RCB vs MI Preview: ಪ್ರಿವ್ಯೂ, ಸಂಭಾವ್ಯ ತಂಡ, ಪಿಚ್ ರಿಪೋರ್ಟ್, ಹವಾಮಾನ ವರದಿ

ಐಪಿಎಲ್ 15ನೇ ಆವೃತ್ತಿಯ 18ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಶನಿವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಈ ಸ್ಟಾರ್ ಆಟಗಾರರ ಪಡೆಯನ್ನು ಹೊಂದಿರುವ ಈ ಎರಡು ತಂಡಗಳ ಮುಖಾಮುಖಿ ಅಭಿಮಾನಿಗಳಿಗೆ ರಸದೌತಣವನ್ನು ನೀಡಲಿದೆ. ಈ ಪಂದ್ಯದಲ್ಲಿ ಯಾವ ತಮಡ ಗೆಲುವು ಸಾಧಿಸಲಿದೆ ಎಂಬುದು ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸಿದೆ.
ಒಂದೆಡೆ ಆರ್‌ಸಿಬಿ ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಆರಂಭವನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಆಡಿದ ಮೂರು ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಹೊರತಾಗಿಯೂ ಆರ್‌ಸಿಬಿ ಸೋಲನ್ನು ಅನುಭವಿಸಿತ್ತು. ಆದರೆ ನಂತರದ ಎರಡೂ ಪಂದ್ಯಗಳಲ್ಲಿಯೂ ಸರ್ವಾಂಗೀಣ ಪ್ರದರ್ಶನ ನೀಡಲು ಯಶಸ್ವಿಯಾಗಿದ್ದು ಆರ್‌ಸಿಬಿ ಭರ್ಜರಿ ಗೆಲುವು ಸಾಧಿಸಿದೆ. ಇನ್ನು ಶನಿವಾರ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ಪರವಾಗಿ ಗ್ಲೆನ್ ಮ್ಯಾಕ್ಸ್‌ವೆಲ್ ಕಣಕ್ಕಿಳಿಯಲಿದ್ದು ಆರ್‌ಸಿಬಿ ತಂಡ ಮತ್ತಷ್ಟು ಬಲಿಷ್ಠವಾಗಿ ಕಣ್ಕಕಿಳಿಯಲಿದೆ.
ಇತ್ತ ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ಮೂರು ಪಂದ್ಯಗಳನ್ನು ಆಡಿದ್ದು ಮೂರರಲ್ಲಿಯೂ ಸೋಲು ಅನುಭವಿಸಿದೆ. ಹೀಗಾಗಿ ಈ ಬಾರಿಯ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಲು ರೋಹಿತ್ ಶರ್ಮಾ ಬಳಗ ಸರ್ವ ಪ್ರಯತ್ನವನ್ನೂ ನಡೆಸಲಿದೆ. ಹೀಗಾಗಿ ಬಲಿಷ್ಠ ಆಟಗಾರರನ್ನು ಹೊಂದಿರುವ ಮುಂಬೈ ಇಂಡಿಯನ್ಸ್ ಆರ್‌ಸಿಬಿ ತಂಡಕ್ಕೆ ಕಠಿಣ ಸವಾಲಾಗುವುದರಲ್ಲಿ ಅನುಮಾನವಿಲ್ಲ.
ಶನಿವಾರ ನಡೆಯಲಿರುವ ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಕೆಲ ಮಹತ್ವದ ಮಾಹಿತಿಗಳು ನಿಮಗಾಗಿ.
ಸ್ಕ್ವಾಡ್‌ಗಳು: ಆರ್‌ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಜತ್ ಪಾಟಿದಾರ್, ಅನುಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫೇನ್ ರುದರ್‌ಫೋರ್ಡ್, ಚಾಮ ವಿ ಮಿಲಿಂದ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಸಿದ್ದಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಜೋಶ್ ಹೇಜಲ್‌ವುಡ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್
ಮುಂಬೈ ಇಮಡಿಯನ್ಸ್: ರೋಹಿತ್ ಶರ್ಮಾ, ಕೀರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಇಶಾನ್ ಕಿಶನ್, ರಮಣ್‌ದೀಪ್ ಸಿಂಗ್, ರಾಹುಲ್ ಬುದ್ಧಿ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಆರ್ಯನ್ ಜುಯಲ್, ಫ್ಯಾಬಿಯನ್ ಅಲೆನ್, ಡೆವಾಲ್ಡ್ ಬ್ರೆವಿಸ್, ಬಾಸಿಲ್ ಥಂಪಿ, ಎಂ ಅಶ್ವಿನ್, ಜಯದೇವ್ ಉನದ್ಕತ್, ಮಯಾಂಕ್ ಮರ್ಕಂಡೆ, ತಿಲಕ್ ಮಾರ್ಕಂಡೆ , ಸಂಜಯ್ ಯಾದವ್, ರಿಲೆ ಮೆರೆಡಿತ್, ಮೊಹಮ್ಮದ್ ಅರ್ಷದ್ ಖಾನ್, ಅನ್ಮೋಲ್ಪ್ರೀತ್ ಸಿಂಗ್
ಪಂದ್ಯದ ಸಮಯ ಹಾಗೂ ಸ್ಥಳ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 8 ರಂದು ಶನಿವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ವಾಂಖೆಡೆ ಕ್ರೀಡಾಂಗಣ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಿಗೆ ಉತ್ತಮವಾಗಿ ನೆರವು ನೀಡಲಿದೆ. ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ಎರಡೂ ತಂಡಗಳು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಕಾರಣ ಪೈಪೋಟಿಯ ಪ್ರದರ್ಶನ ಇಲ್ಲಿ ನಿರೀಕ್ಷಿಸಲಾಗುತ್ತಿದೆ. ಇನ್ನಿಂಗ್ಸ್‌ನ ಆರಂಭದಲ್ಲಿ ವೇಗಿಗಳಿಗೆ ಸ್ವಲ್ಪ ನೆರವು ಸಿಗಬಹುದು. ಇನ್ನು ಇಬ್ಬನಿ ಈ ಪಂದ್ಯದಲ್ಲಿಯೂ ಹೆಚ್ಚಿನ ಪರಿಣಾಮವನ್ನು ಬೀರಬಹುದು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ಆಡುವ ಬಳಗ: ಫಾಫ್ ಡು ಪ್ಲೆಸಿಸ್, ಮಹಿಪಾಲ್ ಲೊಮ್ರೋರ್/ಅನುಜ್ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹಮದ್, ವನಿಂದು ಹಸರಂಗ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶ್ ದೀಪ್/ಸಿದ್ಧಾರ್ಥ್ ಕೌಲ್, ಮೊಹಮ್ಮದ್ ಸಿರಾಜ್
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ರಿಲೆ ಮೆರೆಡಿತ್, ಟೈಮಲ್ ಮಿಲ್ಸ್, ಮುರುಗನ್ ಅಶ್ವಿನ್, ಬೆಸಿಲ್ ಥಾಮಿ ಮತ್ತು ಜಸ್ಪ್ರೀತ್ ಬುಮ್ರಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications