KKR vs LSG: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್ ಮಾಹಿತಿ

ಸದ್ಯ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಟೂರ್ನಿಯ 66ನೇ ಹಾಗೂ ತಮ್ಮ ಕೊನೆಯ ಲೀಗ್ ಹಂತದ ಪಂದ್ಯಗಳಲ್ಲಿ ಇಂದು ಸೆಣಸಾಟ ನಡೆಸುತ್ತಿವೆ. ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ಡಾ ಡಿವೈ ಪಾಟೀಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಆಡುವ ಬಳಗಗಳು:
ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್)ಕೆಎಲ್ ರಾಹುಲ್ (ನಾಯಕ), ಅವಿನ್ ಲೆವಿಸ್, ದೀಪಕ್ ಹೂಡಾ, ಮನನ್ ವೋಹ್ರಾ, ಮಾರ್ಕಸ್ ಸ್ಟೊಯಿನಿಸ್, ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌಂತಮ್, ಮೊಹ್ಸಿನ್ ಖಾನ್, ಅವೇಶ್ ಖಾನ್ ಮತ್ತು ರವಿ ಬಿಷ್ಣೋಯ್
ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ವೆಂಕಟೇಶ್ ಅಯ್ಯರ್, ಅಭಿಜೀತ್ ತೋಮರ್, ಶ್ರೇಯಸ್ ಅಯ್ಯರ್(ನಾಯಕ), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್(ವಿಕೆಟ್ ಕೀಪರ್), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಉಮೇಶ್ ಯಾದವ್, ಟಿಮ್ ಸೌಥಿ, ವರುಣ್ ಚಕ್ರವರ್ತಿ
ಇನ್ನು 16 ಅಂಕಗಳನ್ನು ಹೊಂದಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ಈ ಪಂದ್ಯದಲ್ಲಿ ಗೆದ್ದರೆ, ಎರಡನೇ ಸ್ಥಾನಕ್ಕೆ ಏರಿಕೆ ಕಾಣಲಿದ್ದು, ಎರಡನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ಟೂರ್ನಿಯ ಲೀಗ್ ಹಂತ ಮುಕ್ತಾಯದ ಸಮಯಕ್ಕೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿಯೇ ಇರಬೇಕೆಂದರೆ ರಾಜಸ್ಥಾನ್ ರಾಯಲ್ಸ್ ತನ್ನ ಮುಂದಿನ ಪಂದ್ಯದಲ್ಲಿ ಸೋಲಬೇಕು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತನ್ನ ಇಂದಿನ ಪಂದ್ಯದಲ್ಲಿ ಕಡ್ಡಾಯವಾಗಿ ಗೆಲ್ಲಲೇಬೇಕಿದೆ. ಇನ್ನು ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಳ್ಳುವುದರಿಂದ ಪ್ಲೇಆಫ್ ಸುತ್ತಿನಲ್ಲಿ ಪೈನಲ್ ಪಂದ್ಯ ಪ್ರವೇಶಿಸಲು ಎರಡು ಅವಕಾಶಗಳನ್ನು ಹೊಂದಲಿದೆ.
ಇನ್ನು ಟೂರ್ನಿಯಲ್ಲಿ ಇಲ್ಲಿಯವರೆಗೂ ನಡೆದಿರುವ ಪಂದ್ಯಗಳ ಪೈಕಿ 12 ಅಂಕಗಳನ್ನು ಪಡೆದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಈ ಪಂದ್ಯದಲ್ಲಿ ಗೆದ್ದರೂ ಪ್ಲೇಆಫ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವಲ್ಲಿ ವಿಫಲವಾಗಲಿದೆ. ಹೀಗಾಗಿ ಈ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕಿಂತ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಹೆಚ್ಚು ಮುಖ್ಯಾವಾದದ್ದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications