Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs DC: ಡೆಲ್ಲಿಗೆ ಆಘಾತ ನೀಡಿದ ಪಾಂಡ್ಯ ಪಡೆ: ಟೈಟನ್ಸ್‌ಗೆ ಸತತ ಎರಡನೇ ಗೆಲುವು

IPL 2022, Match 10, DC vs GT: Gujarat Titans beat Delhi Capitals by 14 runs

ಗುಜರಾತ್ ಟೈಟನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮಧ್ಯೆ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಚೊಚ್ಚಲ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುತ್ತಿರುವ ಟೈಟನ್ಸ್ ಸತತ 2ನೇ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ತನ್ನ ಪ್ರಥಮ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿತ್ತು ಗುಜರಾತ್ ಟೈಟನ್ಸ್.

ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಿರೀಕ್ಷೆಯಂತೆಯೇ ಮೊದಲಿಗೆ ಬೌಲಿಂಗ್ ಆಯ್ಕೆಮಾಡಿಕೊಂಡಿತ್ತು. ಹೀಗಾಗಿ ಮೊದಲು ಬ್ಯಾಟಿಂಗ್ ಆರಂಭಿಸಿದ ಗುಜರಾತ್ ಟೈಟನ್ಸ್ ಪರವಾಗಿ ಆರಂಭಿಕ ಆಟಗಾರ ಶುಬ್ಮನ್ ಗಿಲ್ ಅದ್ಭುತ ಪ್ರದರ್ಶನ ನೀಡಿದರು. 46 ಎಸೆತಗಳಲ್ಲಿ 84 ರನ್‌ ಸಿಡಿಸಿ ಮಿಂಚಿದ ಅವರು ಆರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ಸಿಡಿಸಿದ್ದಾರೆ. ಇವರ ಸಾಹಸದಿಂದಾಗಿ ಹಾರ್ದಿಕ್ ಪಾಂಡ್ಯ ಪಡೆ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 171 ರನ್‌ಗಳಿಸಿತು.

ಗುಜರಾತ್ ಟೈಟನ್ಸ್ ತಂಡ ನೀಡಿದ ಈ ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಲ್ಲಿಯೇ ಆಘಾತ ಅನುಭವಿಸಿತು. ಆರಂಭಿಕರಿಬ್ಬರು ಕೂಡ ವೈಫಲ್ಯವನ್ನು ಅನುಭವಿಸಿದರು. ಟಿಮ್ ಸೈಫರ್ಟ್ 3 ರನ್‌ಗಳಿಗೆ ಔಟಾದರೆ ಪೃಥ್ವಿ ಶಾ 10 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಮಂದೀಪ್ ಸಿಂಗ್ ಲಲಿತ್ ಯಾದವ್ ಅವರಿಂದಲೂ ಮಹತ್ವದ ಪ್ರದರ್ಶನ ಬರಲಿಲ್ಲ. ಆದರೆ ತಂಡದ ನಾಯಕ ರಿಷಭ್ ಪಂತ್ 29 ಎಸೆತಗಳಲ್ಲಿ 43 ರನ್‌ಗಳಿಸಿ ಮಿಂಚಿದರು. ಆದರೆ ನಂತರ ಮತ್ತೆ ಗುಜರಾತ್ ಟೈಟನ್ಸ್ ಬೌಲಿಂಗ್ ವಿಭಾಗ ಮೇಲುಗೈ ಸಾಧಿಸಿತು.

IPL 2022, Match 10, DC vs GT: Gujarat Titans beat Delhi Capitals by 14 runs

ಜಿಟಿ ತಂಡದ ಬಲಿಷ್ಠ ಬೌಲಿಂಗ್ ದಾಳಿಯಿಂದಾಗಿ ನಿಗದಿತ 20 ಓವರ್‌ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ ತಂಡ 9 ವಿಕೆಟ್ ಕಳೆದುಕೊಂಡು 157 ರನ್‌ಗಳಿಸಿತು. ಈ ಮೂಲಕ 14 ರನ್‌ಗಳ ಅಂತರದ ಸೋಲು ಅನುಭವಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್: ಶುಬ್ಮನ್ ಗಿಲ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್ ಸದಾರಂಗನಿ, ರಶೀದ್ ಖಾನ್, ಲಾಕಿ ಫರ್ಗುಸನ್, ವರುಣ್ ಆರೋನ್, ಮೊಹಮ್ಮದ್ ಶಮಿ
ಬೆಂಚ್: ವೃದ್ಧಿಮಾನ್ ಸಹಾ, ಪ್ರದೀಪ್ ಸಾಂಗ್ವಾನ್, ಜಯಂತ್ ಯಾದವ್, ಗುರುಕೀರತ್ ಸಿಂಗ್ ಮಾನ್, ಅಲ್ಜಾರಿ ಜೋಸೆಫ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ದರ್ಶನ್ ನಲ್ಕಂಡೆ, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ಸಾಯಿ ಸುದರ್ಶನ್, ಯಶ್ ದಯಾಳ್, ನೂರ್ ಅಹ್ಮದ್

ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಟಿಮ್ ಸೀಫರ್ಟ್, ಮನ್‌ದೀಪ್ ಸಿಂಗ್, ರಿಷಭ್ ಪಂತ್ (ನಾಯಕ & ವಿಕೆಟ್ ಕೀಪರ್), ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್
ಬೆಂಚ್: ಕಮಲೇಶ್ ನಾಗರಕೋಟಿ, ಶ್ರೀಕರ್ ಭರತ್, ಸರ್ಫರಾಜ್ ಖಾನ್, ಲುಂಗಿ ಎನ್ಗಿಡಿ, ಅಶ್ವಿನ್ ಹೆಬ್ಬಾರ್, ಪ್ರವೀಣ್ ದುಬೆ, ಅನ್ರಿಚ್ ನೋರ್ಕಿಯಾ, ಚೇತನ್ ಸಕರಿಯಾ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್

Story first published: Saturday, April 2, 2022, 23:54 [IST]
Other articles published on Apr 2, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+