ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022: ಅಭಿಮಾನಿಗಳಿಗೆ ಗುಡ್‌ನ್ಯೂಸ್, ಏಪ್ರಿಲ್‌ನಿಂದ ಶೇ.50ರಷ್ಟು ಪ್ರೇಕ್ಷಕರಿಗೆ ಅವಕಾಶ

IPL Audience

ಕ್ರಿಕೆಟ್ ಅಭಿಮಾನಿಗಳಿಗೆ ಮಹಾರಾಷ್ಟ್ರ ಸರ್ಕಾರ ಗುಡ್‌ನ್ಯೂಸ್ ನೀಡಿದೆ. ಏಪ್ರಿಲ್‌ ತಿಂಗಳಿನಿಂದ ಸ್ಟೇಡಿಯಂನಲ್ಲಿ ಶೇಕಡಾ 50ರಷ್ಟು ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅವಕಾಶ ಸಿಗಲಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಮಾರ್ಚ್‌ 26ರಿಂದ ಪ್ರಾರಂಭಗೊಂಡ ಐಪಿಎಲ್ 15ನೇ ಸೀಸನ್‌ನಲ್ಲಿ 10 ತಂಡಗಳು ಭಾಗವಹಿಸಿದ್ದು, ಮೇ 29ರವರೆಗೆ ಲೀಗ್ ಪಂದ್ಯಗಳು ನಡೆಯಲಿವೆ. ಎಲ್ಲಾ ಪಂದ್ಯಗಳು ಮಹಾರಾಷ್ಟ್ರದ ನಾಲ್ಕು ಸ್ಟೇಡಿಯಂನಲ್ಲಿ ನಡೆಯಲಿದ್ದು, ವಾಂಖೆಡೆ, ಡಿ.ವೈ ಪಾಟೀಲ್ ಸ್ಟೇಡಿಯಂ, ಬರ್ಬೋನ್ ಸ್ಟೇಡಿಯಂ, ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ನಾಲ್ಕು ಪಂದ್ಯಗಳು ನಡೆಯಲಿವೆ.

"ಕೋವಿಡ್-19 ಪ್ರಕರಣಗಳ ಸಂಖ್ಯೆಯು ತೀವ್ರವಾಗಿ ಕಡಿಮೆಯಾಗಿದೆ, IPL-15 ರಲ್ಲಿ ಪ್ರೇಕ್ಷಕರ ಸಾಮರ್ಥ್ಯವನ್ನು 50% ಗೆ ಹೆಚ್ಚಿಸಲು ರಾಜ್ಯ ಸರ್ಕಾರವು ಉತ್ಸುಕವಾಗಿದೆ" ಎಂದು TOI ಮೂಲಗಳು ತಿಳಿಸಿದೆ.

ಏತನ್ಮಧ್ಯೆ, ಮಾಜಿ ಐಸಿಸಿ, ಬಿಸಿಸಿಐ ಮತ್ತು ಎಂಸಿಎ ಅಧ್ಯಕ್ಷ ಶರದ್ ಪವಾರ್ ಅವರು ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚಿಸಿದ್ದು, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ರಲ್ಲಿ ಪ್ರೇಕ್ಷಕರ ಸಾಮರ್ಥ್ಯವನ್ನು ಹೆಚ್ಚಿಸುವ ಬಗ್ಗೆ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

"ಎರಡನೇ ಕೋವಿಡ್-19 ಅಲೆಯಿಂದಾಗಿ ಕಳೆದ ವರ್ಷದ ಐಪಿಎಲ್ ಅನ್ನು ದೇಶದಿಂದ ಹೊರಕ್ಕೆ ಸ್ಥಳಾಂತರಿಸಲಾಯಿತು. ಇದೀಗ ಐಪಿಎಲ್ ಅನ್ನು ಸುರಕ್ಷಿತವಾಗಿ ಆಡಿಸಲು ಬಿಸಿಸಿಐ ಬಯಸಿದೆ. ಲೀಗ್‌ನ ಮೊದಲ ಹಂತವು ಮುಗಿಯುವ ಏಪ್ರಿಲ್ 15 ರ ಸುಮಾರಿಗೆ ಪ್ರೇಕ್ಷಕರ ಸಾಮರ್ಥ್ಯ ಹೆಚ್ಚಿಸುವ ಕುರಿತು ಬಿಸಿಸಿಐ ಬಯಸುತ್ತಿದೆ, "ಎಂದು ಮೂಲಗಳು ತಿಳಿಸಿವೆ.

Story first published: Wednesday, March 30, 2022, 18:34 [IST]
Other articles published on Mar 30, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X