RCB vs RR Preview: ಪ್ರಿವ್ಯೂ, ಸಂಭಾವ್ಯ ತಂಡ, ಪಿಚ್ ರಿಪೋರ್ಟ್, ಹವಾಮಾನ ವರದಿ

ಐಪಿಎಲ್ 15ನೇ ಆವೃತ್ತಿಯನ್ನು ವಿರೋಚಿತ ಸೋಲಿನಿಂದಿಗೆ ಆರಂಭಿಸಿದರೂ ಎರಡನೇ ಪಂದ್ಯದಲ್ಲಿ ಅದ್ಭುತ ರೀತಿಯಲ್ಲಿ ಗೆಲ್ಲುವ ಮೂಲಕ ಆರ್‌ಸಿಬಿ ಉತ್ತಮ ಆರಂಭವನ್ನು ಪಡೆದಿದೆ. ಇದೀಗ ಮೂರನೇ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿರುವ ಫಾಪ್ ಡು ಪ್ಲೆಸಿಸ್ ಬಳಗ ಗೆಲುವಿನ ಲಯವನ್ನು ಮುಂದುವರಿಸುವ ಹುಮ್ಮಸ್ಸಿನಲ್ಲಿದೆ. ಆದರೆ ಈ ಬಾರಿ ಆರ್‌ಸಿಬಿ ತಂಡಕ್ಕೆ ಎದುರಾಗಿರುವುದು ಟೂರ್ನಿಯಲ್ಲಿ ಅಮೋಘ ಆರಂಭ ಪಡೆದಿರುವ ರಾಜಸ್ಥಾನ್ ರಾಯಲ್ಸ್ ಬಳಗ. ಸತತ ಎರಡು ಗೆಲುವು ಸಾಧಿಸಿರುವ ಸಂಜು ಸ್ಯಾಮ್ಸನ್ ಬಳಗದ ವಿರುದ್ಧ ಆರ್‌ಸಿಬಿ ಕಠಿಣ ಪೈಪೋಟಿಯನ್ನು ಎದುರಿಸುವುದರಲ್ಲಿ ಅನುಮಾನವಿಲ್ಲ.
ಸಂಜು ಸ್ಯಾಮ್ಸನ್ ಬಳಗ ಈ ಬಾರಿಯ ಆವೃತ್ತಿಯ ಆರಂಭದ ಎರಡು ಪಂದ್ಯಗಳಲ್ಲಿಯೂ ಸಂಜು ಸ್ಯಾಮ್ಸನ್ ಬಳಗ ಸರ್ವಾಂಗೀಣ ಪ್ರದರ್ಶನ ನೀಡಿ ಮಿಂಚಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲ ಪಂದ್ಯದಲ್ಲಿ ಮಣಿಸಿದ ಆರ್‌ಆರ್ ತಂಡ ಮತ್ತೊಂದು ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿದೆ. ಈ ಎರಡೂ ಪಂದ್ಯದಲ್ಲಿಯೂ ಆರ್‌ಆರ್ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಮಿಂಚುವಲ್ಲಿ ಯಶಸ್ವಿಯಾಗಿದೆ.
ಮಂಗಳವಾರ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಬಗೆಗಿನ ಕೆಲ ಮಹತ್ವದ ಮಾಹಿತಿಗಳು ನಿಮಗಾಗಿ.

ಸ್ಕ್ವಾಡ್‌ಗಳು: ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಪ್ರಸಿದ್ಧ್ ಕೃಷ್ಣ,
ಯುಜ್ವೇಂದ್ರ ಚಹಾಲ್, ರಿಯಾನ್ ಪರಾಗ್, ಕೆಸಿ ಕಾರಿಯಪ್ಪ, ನವದೀಪ್ ಸೈನಿ, ಓಬೇದ್ ಮೆಕಾಯ್, ಅನುನಯ್ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ್ ಜುರೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಶುಭಂ ಗರ್ವಾಲ್, ಜೇಮ್ಸ್ ನೀಶಮ್, ನಾಥನ್ ಕೌಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇರಿಲ್ ಮಿಚೆಲ್
ಆರ್‌ಸಿಬಿ: ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಜತ್ ಪಾಟಿದಾರ್, ಅನುಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫೇನ್ ರುದರ್‌ಫೋರ್ಡ್, ಚಾಮ ವಿ ಮಿಲಿಂದ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್
ಪಂದ್ಯದ ಸಮಯ ಹಾಗೂ ಸ್ಥಳ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 5ರಂದು ಮಂಗಳವಾರ ನಡೆಯಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ವಾಂಖೆಡೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಸ್ವರ್ಗ ಎನಿಸಿಕೊಂಡಿದೆ. ಆರ್‌ಸಿಬಿ ಹಾಗೂ ಆರ್‌ಆರ್ ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಕಾರಣ ದೊಡ್ಡ ಮೊತ್ತವನ್ನು ಇಲ್ಲಿ ನಿರೀಕ್ಷಿಸಲಾಗುತ್ತಿದೆ. ಇನ್ನಿಂಗ್ಸ್‌ನ ಆರಂಭದಲ್ಲಿ ವೇಗಿಗಳಿಗೆ ಸ್ವಲ್ಪ ನೆರವು ಸಿಗಬಹುದು. ಇನ್ನು ಇಬ್ಬನಿ ಈ ಪಂದ್ಯದಲ್ಲಿಯೂ ಹೆಚ್ಚಿನ ಪರಿಣಾಮವನ್ನು ಬೀರಬಹುದು.
ಸಂಭಾವ್ಯ ಆಡುವ ಬಳಗ: ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ನವದೀಪ್ ಸೈನಿ, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶೆರ್ಫೇನ್ ರುದರ್‌ಫೋರ್ಡ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications