ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2022: RR vs GT: ಹೊಸ ಮೈಲಿಗಲ್ಲು ನೆಡಲು ಸಜ್ಜಾದ ಇತ್ತಂಡಗಳ ಆಟಗಾರರು

IPL 2022, match 24, RR vs GT: Players records and approaching milestones

ಈ ಬಾರಿಯ ಐಪಿಎಲ್‌ನ ಆರಂಭದಲ್ಲಿಯೇ ಅದ್ಭುತ ಪ್ರದರ್ಶನ ನೀಡಿ ಎಲ್ಲರ ಗಮನಸೆಳೆದಿರುವ ಎರಡು ತಂಡಗಳು ಇಂದು ಮುಖಾಮುಖಿಯಾಗಲಿದೆ. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವೆ ಇಂಡು ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಪೈಪೋಟಿ ನಡೆಯಲಿದ್ದು ಪಂದ್ಯ ಕುತೂಹಲ ಕೆರಳಿಸಿದೆ.

ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟನ್ಸ್ ಎರಡು ತಂಡಗಳು ಕೂಡ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಆದರೆ ನೆಟ್‌ರನ್‌ರೇಟ್‌ನಲ್ಲಿ ಆರ್‌ಆರ್ ಪಡೆ ಮುಂದಿದ್ದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಗುಜರಾತ್ ಟೈನಸ್‌ ತಂಡ 5ನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯ್ಲಲಿ ಅಗ್ರಸ್ಥಾನಕ್ಕೆರುವ ಅವಕಾಶ ಗುಜರಾತ್ ಟೈಟನ್ಸ್ ತಂಡಕ್ಕೂ ಇದೆ.

IPL 2022: ಸತತ 5 ಪಂದ್ಯ ಸೋತ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌IPL 2022: ಸತತ 5 ಪಂದ್ಯ ಸೋತ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌

ಇನ್ನು ಈ ಪಂದ್ಯದಲ್ಲಿ ಎರಡೂ ತಂಡಗಳ ಕೆಲ ಆಟಗಾರರು ಮಹತ್ವದ ಮೈಲಿಗಲ್ಲು ಸಾಧಿಸುವ ಅವಕಾಶ ಹೊಂದಿದ್ದಾರೆ. ಆ ಆಟಗಾರರು ಯಾರು? ಮುಂದೆ ಓದಿ..

* ಸಂಜು ಸ್ಯಾಮ್ಸನ್: ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 5000 ರನ್‌ಗಳಿಸಲು 60 ರನ್‌ಗಳಷ್ಟು ದೂರದಲ್ಲಿದ್ದಾರೆ. ಇನ್ನು ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರವಾಗಿ 2500 ರನ್‌ಗಳಿಸಲು ಸಂಜುಗೆ ಕೇವಲ 2 ರನ್‌ಗಳ ಅಗತ್ಯವಿದೆ. ಆರ್‌ಆರ್ ಪರವಾಗಿ ಈ ಸಾಧನೆ ಮಾಡಿದ ಎರಡನೇ ಆಟಗಾರ ಎನಿಸಲಿದ್ದಾರೆ ಸಂಜು ಸ್ಯಾಮ್ಸನ್. ಇನ್ನು ಐಪಿಎಲ್‌ನಲ್ಲಿ 50 ಬಲಿ ಪಡೆದ ಆಟಗಾರ ಎನಿಸಲಿ ಸಂಜು ಎರಡು ಔಟ್‌ಗಳಿಗೆ ಕಾರಣವಾಗಬೇಕಿದೆ.

*ಹಾರ್ದಿಕ್ ಪಾಂಡ್ಯ: ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 100 ಕ್ಯಾಚ್ ಪಡೆದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲು 2 ಕ್ಯಾಚ್‌ಗಳ ಅಗತ್ಯವಿದೆ. ಇನ್ನು ಐಪಿಎಲ್‌ನಲ್ಲಿ 50 ವಿಕೆಟ್ ಪಡೆದ ಆಟಗಾರರ ಪಟ್ಟಿಗೆ ಸೇರಿಕೊಳ್ಳಲು 5 ವಿಕೆಟ್‌ಗಳನ್ನು ಹಾರ್ದಿಕ್ ಪಾಂಡ್ಯ ಗಳಿಸಬೇಕಿದೆ.

*ಡೇವಿಡ್ ಮಿಲ್ಲರ್: ಗುಜರಾತ್ ಟೈಟನ್ಸ್ ತಂಡದ ಅನುಭವಿ ಆಟಗಾರ ಡೇವಿಡ್ ಮಿಲ್ಲರ್ ಐಪಿಎಲ್‌ನಲ್ಲಿ 100 ಸಿಕ್ಸರ್ ಗಳಿಸಿದ ಆಟಗಾರರ ಪಟ್ಟಿಗೆ ಸೇರಿಕೊಳ್ಳಲು ಇಂದಿನ ಪಂದ್ಯದಲ್ಲಿ 8 ಸಿಕ್ಸರ್‌ಗಳನ್ನು ಗಳಿಸಬೇಕಿದೆ. ಇನ್ನು ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 8000 ರನ್‌ಗಳಿಸಲು ಮಿಲ್ಲರ್ 64 ರನ್‌ಗಳನ್ನು ಗಳಿಸಿಬೇಕಿದ್ದು 3 ಸಿಕ್ಸರ್ ಸಿಡಿಸಿದರೆ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 350 ಸಿಕ್ಸರ್ ಸಿಡಿಸಿದಂತಾಗುತ್ತದೆ.

*ರಶೀದ್ ಖಾನ್: ಗುಜರಾತ್ ಟೈಟನ್ಸ್ ತಂಡದ ಸ್ಪಿನ್ನರ್ ರಶೀದ್ ಖಾನ್ 100 ಐಪಿಎಲ್ ವಿಕೆಟ್ ಪಡೆದ ಸಾಧನೆ ಮಾಡಲು ಇಂದಿನ ಪಂದ್ಯದಲ್ಲಿ ಕೇವಲ 1 ವಿಕೆಟ್ ಪಡೆಯಬೇಕಿದೆ.

*ಯುಜುವೇಂದ್ರ ಚಾಹಲ್: ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲು ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ನರ್ ಯುಜುವೇಂದ್ರ ಚಾಹಲ್ 1 ವಿಕೆಟ್ ಸಂಪಾದಿಸಬೇಕಿದೆ.

IPL 2022, match 24, RR vs GT: Players records and approaching milestones

*ಆರ್ ಅಶ್ವಿನ್: ರಾಜಸ್ಥಾನ್ ರಾಯಲ್ಸ್ ತಂಡದ ಮತ್ತೋರ್ವ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಐಪಿಎಲ್‌ನಲ್ಲಿ 150 ವಿಕೆಟ್ ಪಡೆದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲು 4 ವಿಕೆಟ್‌ಗಳನ್ನು ಪಡೆಯಬೇಕಿದೆ.

ರಶೀದ್ ಖಾನ್‌ರನ್ನ SRH ರೀಟೈನ್ ಮಾಡದೆ ಇರಲು, ಕಾರಣ ತಿಳಿಸಿದ ಮುತ್ತಯ್ಯ ಮುರಳೀಧರನ್ರಶೀದ್ ಖಾನ್‌ರನ್ನ SRH ರೀಟೈನ್ ಮಾಡದೆ ಇರಲು, ಕಾರಣ ತಿಳಿಸಿದ ಮುತ್ತಯ್ಯ ಮುರಳೀಧರನ್

ಸಂಭಾವ್ಯ ತಂಡಗಳು: ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಕುಲದೀಪ್ ಸೇನ್, ರವಿಚಂದ್ರನ್ ಅಶ್ವಿನ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್
ಗುಜರಾತ್ ಟೈಟಾನ್ಸ್: ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ದರ್ಶನ್ ನಲ್ಕಂಡೆ, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ

Story first published: Thursday, April 14, 2022, 16:23 [IST]
Other articles published on Apr 14, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X