Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

SRH vs LSG Preview: ಹೆಡ್‌ ಟು ಹೆಡ್, ಪಿಚ್ ರಿಪೋರ್ಟ್, ಸಂಭಾವ್ಯ ಪ್ಲೇಯಿಂಗ್ 11

LSG vs SRH

ಮುಂಬೈನ ಡಿ.ವೈ ಪಾಟೀಲ್ ಸ್ಟೇಡಿಯಂನಲ್ಲಿ ಬಲಿಷ್ಠ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸನ್‌ರೈಸರ್ಸ್ ಹೈದ್ರಾಬಾದ್ ತಂಡವು ಮುಖಾಮುಖಿಯಾಗುತ್ತಿವೆ. ಪಾಯಿಂಟ್ಸ್ ಟೇಬಲ್‌ನಲ್ಲಿ ತಳಮುಟ್ಟಿರುವ ಕೇನ್ ವಿಲಿಯಮ್ಸನ್ ನಾಯಕತ್ವದ ಹೈದ್ರಾಬಾದ್‌ ಹೇಗಾದರೂ ಮಾಡಿ ಇಂದು ಗೆಲುವಿನ ಖಾತೆ ತೆರೆಯಬೇಕೆಂದು ಕಾತುರದಿಂದ ಎದುರು ನೋಡುತ್ತಿದೆ.

ಐಪಿಎಲ್‌ನಲ್ಲಿ ಹೈದ್ರಾಬಾದ್ ಮೊದಲ ಬಾರಿಗೆ ಲಕ್ನೋ ಸೂಪರ್‌ ಜೈಂಟ್ಸ್ ತಂಡವನ್ನ ಎದುರಿಸುತ್ತಿದೆ. ಸಂಜೆ 7.30ಕ್ಕೆ ಪಂದ್ಯ ಆರಂಭಗೊಳ್ಳಲಿದ್ದು, ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್ ಹಾಗೂ ಹಾಟ್‌ಸ್ಟಾರ್‌ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದು.

ಪಾಯಿಂಟ್ಸ್ ಟೇಬಲ್‌ನಲ್ಲಿ ಕೊನೆಯ ಸ್ಥಾನದಲ್ಲಿರುವ SRH

ಪಾಯಿಂಟ್ಸ್ ಟೇಬಲ್‌ನಲ್ಲಿ ಕೊನೆಯ ಸ್ಥಾನದಲ್ಲಿರುವ SRH

ಸನ್‌ರೈಸರ್ಸ್ ಹೈದರಾಬಾದ್ ಪ್ರಸ್ತುತ ಟಾಟಾ ಐಪಿಎಲ್‌ನ ಈ ಸೀಸನ್‌ನ ಪಾಯಿಂಟ್ಸ್ ಟೇಬಲ್‌ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ, ಆದರೆ ಲಕ್ನೋ ಸೂಪರ್ ಜೈಂಟ್ಸ್ ಪ್ರಸ್ತುತ ಪಾಯಿಂಟ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

ಟಾಟಾ ಐಪಿಎಲ್‌ನ ಈ ಸೀಸನ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಆಡಿದ ಒಂದು ಪಂದ್ಯವನ್ನ ಸೋತಿದೆ. ರಾಜಸ್ತಾನ ರಾಯಲ್ಸ್ ವಿರುದ್ಧ 61ರನ್‌ಗಳಿಂದ ಸೋಲನ್ನ ಕಂಡಿದೆ. ಆದ್ರೆ ಲಕ್ನೋ ಸೂಪರ್ ಜೈಂಟ್ಸ್ ಆರಂಭಿಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೋತ ಬಳಿಕ ಎರಡನೇ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ 210ರನ್ ಚೇಸ್ ಮಾಡಿ ಪಂದ್ಯ ಗೆಲ್ಲುವಲ್ಲಿ ಯಶಸ್ವಿಯಾದರು.

ಹವಾಮಾನ ಹೇಗಿರಲಿದೆ? ಮಳೆ ಬರುವ ಸಾಧ್ಯತೆ ಇದೆಯೇ?

ಹವಾಮಾನ ಹೇಗಿರಲಿದೆ? ಮಳೆ ಬರುವ ಸಾಧ್ಯತೆ ಇದೆಯೇ?

ಪಂದ್ಯದ ದಿನದಂದು ತಾಪಮಾನವು 53% ಹ್ಯುಮಿಡಿಟಿ ಮತ್ತು 11 ಕಿಮೀ/ಗಂ ಗಾಳಿಯ ವೇಗದೊಂದಿಗೆ 31 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ನಿರೀಕ್ಷೆಯಿದೆ. ಆಟದ ಸಮಯದಲ್ಲಿ ಮಳೆಯಾಗುವ ಯಾವುದೇ ಸಾಧ್ಯತೆ ಕಂಡುಬಂದಿಲ್ಲ.

ಪಿಚ್ ರಿಪೋರ್ಟ್

ಪಿಚ್ ರಿಪೋರ್ಟ್

ಡಿ.ವೈ ಪಾಟೀಲ್ ಸ್ಟೇಡಿಯಂನಲ್ಲಿ ಸಾಮಾನ್ಯವಾದ ಬೌನ್ಸ್ ಅನ್ನು ಕಾಣಬಹುದು. ಈ ಪಿಚ್‌ನಲ್ಲಿ ಅಂದಾಜು 160-170 ರನ್‌ಗಳಷ್ಟು ನಿರೀಕ್ಷಿಸಬಹುದಾಗಿದೆ. ಒಟ್ಟಾರೆಯಾಗಿ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಕ್ಕೆ ಪಿಚ್‌ ಅನುಕೂಲವಾಗಿದೆ. ಮೊದಲ ಇನ್ನಿಂಗ್ಸ್ ಸರಾಸರಿ ಸ್ಕೋರ್ 180 ರನ್‌ಗಳಾಗಿದೆ.

ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ತಂಡವು ಹೆಚ್ಚಿನ ಗೆಲುವಿನ ದಾಖಲೆ ಹೊಂದಿದ್ದು, ಶೇಕಡಾ 80ರಷ್ಟು ಗೆಲುವಿನ ಸರಾಸರಿ ಹೊಂದಿದೆ.

ಸನ್‌ರೈಸರ್ಸ್ ಹೈದ್ರಾಬಾದ್ ಸಂಭಾವ್ಯ ಪ್ಲೇಯಿಂಗ್ 11

ಸನ್‌ರೈಸರ್ಸ್ ಹೈದ್ರಾಬಾದ್ ಸಂಭಾವ್ಯ ಪ್ಲೇಯಿಂಗ್ 11

ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ರೊಮಾರಿಯೋ ಶೆಫರ್ಡ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್

ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ಪ್ಲೇಯಿಂಗ್ 11

ಲಕ್ನೋ ಸೂಪರ್ ಜೈಂಟ್ಸ್ ಸಂಭಾವ್ಯ ಪ್ಲೇಯಿಂಗ್ 11

ಕೆ.ಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಎವಿನ್ ಲೂಯಿಸ್, ಕೃನಾಲ್ ಪಾಂಡ್ಯ, ದೀಪಕ್ ಹೂಡಾ, ಆಯುಷ್ ಬಡೋನಿ, ಆಂಡ್ರ್ಯೂ ಟೈ, ಅವೇಶ್ ಖಾನ್, ರವಿ ಬಿಷ್ಣೋಯ್, ದುಷ್ಮಂತ ಚಮೀರಾ

Story first published: Monday, April 4, 2022, 13:06 [IST]
Other articles published on Apr 4, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+