Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2022: CSK Vs KKR Preview : ಪಂದ್ಯದ ಪ್ರಿವ್ಯೂ, ಪ್ಲೇಯಿಂಗ್ ಇಲೆವೆನ್ ಮತ್ತು ನೇರಪ್ರಸಾರದ ಮಾಹಿತಿ

IPL 2022, Match 1 CSK Vs KKR Preview, Probable Playing 11, Pitch Report And Weather Forecast in Kannada

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಚೊಚ್ಚಲ ಪಂದ್ಯದ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಪಂದ್ಯ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಾರ್ಚ್ 26ರ ಶನಿವಾರ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಈ ಪಂದ್ಯದಲ್ಲಿ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರನ್ನರ್ ಅಪ್ ಆಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ನಡೆಯಲಿದೆ.

ಇನ್ನು ಕಳೆದ ಬಾರಿಯ ಐಪಿಎಲ್ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳಿಗೂ ಮತ್ತು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಚೊಚ್ಚಲ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳಿಗೂ ಸಾಕಷ್ಟು ದೊಡ್ಡ ಮಟ್ಟದ ಬದಲಾವಣೆಗಳಿದ್ದು ಎರಡೂ ತಂಡಗಳ ನಾಯಕರ ಬದಲಾವಣೆಗಳಾಗಿವೆ. ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎಂ ಎಸ್ ಧೋನಿ ನಾಯಕನಾಗಿ ಮುನ್ನಡೆಸಿದ್ದರೆ ಈ ಬಾರಿಯ ಟೂರ್ನಿಯಲ್ಲಿ ರವೀಂದ್ರ ಜಡೇಜಾ ತಂಡವನ್ನು ನಾಯಕನಾಗಿ ಮುನ್ನಡೆಸುತ್ತಿದ್ದಾರೆ. ಅತ್ತ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಯಾನ್ ಮಾರ್ಗನ್ ಮುನ್ನಡೆಸಿದ್ದರೆ ಈ ಬಾರಿಯ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ನಾಯಕನಾಗಿ ಮುನ್ನಡೆಸುತ್ತಿದ್ದಾರೆ.

ಇನ್ನು ಇತ್ತಂಡಗಳ ನಡುವೆ ನಡೆಯಲಿರುವ ಈ ಉದ್ಘಾಟನಾ ಪಂದ್ಯದ ಕುರಿತಾದ ಪಿಚ್ ವರದಿ, ನೇರಪ್ರಸಾರದ ಮಾಹಿತಿ, ಸಂಭಾವ್ಯ ಆಡುವ ಬಳಗ ಹಾಗೂ ಹವಾಮಾನ ವರದಿಯ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ..

ಪಿಚ್ ವರದಿ: ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣ ಬ್ಯಾಟ್ಸ್‌ಮನ್‌ಗಳ ಸ್ವರ್ಗವಾಗಿದ್ದು, ದಾಂಡಿಗರು ಈ ಪಿಚ್‌ನಲ್ಲಿ ರನ್ ಹೊಳೆಯನ್ನೇ ಹರಿಸಲಿದ್ದಾರೆ. ಹಾಗೂ ಈ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಲ್ಲಿ ಚೇಸ್ ಮಾಡುವ ತಂಡ ಹೆಚ್ಚಿನ ಹಿಡಿತವನ್ನು ಹೊಂದಿರುವುದು ಸಾಮಾನ್ಯವಾಗಿರಲಿದೆ. ಹೀಗಾಗಿ ಈ ಪಿಚ್‌ನಲ್ಲಿ ಟಾಸ್ ಗೆಲ್ಲುವ ತಂಡ ಮೊದಲು ಬೌಲಿಂಗ್ ಆಯ್ದುಕೊಂಡು, ಚೇಸಿಂಗ್ ಮಾಡಿದರೆ ಪಂದ್ಯ ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ.

ಸಂಭಾವ್ಯ ಆಡುವ ಬಳಗಗಳು:

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಆಡುವ ಬಳಗ: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ ( ವಿಕೆಟ್ ಕೀಪರ್ ) ಶಿವಂ ದುಬೆ, ಡ್ವೇನ್ ಬ್ರಾವೋ, ತುಷಾರ್ ದೇಶಪಾಂಡೆ, ಕ್ರಿಸ್ ಜೋರ್ಡಾನ್, ಆಡಮ್ ಮಿಲ್ನೆ

ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ಆಡುವ ಬಳಗ: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ಆಂಡ್ರೆ ರಸೆಲ್, ಸುನಿಲ್ ನರೈನ್, ಶಿವಂ ಮಾವಿ, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ

ಪಂದ್ಯದ ನೇರ ಪ್ರಸಾರದ ಮಾಹಿತಿ: ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಈ ಪಂದ್ಯವನ್ನು ದೂರದರ್ಶನದಲ್ಲಿ ಸ್ಟ‍ಾರ್ ಸ್ಪೋರ್ಟ್ಸ್‌ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ವೀಕ್ಷಿಸಬಹುದಾಗಿದೆ. ಹಾಗೂ ಈ ಪಂದ್ಯ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲೂ ಸಹ ನೇರ ಪ್ರಸಾರವಾಗಲಿದೆ.

Story first published: Saturday, March 26, 2022, 10:49 [IST]
Other articles published on Mar 26, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+