DC vs MI : ಮುಂಬೈ vs ಡೆಲ್ಲಿ ಸೆಣೆಸಾಟದಲ್ಲಿ ಯಾರಿಗೆ ಮೇಲುಗೈ? ಹೆಡ್ ಟು ಹೆಡ್ ಹಾಗೂ ಸಂಬಾವ್ಯ ಆಡುವ ಬಳಗ

ಐಪಿಎಲ್ 15ನೇ ಆವೃತ್ತಿಯ ಎರಡನೇ ಪಂದ್ಯ ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆಯಲಿದೆ. ಮುಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಈ ಮುಖಾಮುಖಿ ನಡೆಯಲಿದ್ದು ಕುತೂಹಲ ಮೂಡಿಸಿದೆ. ಎರಡೂ ತಂಡಗಳು ಕೂಡ ಬಲಿಷ್ಠ ಆಟಗಾರರ ಬಳಗವನ್ನು ಹೊಂದಿದ್ದು ಯಾವ ತಂಡ ಗೆಲುವಿನೊಂದಿಗೆ ಶುಭಾರಂಭ ಮಾಡಲಿದೆ ಎಂಬುದು ಕುತೂಹಲ ಮೂಡಿಸಿದೆ.
ಕಳೆದ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅದ್ಭುತ ಪ್ರದರ್ಶನ ನೀಡುತ್ತಾ ಭರವಸೆ ಮೂಡಿಸಿತ್ತು. ಅದರಲ್ಲೂ ಮೊದಲಾರ್ಧದಲ್ಲಿ ಪಂತ್ ಪಡೆ ಸಂಪೂರ್ಣ ಮೇಲುಗೈ ಸಾಧಿಸುವಲ್ಲಿಯೂ ಯಶಸ್ವಿಯಾಗಿತ್ತು. ಈ ಸಂದರ್ಭದಲ್ಲಿ ತಂಡ ಸಾಕಷ್ಟು ಆಕ್ರಮಣಕಾರಿಯಾಗಿಯೂ ಮುನ್ನುಗ್ಗಿತ್ತು. ದ್ವಿತಿಯಾರ್ಧದಲ್ಲಿಯೂ ಡೆಲ್ಲಿ ಗೆಲುವು ಸಾಧಿಸುತ್ತಾ ಮುನ್ನುಗ್ಗಿದ್ದರೂ ಮೊದಲಾರ್ಧದಲ್ಲಿದ್ದ ತೀವ್ರತೆ ಕಂಡು ಬರಲಿಲ್ಲ. ಹಾಗಿದ್ದರೂ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಿಯಾಗಿ ಪ್ಲೇಆಫ್‌ಗೆ ಪ್ರವೇಶ ಪಡೆಯಿತು. ಆದರೆ ಪ್ಲೇಆಫ್‌ಗೆ ಡಿಸಿ ತಂಡದ ಹೋರಾಟ ಅಂತ್ಯವಾಗುವ ಮೂಲಕ ನಿರಾಸೆ ಅನುಭವಿಸಿತು. ಆದರೆ ಕಳೆದ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿದ್ದ ಮುಂಬೈ ಇಂಡಿಯನ್ಸ್ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿತ್ತು.
ಸಮಯ ಹಾಗೂ ತಾಣ: ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯಾಟ ಮುಂಬೈನ ಬ್ರೆಬೋರ್ನ್ ಸ್ಟೇಡಿಯಮ್‌ನಲ್ಲಿ ನಡೆಯಲಿದೆ. ಮಾರ್ಚ್ 27 ಭಾನುವಾರ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.
ಸಂಭಾವ್ಯ ತಂಡಗಳು
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಟಿಮ್ ಸೀಫರ್ಟ್, ಕೆಎಸ್ ಭರತ್, ರೋವ್‌ಮನ್ ಪೊವೆಲ್, ರಿಷಬ್ ಪಂತ್ (ನಾಯಕ/ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮುಸ್ತಾಫಿಜುರ್ ರೆಹಮಾನ್, ಕುಲದೀಪ್ ಯಾದವ್, ಲುಂಗಿ ಎನ್‌ಗಿಡಿ.
ಮುಂಬೈ ಇಂಡಿಯನ್ಸ್ :ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಅನ್ಮೋತ್‌ಪ್ರೀತ್ ಸಿಂಗ್, ಸೂರ್ಯಕುಮಾರ್ ಯಾದವ್, ಕೀರಾನ್ ಪೊಲಾರ್ಡ್, ಟಿಮ್ ಡೇವಿಡ್, ತಿಲಕ್ ವರ್ಮಾ, ಟೈಮಲ್ ಮಿಲ್ಸ್, ಡೇನಿಯಲ್ ಸಾಮ್ಸ್/ಫ್ಯಾಬಿಯನ್ ಅಲೆನ್, ಜಸ್ಪ್ರೀತ್ ಬುಮ್ರಾ, ಎಂ ಅಶ್ವಿನ್.
ಡಿಸಿ vs ಎಂಐ ಹೆಡ್ ಟು ಹೆಡ್
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಈವರೆಗೆ ಒಟ್ಟು 30 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಇದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 14 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಮುಂಬೈ ಇಂಡಿಯನ್ಸ್ ತಂಡ 16 ಪಂದ್ಯಗಳಲ್ಲಿ ಗೆದ್ದಿದೆ. ಕಳೆದ ಆವೃತ್ತಿಯಲ್ಲಿ ಮುಖಾಮುಖಿಯಾಗಿದ್ದ ಎರಡು ಸಂದರ್ಭದಲ್ಲಿಯೂ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications