Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs SRH: ಪ್ರಮುಖ ಮೈಲಿಗಲ್ಲುಗಳ ಮೇಲೆ ಕಣ್ಣಿಟ್ಟ ಹಾರ್ದಿಕ್, ಗಿಲ್, ಭುವಿ

IPL 2022, match 40, SRH vs GT: Players records and approaching milestones

ಐಪಿಎಲ್‌ನಲ್ಲಿ ಇಂದು ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗತ್ತಿದೆ. ಎರಡು ತಂಡಗಳು ಕೂಡ ಅದ್ಭುತವಾದ ಫಾರ್ಮ್‌ನಲ್ಲಿದ್ದು ಭರ್ಜರಿ ಗೆಲುವಿನೊಂದಿಗೆ ಮುನ್ನುಗ್ಗುತ್ತಿದೆ. ಸನ್‌ರೈಸರ್ಸ್ ಹೈದರಾಬಾದ್ ಆರ್‌ಸಿಬಿ ತಂಡವನ್ನು 68 ರನ್‌ಗಳಿಗೆ ಕಟ್ಟಿ ಹಾಕಿ ಸುಲಭ ಗೆಲುವು ದಾಖಲಿಸುವ ಜೊತೆಗೆ ತನ್ನ ಬೌಲಿಂಗ್ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತಿಪಡಿಸಿದೆ. ಮತ್ತೊಂದೆಡೆ ಗುಜರಾತ್ ಟೈಟನ್ಸ್ ಕೂಡ ಹ್ಯಾಟ್ರಿಕ್ ಗೆಲುವು ಸಾಧಿಸಿ ಅಬ್ಬರಿಸುತ್ತಿದೆ

ಜಿಟಿ ಹಾಗೂ ಎಸ್‌ಆರ್‌ಹೆಚ್ ಈ ಎರಡು ತಂಡಗಳ ಪೈಕಿ ಇಂದು ಗೆದ್ದ ತಂಡ ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶ ಹೊಂದಿದೆ. ಗುಜರಾತ್ ಟೈಟನ್ಸ್ ಆಡಿದ 7 ಪಂದ್ಯಗಳಲ್ಲಿ ಒಂದು ಸೋಲು ಅನುಭವಿಸಿದ್ದು 6 ಗೆಲುವುಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಸೋಲು ಕಂಡಿರುವ ಒಂದು ಪಂದ್ಯ ಕೂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧವೇ ಆಗಿರುವುದು ಕುತೂಹಲಕಾರಿ ಸಂಗತಿ. ಇದೀಗ ಟೂರ್ನಿಯಲ್ಲಿ ಎರಡನೇ ಬಾರಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಜಿಟಿ ಎದುರಿಸುತ್ತಿದ್ದು ಈ ಪಂದ್ಯದಲ್ಲಿ ಸೋಲಿನ ಸೇಡು ತೀರಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಗೆ ಕೆಲವೇ ಗಂಟೆಗಳಲ್ಲಿ ಉತ್ತರ ದೊರೆಯಲಿದೆ. ಮತ್ತೊಂದೆಡೆ ಆರಂಭಿಕ ಎರಡು ಪಂದ್ಯಗಳನ್ನು ಸೋತ ನಂತರ ಅದ್ಭುತ ರೀತಿಯಲ್ಲಿ ಕಮ್‌ಬ್ಯಾಕ್ ಮಾಡಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ನಂತರದ 5 ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ ಸ್ಥಾನದಲ್ಲಿದೆ.

IPL 2022, match 40, SRH vs GT: Players records and approaching milestones

ಇಂದಿನ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ಆಟಗಾರರು ಕೆಲ ವಿಶೇಷ ಮೈಲಿಗಲ್ಲುಗಳನ್ನು ಸಾಧಿಸುವ ಅವಕಾಶ ಹೊಂದಿದ್ದಾರೆ.

*ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಇಂದಿನ ಪಂದ್ಯದಲ್ಲಿ 32 ರನ್‌ಗಳನ್ನು ಗಳಿಸಿದರೆ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾಗ ಕೋಚ್ ಆಗಿದ್ದ ಮಹೇಲ ಜಯವರ್ಧನೆ ಅವರ ಐಪಿಎಲ್ ರನ್‌ಅನ್ನು ಹಿಂದಿಕ್ಕಲಿದ್ದಾರೆ. ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ 1771 ರನ್‌ಗಳಿಸಿದ್ದರೆ ಜಯವರ್ಧನೆ 1802 ರನ್‌ಗಳಿಸಿದ್ದಾರೆ.
*ಗುಜರಾತ್ ಟೈಟನ್ಸ್ ತಂಡದ ಶುಬ್ಮನ್ ಗಿಲ್ ಐಪಿಎಲ್‌ನಲ್ಲಿ 50 ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಗೆ ಸೇರಿಕೊಳ್ಳಲು 9 ಸಿಕ್ಸರ್ ಸಿಡಿಸಬೇಕಿದೆ.
*ಗುಜರಾತ್ ಟೈಟನ್ಸ್ ತಂಡದ ಆಲ್‌ರೌಂಡರ್ ರಾಹುಲ್ ತೆವಾಟಿಯಾ ಐಪಿಎಲ್‌ನಲ್ಲಿ 50 ಬೌಂಡರಿ ಪೂರ್ಣಗೊಳಿಸಲು 6 ಬೌಂಡರಿಗಳ ಅಗತ್ಯವಿದೆ.
*ಐಪಿಎಲ್‌ನಲ್ಲಿ 50 ಸಿಕ್ಸರ್ ಪೂರೈಸಲು ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ನಿಕೋಲಸ್ ಪೂರನ್ ಒಂದು ಸಿಕ್ಸರ್ ಹಿಂದಿದ್ದಾರೆ.
*ಸನ್‌ರೈಸರ್ಸ್ ಹೈದರಾಬಾದ್ ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಸದ್ಯ 151 ವಿಕೆಟ್ ಸಂಪಾದಿಸಿದ್ದು 157 ವಿಕೆಟ್ ಪಡೆದಿರುವ ಆರ್ಆರ್ ತಂಡದ ಅನುಭವಿ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಅವರಿಗೆ ಮತ್ತಷ್ಟು ಹತ್ತಿರವಾಗುವ ಅವಕಾಶ ಹೊಂದಿದ್ದಾರೆ.

ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಅಭಿನವ್ ಸದಾರಂಗನಿ, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್, ರಹಮಾನುಲ್ಲಾ ಗುರ್ಬಾಜ್

ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ಅಬ್ದುಲ್ ಸಮದ್, ಉಮ್ರಾನ್ ಮಲಿಕ್, ವಾಷಿಂಗ್ಟನ್ ಸುಂದರ್, ನಿಕೋಲಸ್ ಪೂರನ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಪ್ರಿಯಮ್ ಗಾರ್ಗ್, ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಕಾರ್ತಿಕ್ ತ್ಯಾಗಿ, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸೆನ್, ರೊಮಾರಿಯೊ ಶೆಫರ್ಡ್, ಸೀನ್ ಅಬಾಟ್, ಆರ್ ಸಮರ್ಥ್, ಸೌರಭ್ ದುಬೆ, ಶಶಾಂಕ್ ಸಿಂಗ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.

Story first published: Wednesday, April 27, 2022, 15:24 [IST]
Other articles published on Apr 27, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+