
ಸೋಮವಾರ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈ ಬಾರಿಯ ಐಪಿಎಲ್‌ನಲ್ಲಿ ಮೊದಲ ಬಾರಿಗೆ ಕಣಕ್ಕಿಳಿದಿರುವ ಗುಜರಾತ್ ಟೈಟನ್ಸ್ ತಂಡ ಆಡಿರುವ ಮೂರು ಪಂದ್ಯಗಳ ಪಂದ್ಯ ಮೂರರಲ್ಲಿಯೂ ಗೆಲುವು ಸಾಧಿಸಿದ್ದು ಟೂರ್ನಿಯಲ್ಲಿ ಅಜೇಯವಾಗುಳಿದಿರುವ ಏಕೈಕ ತಂಡ ಎನಿಸಿದೆ. ಈ ಮೂಲಕ ಅತ್ಯುದ್ಭುತ ಆರಂಭ ಪಡೆದಿದೆ ಹಾರ್ದಿಲ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡ. ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್ ಆರಂಭಿಕ ಎರಡು ಪಂದ್ಯಗಳನ್ನು ಸೋತ ಬಳಿಕ ಗೆಲುವಿನ ರುಚಿ ಕಂಡಿದ್ದು ಈ ಗೆಲುವಿನ ಲಯವನ್ನು ಮುಂದುವರಿಸುವ ಹುಮ್ಮಸ್ಸಿನಲ್ಲಿದೆ.
ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡ ಸತತ ಮೂರು ಗೆಲುವು ಸಾಧಿಸಿದರೂ ಕೆಲ ವಿಚಾರಗಳಲ್ಲಿ ಇನ್ನಷ್ಟು ಪ್ರಗತಿ ಕಾಣಬೇಕಿದೆ. ಆದರೆ ಈವರೆಗಿನ ಎಲ್ಲಾ ಪಂದ್ಯಗಳಲ್ಲಿ ಹಿನ್ನಡೆಯನ್ನು ಮೆಟ್ಟಿ ನಿಂತು ಗೆಲುವು ಸಾಧಿಸಲು ಯಶಸ್ವಿಯಾಗಿದೆ. ಬೌಲಿಂಗ್ ಜಿಟಿ ತಂಡದ ಪ್ರಮುಖ ಬಲವಾಗಿದ್ದು ಲೂಕಿ ಫರ್ಗ್ಯೂಸನ್, ಮೊಹಮ್ಮದ್ ಶಮಿ ಹಾಗೂ ರಶೀದ್ ಖಾನ್ ಅದ್ಭುತವಾಗಿ ಮಿಂಚುತ್ತಿದ್ದಾರೆ. ಬ್ಯಾಟರ್‌ಗಳ ಪೈಕಿ ಗಿಲ್ ಅವರಿಂದ ಅದ್ಭುತ ಪ್ರದರ್ಶನ ಬರುತ್ತಿದ್ದು ಕೆಳ ಕ್ರಮಾಂಕದಲ್ಲಿ ಡೆವಿಡ್ ಮಿಲ್ಲರ್ ಹಾಗೂ ರಾಹುಲ್ ತೆವಾಟಿಯಾ ಹಾರ್ದಿಕ್ ಪಡೆಗೆ ಬಲ ಹೆಚ್ಚಿಸಿದ್ದಾರೆ.
ಸ್ಕ್ವಾಡ್‌ಗಳು: ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ಅಬ್ದುಲ್ ಸಮದ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ನಿಕೋಲಸ್ ಪೂರನ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಪ್ರಿಯಮ್ ಗಾರ್ಗ್, ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಕರಿಕ್ ತ್ಯಾಗಿ, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್, ರೊಮಾರಿಯೊ ಶೆಫರ್ಡ್, ಸೀನ್ ಅಬಾಟ್, ಆರ್ ಸಮರ್ಥ್, ಸೌರಭ್ ದುಬೆ, ಶಶಾಂಕ್ ಸಿಂಗ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್
ಪಂದ್ಯದ ಸಮಯ ಹಾಗೂ ಸ್ಥಳ: ಸನ್‌ರೈಡರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯ ಏಪ್ರಿಲ್ 11 ರಂದು ಸೋಮವಾರ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.
ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ: ಡಿವೈ ಪಾಟೀಲ್ ಕ್ರೀಡಾಂಗಣ ಬ್ಯಾಟಿಂಗ್ ವಿಭಾಗಕ್ಕೆ ಹೆಚ್ಚಿನ ನೆರವು ದೊರೆಯಲಿದೆ. ಇಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೆಡೆಮುರಿಕಟ್ಟಿತ್ತು. ಆರಂಭದಲ್ಲಿ ವೇಗಿಗಳು ಉತ್ತಮ ನೆರವು ಪಡೆಯಲಿದ್ದು ನಂತರ ಸ್ಪಿನ್ನರ್‌ಗಳು ಕೂಡ ಮಿಂಚುವ ನಿರೀಕ್ಷೆಯಿದೆ. ಪಂದ್ಯ ಮುಂದುವರಿಯುತ್ತಿದ್ದಂತೆಯೇ ಬ್ಯಾಟರ್‌ಗಳಿಗೆ ನೆರವು ದೊರೆಯಲಿದೆ.
ಸಂಬಾವ್ಯ ಆಡುವ ಬಳಗ: ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್
ಗುಜರಾತ್ ಟೈಟನ್ಸ್: ಮ್ಯಾಥ್ಯೂ ವೇಡ್/ವೃದ್ಧಿಮಾನ್ ಸಾಹಾ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ, ದರ್ಶನ್ ನಲ್ಕಂಡೆ