
ಐಪಿಎಲ್ 15ನೇ ಆವೃತ್ತಿಯ ನಾಲ್ಕನೇ ಪಂದ್ಯದಲ್ಲಿ ಈ ಬಾರಿಯ ಐಪಿಎಲ್‌ಗೆ ಹೊಸದಾಗಿ ಸೇರ್ಪಡೆಯಾಗಿರುವ ತಂಡಗಳು ಮುಖಾಮುಖಿಯಾಗಿದೆ. ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಐಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ ಕಣಕ್ಕಿಳಿದಿದೆ. ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಇನ್ನು ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ನಾಲ್ವರು ವಿದೇಶಿ ಆಟಗಾರರೊಂದಿಗೆ ಕಣಕ್ಕಿಳಿದರೆ ಲಕ್ನೋ ಸೂಪರ್ ಜೈಂಟ್ಸ್ ತಂಡ ಮೂವರು ವಿದೇಶಿ ಆಟಗಾರರೊಂದಿಗೆ ಕಣಕ್ಕಿಳಿದಿದೆ. ಹಾರ್ದಿಲ್ ಪಾಂಡ್ಯ ನಾಯಕತ್ವದ ಜಿಟಿ ತಂಡದ ಪರವಾಗಿ ಲೂಕಿ ಫರ್ಗ್ಯೂಸನ್, ಮ್ಯಾಥ್ಯೂ ವೇಡ್, ರಶೀದ್ ಖಾನ್ ಹಾಗೂ ಡೇವಿಡ್ ಮಿಲ್ಲರ್ ವಿದೇಶಿ ಆಟಗಾರರಾಗಿ ಕಣಕ್ಕಿಳಿದಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರವಾಗಿ ಎವಿನ್ ಲೂಯೀಸ್, ಕ್ವಿಂಟನ್ ಡಿಕಾಕ್ ಮತ್ತು ಚಮೀರ ವಿದೇಶಿ ಆಟಗಾರರ ಕೋಟಾದಲ್ಲಿ ಕಣಕ್ಕಿಳಿದಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಎವಿನ್ ಲೂಯಿಸ್, ಮನೀಶ್ ಪಾಂಡೆ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮೊಹ್ಸಿನ್ ಖಾನ್, ಆಯುಷ್ ಬಡೋನಿ, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭಮನ್ ಗಿಲ್, ಮ್ಯಾಥ್ಯೂ ವೇಡ್(ವಿಕೆಟ್ ಕೀಪರ್), ವಿಜಯ್ ಶಂಕರ್, ಅಭಿನವ್ ಮನೋಹರ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಲಾಕಿ ಫರ್ಗುಸನ್, ವರುಣ್ ಆರೋನ್, ಮೊಹಮ್ಮದ್ ಶಮಿ