Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

LSG vs RR: ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ ಇಲೆವೆನ್ ಮಾಹಿತಿ ಇಲ್ಲಿದೆ

IPL 2022: Lucknow Super Giants vs Rajasthan Royals toss report and playing 11

ಪ್ರಸ್ತುತ ನಡೆಯುತ್ತಿರುವ ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಸಮೀಪಿಸುತ್ತಿದ್ದು, ಇಂದು ( ಮೇ 15 ) 2 ಮುಖಾಮುಖಿ ಪಂದ್ಯಗಳು ಆಯೋಜನೆಯಾಗಿವೆ. ಇಂದಿನ ಪ್ರಥಮ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದರೆ, ಸಂಜೆಯ ದ್ವಿತೀಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಈ ಪಂದ್ಯ ಈ ಬಾರಿಯ ಐಪಿಎಲ್ ಟೂರ್ನಿಯ 63ನೇ ಪಂದ್ಯವಾಗಿದ್ದು, ಮುಂಬೈನ ಬ್ರಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಇತ್ತಂಡಗಳ ನಡುವಿನ ಈ ಪಂದ್ಯ ಎರಡೂ ತಂಡಗಳಿಗೂ ಸಹ ಬಹುಮುಖ್ಯದ್ದಾಗಿದ್ದು, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಗೆಲುವು ಸಾಧಿಸಿದರೆ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶವನ್ನು ಪಡೆದುಕೊಳ್ಳಲಿದೆ. ಒಂದುವೇಳೆ ರಾಜಸ್ಥಾನ್ ರಾಯಲ್ಸ್ ಈ ಪಂದ್ಯದಲ್ಲಿ ಗೆದ್ದರೆ ಪ್ಲೇ ಆಫ್ ಪ್ರವೇಶಿಸುವ ತನ್ನ ಆಸೆಯನ್ನು ಮತ್ತಷ್ಟು ಬಲಪಡಿಸಿಕೊಳ್ಳಲಿದೆ ಹಾಗೂ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಈ 2 ತಂಡಗಳ ನಡುವೆಯೇ ಪೈಪೋಟಿ ಏರ್ಪಡಲಿದೆ.

ಹೀಗಾಗಿ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಗೆಲುವು ಸಾಧಿಸಿ ಪ್ಲೇ ಆಫ್ ಪ್ರವೇಶಿಸುವ ಗುರಿಯನ್ನು ಹೊಂದಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ ಪಂದ್ಯದಲ್ಲಿ ಜಯ ಸಾಧಿಸಿ ಪ್ಲೇ ಆಫ್ ಹಾದಿಯನ್ನು ಬಲಿಷ್ಠ ಪಡಿಸಿಕೊಳ್ಳುವುದರ ಜತೆಗೆ ಎರಡನೇ ಸ್ಥಾನದ ಮೇಲೆ ಕಣ್ಣಿಟ್ಟಿದೆ.

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಜೇಮ್ಸ್ ನೀಶಮ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಒಬೆದ್ ಮೆಕಾಯ್

ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಆಯುಷ್ ಬಡೋನಿ, ಮಾರ್ಕಸ್ ಸ್ಟೋನಿಸ್, ಜೇಸನ್ ಹೋಲ್ಡರ್, ಮೊಹ್ಸಿನ್ ಖಾನ್, ರವಿ ಬಿಷ್ಣೋಯ್, ದುಷ್ಮಂತ ಚಮೀರಾ, ಅವೇಶ್ ಖಾನ್

Story first published: Sunday, May 15, 2022, 19:24 [IST]
Other articles published on May 15, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+