For Quick Alerts
ALLOW NOTIFICATIONS  
For Daily Alerts
 

RR vs LSG: ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 179 ರನ್‌ಗಳ ಗುರಿ ನೀಡಿದ ರಾಜಸ್ಥಾನ್ ರಾಯಲ್ಸ್

IPL 2022: Lucknow Super Giants needs 179 runs to win against Rajasthan Royals

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 63ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ. ಮುಂಬೈನ ಡಾ ಡಿ ವೈ ಪಾಟೀಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಆಯ್ದುಕೊಂಡು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 179 ರನ್‌ಗಳ ಗುರಿ ನೀಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 29 ಎಸೆತಗಳಲ್ಲಿ 41 ರನ್ ಗಳಿಸಿ ಅಬ್ಬರಿಸಿದರೆ, ಜೋಸ್ ಬಟ್ಲರ್ 2 ರನ್ ಕಲೆಹಾಕಿದರು. ಸಂಜು ಸ್ಯಾಮ್ಸನ್ 32 ರನ್, ದೇವದತ್ ಪಡಿಕ್ಕಲ್ 39 ರನ್, ರಿಯಾನ್ ಪರಾಗ್ 19 ರನ್, ಜೇಮ್ಸ್ ನೀಶಮ್ 14 ರನ್ ಗಳಿಸಿದರೆ, ರವಿಚಂದ್ರನ್ ಅಶ್ವಿನ್ ಅಜೇಯ 10 ರನ್ ಮತ್ತು ಟ್ರೆಂಟ್ ಬೌಲ್ಟ್ ಅಜೇಯ 17 ರನ್ ಕಲೆ ಹಾಕಿದರು.

ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ರವಿ ಬಿಷ್ಣೋಯಿ 2 ವಿಕೆಟ್ ಪಡೆದರೆ, ಆಯುಷ್ ಬದೋನಿ, ಜೇಸನ್ ಹೋಲ್ಡರ್ ಮತ್ತು ಅವೇಶ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದರು.

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಜೇಮ್ಸ್ ನೀಶಮ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಒಬೆದ್ ಮೆಕಾಯ್

ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಆಯುಷ್ ಬಡೋನಿ, ಮಾರ್ಕಸ್ ಸ್ಟೋನಿಸ್, ಜೇಸನ್ ಹೋಲ್ಡರ್, ಮೊಹ್ಸಿನ್ ಖಾನ್, ರವಿ ಬಿಷ್ಣೋಯ್, ದುಷ್ಮಂತ ಚಮೀರಾ, ಅವೇಶ್ ಖಾನ್

Story first published: Sunday, May 15, 2022, 21:52 [IST]
Other articles published on May 15, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+