LSG vs GT: ಪಂದ್ಯದ ಟಾಸ್ ವರದಿ ಮತ್ತು ಆಡುವ 11ರ ಬಳಗ
ಸದ್ಯ ನಡೆಯುತ್ತಿರುವ 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 57ನೇ ಪಂದ್ಯದಲ್ಲಿ ಇಂದು (ಮೇ 10) ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯವು ಈ ಬಾರಿಯ ಟೂರ್ನಿಯಲ್ಲಿ ಮೊದಲು ಅಧಿಕೃತವಾಗಿ ಯಾವ ತಂಡ ಪ್ಲೇಆಫ್ ತಲುಪಲಿದೆ ಎಂಬುದು ಗೊತ್ತಾಗಲಿದೆ.
ಇಂದಿನ ಪಂದ್ಯದಲ್ಲಿ ಸಮನಾದ ಪಂದ್ಯಗಳಲ್ಲಿ ಗೆದ್ದು, ಅಂಕಪಟ್ಟಿಯಲ್ಲಿ ಟಾಪ್ ಒನ್ ಮತ್ತು ಟಾಪ್ ಎರಡನೇ ಸ್ಥಾನಗಳಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ಎರಡೂ ತಂಡಗಳೂ ಸಹ ತಲಾ 11 ಪಂದ್ಯಗಳಲ್ಲಿ ಕಣಕ್ಕಿಳಿದು ತಲಾ 8 ಪಂದ್ಯಗಳಲ್ಲಿ ಗೆದ್ದು, ಉಳಿದ ಮೂರು ಪಂದ್ಯಗಳಲ್ಲಿ ಸೋತಿದ್ದು, ಹೆಚ್ಚಿನ ನೆಟ್ ರನ್ ರೇಟ್ ಹೊಂದಿರುವ ಕೆ.ಎಲ್. ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಅಗ್ರಸ್ಥಾನದಲ್ಲಿದ್ದರೆ, ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ಎರಡನೇ ಸ್ಥಾನದಲ್ಲಿದೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕೆ.ಎಲ್. ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಬೌಲಿಂಗ್ ದಾಳಿ ನಡೆಸಲಿದೆ.
ಗುಜರಾತ್ ಟೈಟನ್ಸ್ ತಂಡ ಈ ಪಂದ್ಯದಲ್ಲಿ ಮೂರು ಆಟಗಾರರ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿದೆ. ಅದೇ ರೀತಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಇಂದು ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ರವಿ ಬಿಷ್ಣೋಯಿ ಆಡುವ ಬಳಗದಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನದಲ್ಲಿ ಕರಣ್ ಶರ್ಮ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.
ಗುಜರಾತ್ ಟೈಟನ್ಸ್:
ವೃದ್ದಿಮಾನ್ ಸಾಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಮೊಹಮ್ಮದ್ ಶಮಿ
ಲಕ್ನೋ ಸೂಪರ್ ಜೈಂಟ್ಸ್:
ಕ್ವಿಂಟನ್ ಡಿಕಾಕ್ (ವಿಕೆಟ್ ಕೀಪರ್) ಕೆ.ಎಲ್. ರಾಹುಲ್ (ನಾಯಕ), ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋಯ್ನಿಸ್, ಆಯುಷ್ ಬದೋನಿ, ಜೇಸನ್ ಹೋಲ್ಡರ್, ಕರಣ್ ಶರ್ಮ, ಆವೇಶ್ ಖಾನ್, ದುಷ್ಮಂತ ಚಮೀರ, ಮೊಹ್ಸಿನ್ ಖಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications