ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

LSG vs GT: 145 ರನ್‌ಗಳ ಸಾಧಾರಣ ಗುರಿ ನೀಡಿದ ಹಾರ್ದಿಕ್ ಪಾಂಡ್ಯ ಬಳಗ

ಪ್ರಸ್ತುತ ನಡೆಯುತ್ತಿರುವ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಕೈಗೊಂಡರು. ಹೀಗಾಗಿ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬೌಲಿಂಗ್ ಮಾಡುವಂತಾಯಿತು.

ಮೊದಲು ಬ್ಯಾಟಿಂಗ್ ಮಾಡಿರುವ ಗುಜರಾತ್ ಟೈಟನ್ಸ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 144 ರನ್ ಕಲೆಹಾಕಿದ್ದು, ಲಕ್ನೋ ಸೂಪರ್ ಜೈಂಟ್ಸ್ ಗೆಲ್ಲಲು 145 ರನ್‌ಗಳ ಟಾರ್ಗೆಟ್ ನೀಡಿದೆ.

IPL 2022: Lucknow Super Giants need 145 Runs To Win Against Gujarat Titans

ಗುಜರಾತ್ ಟೈಟನ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಶುಭ್‌ಮನ್ ಗಿಲ್ ಮತ್ತು ವೃದ್ದಿಮಾನ್ ಸಹಾ ಮೊದಲ ವಿಕೆಟ್‌ಗೆ ಉತ್ತಮ ಮೊತ್ತ ಕಲೆ ಹಾಕುವಲ್ಲಿ ಎಡವಿದರು. 2.4 ಓವರ್‌ಗಳಾಗಿದ್ದಾಗ ವೃದ್ದಿಮಾನ್ ಸಹಾ 11 ಎಸೆತಗಳಲ್ಲಿ 5 ರನ್ ಬಾರಿಸಿ ಔಟಾದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಥ್ಯೂ ವೇಡ್ 7 ಎಸೆತಗಳಲ್ಲಿ 10 ರನ್ ಕಲೆ ಹಾಕಿ ಔಟಾದರು. ಆರಂಭಿಕ ಆಟಗಾರ ಶುಭ್‌ಮನ್ ಗಿಲ್ 49 ಎಸೆತಗಳಲ್ಲಿ 63 ರನ್ ಗಳಿಸಿ ಮಿಂಚಿದರು.

ಇನ್ನುಳಿದಂತೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ 11 ರನ್, ಡೇವಿಡ್ ಮಿಲ್ಲರ್ 24 ಎಸೆತಗಳಲ್ಲಿ 26 ರನ್ ಗಳಿಸಿ ಹೋಲ್ಡರ್‌ಗೆ ವಿಕೆಟ್ ಒಪ್ಪಿಸಿದರು. ರಾಹುಲ್ ತೇವಾಟಿಯಾ 22 ರನ್ ಗಳಿಸಿ ಅಜೇಯರಾಗಿ ಉಳಿದರು.

ಹೀಗೆ ಗುಜರಾತ್ ಟೈಟನ್ಸ್ ತಂಡದ ಪರ ಶುಭ್‌ಮನ್ ಗಿಲ್, ಡೇವಿಡ್ ಮಿಲ್ಲರ್ ಮತ್ತು ರಾಹುಲ್ ತೇವಾಟಿಯಾ ಹೊರತುಪಡಿಸಿ ಉಳಿದ ಯಾವುದೇ ಆಟಗಾರರು ಸಹ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲರಾದರು.

IPL 2022: Lucknow Super Giants need 145 Runs To Win Against Gujarat Titans

ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ರಮುಖ ಬೌಲರ್ ಆವೇಶ್ ಖಾನ್ ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ 26 ರನ್ ನೀಡಿ 5 ವಿಕೆಟ್ ಪಡೆದರು. ಇನ್ನುಳಿದಂತೆ ಮೊಹ್ಸಿನ್ ಖಾನ್, ಜೇಸನ್ ಹೋಲ್ಡರ್ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ಅಥವಾ ಗುಜರಾತ್ ಟೈಟನ್ಸ್ ನಡುವಿನ ಇಂದಿನ ಪಂದ್ಯವನ್ನು ಯಾರೇ ಗೆದ್ದರೂ ಈ ಐಪಿಎಲ್ ಋತುವಿನಲ್ಲಿ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಿದ ಮೊದಲ ತಂಡವಾಗಲಿದೆ. ಈ ಅವಕಾಶವನ್ನು ಯಾವ ತಂಡ ಗಳಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಗುಜರಾತ್ ಟೈಟನ್ಸ್:
ವೃದ್ದಿಮಾನ್ ಸಾಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಮೊಹಮ್ಮದ್ ಶಮಿ

ಲಕ್ನೋ ಸೂಪರ್‌ ಜೈಂಟ್ಸ್:
ಕ್ವಿಂಟನ್ ಡಿಕಾಕ್ (ವಿಕೆಟ್ ಕೀಪರ್) ಕೆ.ಎಲ್. ರಾಹುಲ್ (ನಾಯಕ), ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋಯ್ನಿಸ್, ಆಯುಷ್ ಬದೋನಿ, ಜೇಸನ್ ಹೋಲ್ಡರ್, ಕರಣ್ ಶರ್ಮ, ಆವೇಶ್ ಖಾನ್, ದುಷ್ಮಂತ ಚಮೀರ, ಮೊಹ್ಸಿನ್ ಖಾನ್

Story first published: Tuesday, May 10, 2022, 21:18 [IST]
Other articles published on May 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X