ಸತತ ಸೋಲುಂಡ ಆರ್‌ಸಿಬಿ ಮತ್ತೆ ಗೆಲ್ಲಲು ಬೆಂಚ್ ಕಾಯುತ್ತಿರುವ ಈ ಉತ್ತಮ ಆಟಗಾರನಿಗೆ ಅವಕಾಶ ನೀಡಲೇಬೇಕು!

ಪ್ರಸ್ತುತ ನಡೆಯುತ್ತಿರವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನೂತನ ನಾಯಕ ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರಂಭದಲ್ಲಿ ಸಾಲು ಸಾಲು ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಉತ್ತಮ ಸ್ಥಾನ ಪಡೆದುಕೊಂಡು ಪ್ಲೇ ಆಫ್ ಪ್ರವೇಶಿಸುವುದು ಖಚಿತ ಎಂಬ ಭರವಸೆಯನ್ನು ಹುಟ್ಟುಹಾಕಿತ್ತು. ಆದರೆ, ನಂತರದ ಪಂದ್ಯಗಳಲ್ಲಿ ಸೋಲನ್ನುಂಡ ಆರ್‌ಸಿಬಿ ಸದ್ಯ ಪ್ಲೇ ಆಫ್ ಪ್ರವೇಶಿಸಲು ಉಳಿದ ಪಂದ್ಯಗಳಲ್ಲಿ ಬಹುತೇಕ ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ.
ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಲ್ಲಿಯವರೆಗೂ ಒಟ್ಟು 9 ಪಂದ್ಯಗಳನ್ನಾಡಿದ್ದು, 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಇನ್ನು ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ವಿರುದ್ಧ ನಡೆದ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಸೋಲುಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯ ಲೀಗ್ ಹಂತದಲ್ಲಿ ಇನ್ನೂ 5 ಪಂದ್ಯಗಳನ್ನಾಡಲಿದ್ದು, ಯಶಸ್ವಿಯಾಗಿ ಪ್ಲೇಆಫ್ ಪ್ರವೇಶಿಸಬೇಕೆಂದರೆ ಈ ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಗೆಲ್ಲಲೇಬೇಕಾಗಿದೆ. ಹಾಗೂ ಅಂಕಪಟ್ಟಿಯಲ್ಲಿ ಟಾಪ್ 2 ಸ್ಥಾನ ಪಡೆದುಕೊಂಡು ಫೈನಲ್ ಪ್ರವೇಶಿಸಲು ಎರಡು ಅವಕಾಶಗಳನ್ನು ಪಡೆದುಕೊಳ್ಳಬೇಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನೂ ಎರಡು ಪಂದ್ಯಗಳನ್ನು ಗೆಲ್ಲಬೇಕಿದೆ.
ಹೀಗೆ ಪ್ಲೇ ಆಫ್ ಪ್ರವೇಶಿಸುವತ್ತ ಚಿತ್ತ ನೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಹತ್ತನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಸೆಣಸಾಟ ನಡೆಸಲಿದ್ದು, ಈ ಪಂದ್ಯ ಮುಂಬೈನ ಬ್ರಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಾಳೆ ( ಏಪ್ರಿಲ್ 30 ) ನಡೆಯಲಿದೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ತಂಡವನ್ನು ಮುಂದಿನ ಪಂದ್ಯದಲ್ಲಿ ಎದುರಿಸಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಪಂದ್ಯವೂ ಸೇರಿದಂತೆ ಮುಂದಿನ ಬಹುತೇಕ ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕಾಗಿದ್ದು, ತಂಡದಲ್ಲಿ ಬೆಂಚ್ ಕಾಯುತ್ತಿರುವ ಈ ಉತ್ತಮ ಆಟಗಾರನಿಗೆ ಆಡುವ ಬಳಗದಲ್ಲಿ ಅವಕಾಶ ನೀಡಲೇಬೇಕಿದೆ. ಈ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಕಂಡಂತಿದೆ.

ಈತನಿಗೆ ಅವಕಾಶ ನೀಡಲೇಬೇಕು
ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ ಮಹಿಪಾಲ್ ಲೊಮ್ರೆರ್ ಅವರನ್ನು ಖರೀದಿಸಿತ್ತು. ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದು ಉತ್ತಮ ಪ್ರದರ್ಶನ ನೀಡಿದ್ದ ಮಹಿಪಾಲ್ ಲೊಮ್ರೊರ್ ಅವರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅವಕಾಶ ನೀಡಿದರೆ ತಂಡದ ಬ್ಯಾಟಿಂಗ್ ವಿಭಾಗ ಸುಧಾರಿಸುವುದು ಖಚಿತ ಎನ್ನಬಹುದು. ಈ ಬಾರಿಯ ಟೂರ್ನಿಯಲ್ಲಿ ಯಾವುದೇ ಪಂದ್ಯದಲ್ಲಿಯೂ ಆಡುವ ಅವಕಾಶವನ್ನು ಪಡೆದುಕೊಳ್ಳದ ಲೊಮ್ರೊರ್ ಅವರಿಗೆ ಆರ್‌ಸಿಬಿ ನೀಡಲೇಬೇಕಿದೆ.

ರಜತ್ ಪಟಿದಾರ್ ಬದಲು ಕಣಕ್ಕೆ
ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ರಜತ್ ಪಟಿದಾರ್ 16 ಎಸೆತಗಳಲ್ಲಿ 16 ರನ್ ಬಾರಿಸಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ರಜತ್ ಪಟಿದಾರ್ ಬದಲು ಸ್ಪೋಟಕ ಬ್ಯಾಟಿಂಗ್ ನಡೆಸಬಲ್ಲ ಸಾಮರ್ಥ್ಯವಿರುವ ಮಹಿಪಾಲ್ ಲೊಮ್ರೊರ್ ಅವರನ್ನು ಮುಂದಿನ ಪಂದ್ಯಗಳಲ್ಲಿ ಕಣಕ್ಕಿಳಿಸುವುದು ಉತ್ತಮ ಆಯ್ಕೆಯಾಗಿದೆ ಹಾಗೂ ಈ ಸಾಧ್ಯತೆಗಳು ಹೆಚ್ಚಾಗಿವೆ.

ಮಹಿಪಾಲ್ ಲೊಮ್ರೊರ್ ಐಪಿಎಲ್ ಅಂಕಿಅಂಶ
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮಹಿಪಾಲ್ ಲೊಮ್ರೊರ್ ಸತತ ಅವಕಾಶಗಳನ್ನು ಪಡೆದುಕೊಂಡಿಲ್ಲ. 2018ರಿಂದ 2021ರ ಐಪಿಎಲ್‌ವರೆಗೆ ಪ್ರತೀ ಆವೃತ್ತಿಯಲ್ಲಿ ಕೇವಲ 2-4 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯುವ ಅವಕಾಶ ಪಡೆದುಕೊಂಡಿರುವ ಲೊಮ್ರೊರ್ ಒಟ್ಟು 10 ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿ 181 ರನ್ ಕಲೆಹಾಕಿದ್ದು, ಗರಿಷ್ಠ 47 ರನ್ ಕಲೆಹಾಕಿದ್ದಾರೆ. ಇನ್ನು ಸಿಕ್ಕ ಕಡಿಮೆ ಅವಕಾಶದಲ್ಲಿಯೇ ತಾನೊಬ್ಬ ಸ್ಪೋಟಕ ಬ್ಯಾಟ್ಸ್‌ಮನ್ ಎಂಬುದನ್ನು ಸಾಬೀತುಪಡಿಸಿಕೊಂಡಿರುವ ಲೊಮ್ರೊರ್ ಅವರಿಗೆ ಇನ್ನೂ ಹೆಚ್ಚಿನ ಅವಕಾಶ ಸಿಗಬೇಕಾದ ಅಗತ್ಯವಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications