IPL 2022: ಐಪಿಎಲ್ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ದಾಖಲೆ ಬರೆದ ಮಾರ್ಕೊ ಜಾನ್ಸೆನ್

ಸನ್‌ರೈಸರ್ಸ್ ಹೈದ್ರಾಬಾದ್ ತಂಡದ ಬೌಲರ್ ಮಾರ್ಕೊ ಜಾನ್ಸೆನ್ ಐಪಿಎಲ್‌ನಲ್ಲಿ ಅತ್ಯಂತ ಕೆಟ್ಟ ದಾಖಲೆಯನ್ನ ತನ್ನ ಹೆಸರಿಗೆ ಬರೆದುಕೊಂಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ರನ್ ಬೌಲರ್ ಎಂಬ ಕುಖ್ಯಾತಿಗೆ ಒಳಗಾಗಿದ್ದಾರೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸನ್‌ರೈಸರ್ಸ್ 20 ಓವರ್‌ಗಳಿಗೆ 6 ವಿಕೆಟ್ ಕಳೆದುಕೊಂಡು 195 ರನ್ ಗಳಿಸಿತು. ಆದರೆ ಈ ಮೊತ್ತವನ್ನ ಡಿಫೆಂಡ್ ಮಾಡಿಕೊಳ್ಳಲು ಸನ್‌ರೈಸರ್ಸ್‌ಗೆ ಸಾಧ್ಯವಾಗಲಿಲ್ಲ.
ಸನ್‌ರೈಸರ್ಸ್ ಬೌಲರ್ ಗಳನ್ನು ಗುಜರಾತ್ ಬ್ಯಾಟ್ಸ್ ಮನ್ ಗಳು ಇನ್ನಿಲ್ಲದಂತೆ ಕಾಡಿದರು. ಉಮ್ರಾನ್ ಮಲಿಕ್ ಹೊರತುಪಡಿಸಿದರೆ ಉಳಿದ ಯಾವ ಬೌಲರ್‌ಗಳು ವಿಕೆಟ್ ಕಬಳಿಸಲಿಲ್ಲ. ಸನ್ ರೈಸರ್ಸ್ ನ ಐವರು ಬೌಲರ್ ಗಳು ತಲಾ 4 ಓವರ್ ಬೌಲ್ ಮಾಡಿದರು. ವಾಷಿಂಗ್ಟನ್ ಸುಂದರ್ 34 ರನ್ ನೀಡಿದ್ರೆ, ಟಿ.ನಟರಾಜನ್ 43 ರನ್, ಭುವನೇಶ್ವರ್ ಕುಮಾರ್ 33 ರನ್ ಮತ್ತು ಉಮ್ರಾನ್ ಮಲಿಕ್ 25 ರನ್ ನೀಡಿ 5 ವಿಕೆಟ್ ಪಡೆದರು.
ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮೂಲದ ಯುವ ಬೌಲರ್ ಮಾರ್ಕೊ ಜಾನ್ಸೆನ್ ಬರೋಬ್ಬರಿ 63 ರನ್ ನೀಡಿದ್ರು. ಐಪಿಎಲ್ ಇತಿಹಾಸದಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ರನ್ ನೀಡಿದ ಬೌಲರ್ ಎಂಬ ಕೆಟ್ಟ ದಾಖಲೆಯನ್ನು ಅವರು ಮಾಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಚೆನ್ನೈನ ಬೌಲರ್ ಲುಂಗಿ ಎಂಗಿಡಿ ಹೆಸರಿನಲ್ಲಿತ್ತು. 2019 ರಲ್ಲಿ ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಎಂಗಿಡಿ 62 ರನ್ ನೀಡಿದ್ದರು.
ಮಾರ್ಕೊ ಜಾನ್ಸೆನ್ ಗುಜರಾತ್ ಟೈಟನ್ಸ್ ವಿರುದ್ಧದ ಅಂತಿಮ ಓವರ್‌ನಲ್ಲಿ 25 ರನ್‌ಗಳನ್ನ ನೀಡುವ ಮೂಲಕ ತಂಡವನ್ನ ಸೋಲಿನತ್ತ ದೂಡಿದರು. ಈ ಓವರ್‌ನಲ್ಲಿ 4 ಸಿಕ್ಸರ್ ದಾಖಲಾಗಿದ್ದು, ಕೊನೆಯ ಮೂರು ಎಸೆತಗಳಲ್ಲಿ ಸ್ಪಿನ್ನರ್ ರಶೀದ್ ಖಾನ್ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications