CSK vs PBKS Preview: ಪ್ರಿವ್ಯೂ, ಸಂಭಾವ್ಯ ತಂಡ, ಪಿಚ್ ರಿಪೋರ್ಟ್, ಹವಾಮಾನ ವರದಿ

ಐಪಿಎಲ್ ಅಂಗಳದಲ್ಲಿ ಭಾನುವಾರ ಒಂದು ಪಂದ್ಯ ನಡೆಯಲಿದ್ದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಎರಡು ತಂಡಗಳು ಕೂಡ ಈಗಾಗಲೇ ಎರಡು ಪಂದ್ಯಗಳನ್ನು ಆಡಿದ್ದು ಚೆನ್ನೈ ಸೂಪರ್ ಕಿಂಗ್ಸ್ ಎರಡು ಪಂದ್ಯದಲ್ಲಿಯೂ ಸೋಲಿನ ಕಹಿ ಅನುಭವಿಸಿದೆ. ಇತ್ತ ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದರೂ ಎರಡನೇ ಪಂದ್ಯದಲ್ಲಿ ಸೋಲು ಅನುಭವಿಸಿದ್ದು ಮತ್ತೆ ಗೆಲುವಿನ ಲಯಕ್ಕೆ ಮರಳುವ ಪ್ರಯತ್ನದಲ್ಲಿದೆ.
ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿ ಜಡೇಜಾ ನಾಯಕತ್ವದಲ್ಲಿ ಕಣಕ್ಕಿಳಿದಿದೆ. ಆದರೆ ಜಡ್ಡು ನಾಯಕತ್ವ ಪರಿಣಾಮಕಾರಿ ಎನಿಸುತ್ತಿಲ್ಲ. ಅಲ್ಲದೆ ನಾಲ್ಕು ಬಾರಿಯ ಚಾಂಪಿಯನ್ ತಂಡ ಅಂತಿಮ ಹಂತದಲ್ಲಿ ಲೆಕ್ಕಾಚಾರದಲ್ಲಿ ಎಡವುತ್ತಿರುವುದು ಹಿನ್ನಡೆಗೆ ಕಾರಣವಾಗಿದೆ. ಅದರಲ್ಲೂ ಬೌಲಿಂಗ್ ವಿಭಾಗ ಕಳಪೆ ಪ್ರದರ್ಶನ ನೀಡುತ್ತಿರುವುದು ತಂಡದ ತಲೆನೋವು ಹೆಚ್ಚಿಸಿದೆ.
ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಲಿ ಚಾಂಪಿಯನ್ ಎಂಬುದು ಗಮನಾರ್ಹ ಸಂಗತಿ. ಅನುಭವಿ ಆಟಗಾರರ ದಂಡೇ ತಂಡದಲ್ಲಿದೆ. ಯಾವ ಹಂತದಲ್ಲಿಯೂ ತಿರುಗಿ ಬೀಳುವ ಸಾಮರ್ಥ್ಯವಿರುವ ಆಟಗಾರರ ಪಡೆಯಿದೆ. ಮಯಾಂಕ್ ಅಗರ್ವಾಲ್ ಪಡೆ ಹಾಗೂ ಜಡೇಜಾ ನೇತೃತ್ವದ ತಂಡಗಳ ನಡುವಿನ ಪಂದ್ಯಕ್ಕೂ ಮುನ್ನ ನೀವು ತಿಳಿದಿರಬೇಕಾದ ಕೆಲ ಪ್ರಮುಖ ಮಾಹಿತಿಗಳು ಮುಂದೆ ಇದೆ
ಸ್ಕ್ವಾಡ್‌ಗಳು: ಪಿಬಿಕೆಎಸ್: ಶಿಖರ್ ಧವನ್, ಕಗಿಸೊ ರಬಾಡ, ಜಾನಿ ಬೈರ್‌ಸ್ಟೋವ್, ರಾಹುಲ್ ಚಾಹರ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಪ್ರಭಾಸಿಮ್ರಾನ್ ಸಿಂಗ್, ಇಶಾನ್ ಪೊರೆಲ್, ಲಿಯಾಮ್ ಲಿವಿಂಗ್‌ಸ್ಟೋನ್, ಒಡಿಯನ್ ಸ್ಮಿತ್, ಸಂದೀಪ್ ಶರ್ಮಾ, ರಾಜ್ ಅಂಗದ್ ಬಾವಾ, ರಿಷಿ ಧವನ್, ಪ್ರೇರಕ್ ಮಂಕಡ್, ಅಥರ್ವ ಟೈಡೆ, ವೈಭವ್ ಅರೋರಾ, ಭಾನುಕಾ ರಾಜಪಕ್ಸೆ, ರಿಟಿಕ್ ಚಟರ್ಜಿ, ಬಲ್ತೇಜ್ ಧಂಡಾ, ಅನ್ಶ್ ಪಟೇಲ್, ಜಿತೇಶ್ ಶರ್ಮಾ, ಬೆನ್ನಿ ಹೋವೆಲ್, ನಾಥನ್ ಎಲ್ಲಿಸ್

ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ರವೀಂದ್ರ ಜಡೇಜಾ (ಸಿ), ಶಿವಂ ದುಬೆ, ಎಂಎಸ್ ಧೋನಿ (ಡಬ್ಲ್ಯೂ), ಡ್ವೇನ್ ಬ್ರಾವೋ, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ತುಷಾರ್ ದೇಶಪಾಂಡೆ, ಕ್ರಿಸ್ ಜೋರ್ಡಾನ್, ರಾಜವರ್ಧನ್ ಹಂಗರ್ಗೇಕರ್, ಮಹೇಶ್ ತೀಕ್ಷಣ, ಹರಿ ನಿಶಾಂತ್, ಎನ್ ಜಗದೀಸನ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಮುಖೇಶ್ ಚೌಧರಿ, ಕೆಎಂ ಆಸಿಫ್, ಸಿಮರ್ಜೀತ್ ಸಿಂಗ್, ಭಗತ್ ವರ್ಮಾ, ಮೊಯಿನ್ ಅಲಿ, ಡ್ವೈನ್ ಪ್ರಿಟೋರಿಯಸ್
ಪಂದ್ಯದ ಸಮಯ ಹಾಗೂ ಸ್ಥಳ: ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 3ರಂದು ಭಾನುವಾರ ನಡೆಯಲಿದೆ. ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ಬ್ರೆಬೋರ್ನ್ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟರ್ ಹಾಗೂ ಬೌಲರ್ ಇಬ್ಬರಿಗೂ ಸಮಾನಾಗಿ ಬೆಂಬಲ ನೀಡುವ ಪಿಚ್ ಆಗಿದೆ. ಪಂದ್ಯ ಮುಂದುವರಿಯುತ್ತಿದ್ದಂತೆ ಇಬ್ಬನಿ ಬೀಳುವ ಕಾರಣ ಎರಡನೇ ಸರದಿಯಲ್ಲಿ ಬೌಲಿಂಗ್ ತಡೆಸುವ ತಂಡಗಳು ಸವಾಲನ್ನು ಎದುರಿಸುತ್ತದೆ. ಈ ಅಂಗಳದಲ್ಲಿಮ ಮೊದಲ ಇನ್ನಿಂಗ್ಸ್‌ನ ಸರಾಸರಿ ಮೊತ್ತ 180 ಆಗಿದೆ.
ಸಂಭಾವ್ಯ ಆಡುವ ಬಳಗ: ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಅಂಬಟಿ ರಾಯುಡು, ಎಂಎಸ್ ಧೋನಿ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ನಾಯಕ), ಡ್ವೈನ್ ಪ್ರಿಟೋರಿಯಸ್, ಶಿವಂ ದುಬೆ, ಡ್ವೇನ್ ಬ್ರಾವೋ, ಮುಖೇಶ್ ಚೌಧರಿ, ತುಷಾರ್ ದೇಶಪಾಂಡೆ
ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಲಿಯಾಮ್ ಲಿವಿಂಗ್ಸ್ಟೋನ್, ಭಾನುಕಾ ರಾಜಪಕ್ಸೆ (ವಿಕೆಟ್ ಕೀಪರ್), ಓಡಿಯನ್ ಸ್ಮಿತ್, ಶಾರುಖ್ ಖಾನ್, ರಾಜ್ ಬಾವಾ, ಹರ್ಪ್ರೀತ್ ಬ್ರಾರ್, ಕಗಿಸೊ ರಬಾಡ, ಅರ್ಷ್‌ದೀಪ್ ಸಿಂಗ್, ರಾಹುಲ್ ಚಹಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications