ನುಳಿದಂತೆ ಈ ಪಂದ್ಯದಲ್ಲಿ ಪದಾರ್ಪಣೆ ಮಾಡಿದ ಅಭಿಜಿತ್ ತೋಮರ್ ವೆಂಕಟೇಶ್ ಅಯ್ಯರ್ ಜತೆ ಆರಂಭಿಕನಾಗಿ ಕಣಕ್ಕಿಳಿದು 4 ರನ್ ಬಾರಿಸಿ ನಿರಾಸೆ ಮೂಡಿಸಿದರು. ಹೀಗೆ ಕೋಲ್ಕತ್ತ ನೈಟ್ ರೈಡರ್ಸ್ 9 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿತು. ಈ ಸಂದರ್ಭದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿತೀಶ್ ರಾಣಾ 22 ಎಸೆತಗಳಲ್ಲಿ 42 ರನ್ ಚಚ್ಚಿದರೆ, ಶ್ರೇಯಸ್ ಅಯ್ಯರ್ 29 ಎಸೆತಗಳಲ್ಲಿ 50 ರನ್ ಬಾರಿಸಿದರು. ಇನ್ನುಳಿದಂತೆ ಸ್ಯಾಮ್ ಬಿಲ್ಲಿಂಗ್ಸ್ 36, ಆ್ಯಂಡ್ರೆ ರಸೆಲ್ 5 ರನ್ ಬಾರಿಸಿದರೆ, ರಿಂಕು ಸಿಂಗ್ 15 ಎಸೆತಗಳಲ್ಲಿ 40 ರನ್ ಚಚ್ಚಿ ಅಬ್ಬರಿಸಿ ಜಯದ ಭರವಸೆಯನ್ನು ಹುಟ್ಟುಹಾಕಿದ್ದರು. ಆದರೆ ಗೆಲ್ಲಲು 2 ಎಸೆತಗಳಿಗೆ 3 ರನ್ ಬೇಕಿದ್ದಾಗ ಸ್ಟಾಯಿನಿಸ್ ಎಸೆತದಲ್ಲಿ ಲೂಯಿಸ್ ಅವರಿಗೆ ಕ್ಯಾಚ್ ನೀಡಿದ ರಿಂಕು ಸಿಂಗ್ ಪೆವಿಲಿಯನ್ ಸೇರಿದರು. ಇದರ ಬೆನ್ನಲ್ಲೇ ಕಣಕ್ಕಿಳಿದ ಉಮೇಶ್ ಯಾದವ್ ಶೂನ್ಯಕ್ಕೆ ಔಟ್ ಆಗುವ ಮೂಲಕ ಕೋಲ್ಕತಾ ನೈಟ್ ರೈಡರ್ಸ್ ಪಂದ್ಯವನ್ನು ಕೈಚೆಲ್ಲಿತು. ಇನ್ನು ಸುನಿಲ್ ನರೈನ್ 7 ಎಸೆತಗಳಲ್ಲಿ ಅಜೇಯ 21 ರನ್ ಬಾರಿಸಿದರು. ಈ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 208 ಕಲೆಹಾಕಿತು.

ಲಕ್ನೋ ಸೂಪರ್‌ ಜೈಂಟ್ಸ್ ಪರ ಮೊಹ್ಸಿನ್ ಖಾನ್ ಮತ್ತು ಮಾರ್ಕಸ್ ಸ್ಟಾಯಿನಿಸ್ ತಲಾ 3 ವಿಕೆಟ್ ಪಡೆದರೆ, ರವಿ ಬಿಷ್ಣೋಯಿ ಮತ್ತು ಕೃಷ್ಣಪ್ಪ ಗೌತಮ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Thursday, May 19, 2022, 10:00 [IST]
Other articles published on May 19, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+