RCB vs LSG: ಬೆಂಗಳೂರು vs ಲಕ್ನೋ ಪಂದ್ಯದ ಟಾಸ್ ವರದಿ ಮತ್ತು ಪ್ಲೇಯಿಂಗ್ XI

ಐಪಿಎಲ್‌ನಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳುರು ತಂಡಗಳು ಮುಖಾಮುಖಿಯಾಗಿದೆ. ತೀವ್ರ ಕುತೂಹಲ ಮೂಡಿಸಿರುವ ಈ ಪಂದ್ಯದಲ್ಲಿ ಎಲ್‌ಎಸ್‌ಜಿ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಫಾಫ್ ಡು ಪ್ಲೆಸಿಸ್ ಬಳಗ ಮೊದಲಿಗೆ ಬ್ಯಾಟಿಂಗ್ ನಡೆಸಿ ಗುರಿ ನಿಗದಿಪಡಿಸಬೇಕಿದೆ.
ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿಯುತ್ತಿದೆ. ಎರಡು ತಂಡಗಳು ಕೂಡ ಈ ಹಿಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದು ಯಾವುದೇ ಬದಲಾವಣೆಗೆ ಮುಂದಾಗಿಲ್ಲ. ಲಕ್ನೋ ಸೂಪರ್ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು 18 ರನ್‌ಗಳ ಅಂತರದಿಂದ ಮಣಿಸಿದ್ದರೆ ಆರ್‌ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 16 ರನ್‌ಗಳ ಅಂತರದಿಂದ ಗೆಲುವು ಸಾಧಿಸಿ ಎಲ್‌ಎಸ್‌ಜಿ ಸವಾಲನ್ನು ಎದುರಿಸಲು ಸಜ್ಜಾಗಿದೆ.
ಆರ್‌ಸಿಬಿ ತಂಡದ ಮಧ್ಯಮ ಕ್ರಮಾಂಕ ಅದ್ಭುತ ಪ್ರದರ್ಶನ ನೀಡುತ್ತಿದ್ದು ಈ ಪಂದ್ಯದಲ್ಲಿಯೂ ನಿರೀಕ್ಷೆ ಹೆಚ್ಚಾಗಿದೆ. ಅಗ್ರ ಕ್ರಮಾಂಕದ ಪ್ರಮುಖ ಆಟಗಾರರಾದ ನಾಯಕ ಫಾಫ್ ಡು ಪ್ಲೆಸಿಸ್ ಮಾಜಿ ನಾಯಕ ವಿರಾಟ್ ಕೊಹ್ಲಿ ಸತತ ವೈಫಲ್ಯವನ್ನು ಅನುಭವಿಸುತ್ತಿದ್ದಾರೆ. ಈ ಪಂದ್ಯದಲ್ಲಿ ಈ ಆಟಗಾರರು ಉತ್ತಮ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಆಸರೆಯಾಗಬೇಕೆಂಬುದು ಅಭಿಮಾನಿಗಳ ನಿರೀಕ್ಷೆಯಾಗಿದೆ.
ಮತ್ತೊಂದೆಡೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಅದ್ಭುತ ಫಾರ್ಮ್‌ನಲ್ಲಿದ್ದು ಕಳೆದ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದರು. ಆರ್‌ಸಿಬಿ ವಿರುದ್ಧ ಸದಾ ಉತ್ತಮ ಪ್ರದರ್ಶನ ನೀಡುವ ಕೆಎಲ್ ರಾಹುಲ್ ಈ ಪಮದ್ಯದಲ್ಲಿ ಯಾವ ರೀತಿ ಪ್ರದರ್ಶನ ನೀಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್
ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್(ನಾಯಕ ), ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ಮನೀಶ್ ಪಾಂಡೆ, ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ದುಷ್ಮಂತ ಚಮೀರಾ, ಅವೇಶ್ ಖಾನ್, ರವಿ ಬಿಷ್ಣೋಯ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications