
ಐಪಿಎಲ್ 15ನೇ ಆವೃತ್ತಿಯ 14ನೇ ಪಂದ್ಯ ಬುಧವಾರ ನಡೆಯಲಿದ್ದು ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾ ಮೈಟ್ ರೈಡರ್ಸ್ ತಂಡಕ್ಕೆ ಇದು ನಾಲ್ಕನೇ ಪಂದ್ಯವಾಗಿದ್ದು ಇದಕ್ಕೂ ಮುನ್ನ ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿದೆ. ಈ ಮೂಲಕ ಈ ಬಾರಿ ಆರಂಭದಿಂದಲೇ ಉತ್ತಮ ಪ್ರದರ್ಶನ ನೀಡುವಲ್ಲಿ ಕೆಕೆಆರ್ ಪಡೆ ಯಶಸ್ವಿಯಾಗಿದೆ. ನಾಯಕನಾಗಿ ಶ್ರೇಯಸ್ ಐಯ್ಯರ್ ಗಮನ ಸೆಳೆಯುತ್ತಿದ್ದಾರೆ.
ಮತ್ತೊಂದೆಡೆ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಈ ಬಾರಿ ಆರಂಭಿಕ ಎರಡು ಪಂದ್ಯದಲ್ಲಿಯೂ ಸೋಲು ಅನುಭವಿಸಿದ್ದು ಭಾರೀ ಹಿನ್ನಡೆ ಕಂಡಿದೆ. ಮುಂಬೈ ಇಂಡಿಯನ್ಸ್ ತಂಡದ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವುದು ತಂಡಕ್ಕೆ ಭಾರೀ ಹಿನ್ನಡೆಯುಂಟು ಮಾಡಿದೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಸ್ಥಾನ ಹೆಚ್ಚಿಸಿಕೊಳ್ಳುವ ಪ್ರಯತ್ನ ಮಾಡಲಿದೆ ರೋಹಿತ್ ಶರ್ಮಾ ಬಳಗ.
ಬುಧವಾರ ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಗಳ ಪ್ರಮುಖ ಮಾಹಿತಿಗಳು ಇಲ್ಲಿದೆ.
ಸ್ಕ್ವಾಡ್‌ಗಳು:ಕೆಕೆಆರ್: ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್(ನಾಯಕ), ಪ್ಯಾಟ್ ಕಮ್ಮಿನ್ಸ್, ಅಭಿಜೀತ್ ತೋಮರ್, ಸ್ಯಾಮ್ ಬಿಲ್ಲಿಂಗ್ಸ್, ಆರೋನ್ ಫಿಂಚ್, ರಮೇಶ್ ಕುಮಾರ್, ಮೊಹಮ್ಮದ್ ನಬಿ, ಅಮನ್ ಖಾನ್, ಉಮೇಶ್ ಯಾದವ್, ನಿತೀಶ್ ರಾಣಾ, ಶಿವಂ ಮಾವಿ, ಶೆಲ್ಡನ್ ಜಾಕ್ಸನ್ , ರಿಂಕು ಸಿಂಗ್, ಅನುಕುಲ್ ರಾಯ್, ರಸಿಖ್ ದಾರ್, ಚಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ಅಶೋಕ್ ಶರ್ಮಾ, ಪ್ರಥಮ್ ಸಿಂಗ್.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಕೀರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್, ರಮಣ್‌ದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಫ್ಯಾಬಿಯನ್ ಅಲೆನ್, ಡೆವಾಲ್ಡ್ ಬ್ರೆವಿಸ್, ಬಾಸಿಲ್ ಥಂಪಿ, ಎಂ ಅಶ್ವಿನ್, ಜಯದೇವ್ ಉನದ್ಕತ್, ಮಯಾಂಕ್ ಮರ್ಕಂಡೆ, ತಿಲಕ್ ಮಾರ್ಕಂಡೆ , ಸಂಜಯ್ ಯಾದವ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್
ಪಂದ್ಯದ ಸಮಯ ಹಾಗೂ ಸ್ಥಳ: ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಈ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಸಂಜೆ 7:30ಕ್ಕೆ ಪ್ರಾರಂಭವಾಗಲಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್‌ನ ಪಿಚ್ ಸಾಮಾನ್ಯವಾಗಿ ಬ್ಯಾಟರ್ ಹಾಗೂ ಬೌಲರ್ ಇಬ್ಬರಿಗೂ ಸಮಾನಾಗಿ ಬೆಂಬಲ ನೀಡುವ ಪಿಚ್ ಆಗಿದೆ. ಪಂದ್ಯ ಮುಂದುವರಿಯುತ್ತಿದ್ದಂತೆ ಇಬ್ಬನಿ ಬೀಳುವ ಕಾರಣ ಎರಡನೇ ಸರದಿಯಲ್ಲಿ ಬೌಲಿಂಗ್ ತಡೆಸುವ ತಂಡಗಳು ಸವಾಲನ್ನು ಎದುರಿಸುತ್ತದೆ.
ಸಂಭಾವ್ಯ ತಂಡಗಳು: ಕೊಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ, ಶಿವಂ ಮಾವಿ.
ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಸೂರ್ಯ ಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಎಂ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಜಯದೇವ್ ಉನದ್ಕತ್