
ಐಪಿಎಲ್‌ನ 15ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದರೂ ಉಳಿದ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟೂರ್ನಿಯನ್ನು ಉತ್ತಮವಾಗಿ ಆರಂಭಿಸಿದೆ ಲಕ್ನೋ ಸೂಪರ್ ಜೈಂಟ್ಸ್ ತಂಡ. ನಾಯಕ ಕೆಎಲ್ ರಾಹುಲ್ ಈ ಬಾರಿ ಕುಡ ತಮಮ್ ಅದ್ಭುತ ಫಾರ್ಮ್ ಮುಂದುವರಿಸಿದ್ದಾರೆ.
ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿದ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಒಂದು ಸೋಲು ಅನುಭವಿಸಿದೆ. ಅದರಲ್ಲೂ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಅನುಭವಿಸಿದ ಸೋಲಿನಿಂದ ಹೊರಬರುವ ಪ್ರಯತ್ನ ನಡೆಸಲಿದೆ. ಹೀಗಾಗಿ ಗುರುವಾರ ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಟೂರ್ನಿಯಲ್ಲಿ ಮತ್ತೊಂದು ಜಿದ್ದಾಜಿದ್ದಿನ ಪಂದ್ಯ ನಡೆಯುವುದರಲ್ಲಿ ಅನುಮಾನವಿಲ್ಲ.
ಗುರುವಾರ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಗಳ ಪ್ರಮುಖ ಮಾಹಿತಿಗಳು ಇಲ್ಲಿದೆ.

ಸ್ಕ್ವಾಡ್‌ಗಳು: ಎಲ್‌ಎ್‌ಜಿ: ಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ರವಿ ಬಿಷ್ಣೋಯ್, ಅವೇಶ್ ಖಾನ್, ಆಂಡ್ರ್ಯೂ ಟೈ, ದುಷ್ಮಂತ ಚಮೀರಾ, ಅಂಕಿತ್ ರಾಜ್‌ಪೂತ್, ಶಹಬಾಜ್ ನದೀಮ್, ಮನನ್ ವೋಹ್ರಾ, ಮೊಹ್ಸಿನ್ ಖಾನ್, ಆಯುಷ್ ಬದೋನಿ, ಕರಣ್ ಶರ್ಮಾ, ಮಯಾಂಕ್ ಯಾದವ್, ಕೈಲ್ ಮೇಯರ್ಸ್, ಕೆ ಗೌತಮ್, ಎವಿನ್ ಲೂಯಿಸ್.
ಡೆಲ್ಲಿ ಕ್ಯಾಪಿಟಲ್ಸ್: ರಿಷಭ್ ಪಂತ್(ನಾಯಕ, ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಪೃಥ್ವಿ ಶಾ, ಅನ್ರಿಚ್ ನಾರ್ಕಿಯಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶಾರ್ದೂಲ್ ಠಾಕೂರ್, ಮುಸ್ತಾಫಿಜುರ್ ರೆಹಮಾನ್, ಕುಲದೀಪ್ ಯಾದವ್, ಅಶ್ವಿನ್ ಹೆಬ್ಬಾರ್, ಅಭಿಷೇಕ್ ಶರ್ಮಾ, ಕಮಲೇಶ್ ನಾಗರಕೋಟಿ, ಕೆಎಸ್ ಭರತ್, ಮನದೀಪ್ ಸಿಂಗ್, ಖಲೀಲ್ ಸದ್ಕಾವ್, ಚೇತನ್ ಸದ್ಕಾವ್, ಚೇತನ್ ಸದ್ಕಾವ್ , ರಿಪಾಲ್ ಪಟೇಲ್, ಯಶ್ ಧುಲ್, ರೋವ್‌ಮನ್ ಪೊವೆಲ್, ಪ್ರವೀಣ್ ದುಬೆ, ಲುಂಗಿ ಎನ್‌ಗಿಡಿ, ವಿಕಿ ಓಸ್ಟ್ವಾಲ್, ಸರ್ಫರಾಜ್ ಖಾನ್.
ಪಂದ್ಯದ ಸಮಯ ಹಾಗೂ ಸ್ಥಳ: ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಈ ಪಂದ್ಯ ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಸಂಜೆ 7:30ಕ್ಕೆ ಪ್ರಾರಂಭವಾಗಲಿದೆ.
ಪಿಚ್ ರಿಪೋರ್ಟ್: ಬ್ರೆಬೋರ್ನ್ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟರ್ ಹಾಗೂ ಬೌಲರ್ ಇಬ್ಬರಿಗೂ ಸಮಾನಾಗಿ ಬೆಂಬಲ ನೀಡುವ ಪಿಚ್ ಆಗಿದೆ. ಪಂದ್ಯ ಮುಂದುವರಿಯುತ್ತಿದ್ದಂತೆ ಇಬ್ಬನಿ ಬೀಳುವ ಕಾರಣ ಎರಡನೇ ಸರದಿಯಲ್ಲಿ ಬೌಲಿಂಗ್ ನಡೆಸುವ ತಂಡಗಳು ಸವಾಲನ್ನು ಎದುರಿಸುತ್ತದೆ. ಈ ಅಂಗಳದಲ್ಲಿನ ಮೊದಲ ಇನ್ನಿಂಗ್ಸ್‌ನ ಸರಾಸರಿ ಮೊತ್ತ 180 ಆಗಿದೆ.
ಸಂಭಾವ್ಯ ಆಡುವ ಬಳಗ: ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಲೋಕೇಶ್ ರಾಹುಲ್ (ನಾಯಕ), ಮನೀಶ್ ಪಾಂಡೆ, ಎವಿನ್ ಲೆವಿಸ್, ಆಯುಷ್ ಬಡೋನಿ, ದೀಪಕ್ ಹೂಡಾ, ಜೇಸನ್ ಹೋಲ್ಡರ್, ಕೃನಾಲ್ ಪಾಂಡ್ಯ, ಅವೇಶ್ ಖಾನ್, ಆಂಡ್ರ್ಯೂ ಟೈ, ರವಿ ಬಿಷ್ಣೋಯ್
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್, ಪೃಥ್ವಿ ಶಾ, ರಿಷಬ್ ಪಂತ್ (ನಾಯಕ & ವಿಕೆಟ್ ಕೀಪರ್), ಕೆಎಸ್ ಭರತ್/ ಮನ್‌ದೀಪ್ ಸಿಂಗ್, ಲಲಿತ್ ಯಾದವ್, ರೋವ್‌ಮನ್ ಪೊವೆಲ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಅನ್ರಿಚ್ ನಾರ್ಕಿಯಾ, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್