For Quick Alerts
ALLOW NOTIFICATIONS  
For Daily Alerts
 

DC vs KKR: ಪ್ರಮುಖ ಮೈಲಿಗಲ್ಲುಗಳ ಮೇಲೆ ಕಣ್ಣಿಟ್ಟ ಸುನಿಲ್ ನರೈನ್, ಅಕ್ಷರ್ ಪಟೇಲ್

IPL 2022, match 41, DC vs KKR: Players records and approaching milestones

ಐಪಿಎಲ್‌ನಲ್ಲಿ ಇಂದು 41ನೇ ಮುಖಾಮುಖಿ ನಡೆಯಲಿದ್ದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಟೂರ್ನಿಯಲ್ಲಿ ಈ ತಂಡಗಳು ಎರಡನೇ ಬಾರಿಗೆ ಹಣಾಹಣಿ ನಡೆಸಲು ಸಜ್ಜಾಗಿದ್ದು ಎರಡು ತಂಡಗಳಿಗೂ ಇಂದಿನ ಪಂದ್ಯದ ಗೆಲುವು ಬಹಳ ಪ್ರಮುಖವಾಗಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಈ ಬಾರಿ ಹೆಚ್ಚಾಗಿ ಸೋಲನ್ನೇ ಕಂಡಿರುವ ಕಾರಣ ಮತ್ತೆ ಗೆಲುವಿನ ಲಯಕ್ಕೆ ಮರಳಲು ಇಂದಿನ ಪಂದ್ಯದಲ್ಲಿ ಪೈಪೋಟಿ ನಡೆಸುವ ಕಾರಣ ಕುತೂಹಲ ಹೆಚ್ಚಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಎರಡು ತಂಡಗಳು ಕೂಡ ಗೆಲುವಿನೊಂದಿಗೆ ಟೂರ್ನಿ ಆರಂಭಿಸಿದರೂ ನಂತರ ಗೆಲುವಿನ ಲಯದಲ್ಲು ಮುಂದುವರಿಯಲು ವಿಫಲವಾದವು. ಅದರಲ್ಲೂ ಆರಂಬಿಕ ಮೂರು ಪಂದ್ಯಗಳಲ್ಲಿ ಗೆದ್ದು ಬೀಗಿದ್ದ ಕೆಕೆಆರ್ ನಂತರದ ಎಲ್ಲಾ ಪಂದ್ಯಗಳಲ್ಲೂ ಸೋಲು ಅನುಭವಿಸುವ ಮೂಲಕ ಹೀನಾಯ ಸ್ಥಿತಿಯಲ್ಲಿದೆ. ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಥಿತಿ ಕೂಡ ಭಿನ್ನವಾಗಿಲ್ಲ. ಸಾಕಷ್ಟು ಪ್ರತಿಭಾನ್ವಿತ ಆಟಗಾರರ ಪಡೆಯನ್ನು ಹೊಂದಿದ್ದರು ಕೂಡ ಸ್ಥಿರ ಪ್ರದರ್ಶನ ನೀಡಲು ಡಿಸಿ ವಿಫಲವಾಗುತ್ತಿದೆ.

ಇಂದಿನ ಪಂದ್ಯದಲ್ಲಿಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ಆಟಗಾರರು ಕೆಲ ವಿಶೇಷ ಮೈಲಿಗಲ್ಲುಗಳನ್ನು ಸಾಧಿಸುವ ಅವಕಾಶ ಹೊಂದಿದ್ದಾರೆ.

IPL 2022, match 41, DC vs KKR: Players records and approaching milestones

* ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅನುಭವಿ ಆಟಗಾರ ಡೇವಿಡ್ ವಾರ್ನರ್ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ದೊಡ್ಡ ಮೈಲಿಗಲ್ಲು ದಾಖಲಿಸುವ ಸನಿಹದಲ್ಲಿದ್ದಾರೆ. ಇಂದಿನ ಪಂದ್ಯದಲ್ಲಿ 2 ಸಿಕ್ಸರ್ ಬಾರಿಸಿದರೆ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 400 ಸಿಕ್ಸರ್ ಬಾರಿಸಿದ ಆಟಗಾರ ಎನಿಸಿದಲಿದ್ದಾರೆ. ಇನ್ನು ಈ ಪಂದ್ಯದಲ್ಲಿ ವಾರ್ನರ್ 24 ರನ್‌ಗಳಿಸಿದರೆ ಕೆಕೆಆರ್ ವಿರುದ್ಧ 1000 ರನ್‌ಗಳಿಸಿದ ಆಟಗಾರ ಎನಿಸಲಿದ್ದಾರೆ.

*ಅಕ್ಷರ್ ಪಟೇಲ್: ಡೆಲ್ಲಿ ಕ್ಯಾಪಿಟಲ್ಸ ತಮಡದ ಆಲ್‌ರೌಂಡರ್ ಅಕ್ಷರ್ ಪಟೇಲ್ ಐಪಿಎಲ್‌ನಲ್ಲಿ 100 ವಿಕೆಟ್ ಸಂಪಾದಿಸಿದ ಆಟಗಾರರ ಪಟ್ಟಿಗೆ ಸೇರಲು 2 ವಿಕೆಟ್ ಕಬಳಿಸಬೇಕಿದೆ. ಇನ್ನು ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 150 ವಿಕೆಟ್ ಪಡೆಯಲು ಒಂದಯ ವಿಕೆಟ್ ಅಗತ್ಯವಿದೆ.

*ಕೆಕೆಆರ್ ತಂಡದ ಅನುಭವಿ ಆಟಗಾರ ಮೊಹಮ್ಮದ್ ನಿಬಿ ಇಂದಿನ ಪಂದ್ಯದಲ್ಲಿ ಆಡುವ ಅವಕಾಶ ಪಡೆದು 4 ರನ್‌ಗಳಿಸಿದರೆ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 5000 ರನ್‌ಗಳಿಸಿದ ಆಟಗಾರರ ಪಟ್ಟಿಗೆ ಸೇರಿಕೊಳ್ಳಲಿದ್ದಾರೆ.
*ಕೆಕೆಆರ್ ತಂಡದ ಅನುಭವಿ ಆಲ್‌ರೌಂಡರ್ ಸುನಿಲ್ ನರೈನ್ ಐಪಿಎಲ್‌ನಲ್ಲಿ 2000 ರನ್ ಪೂರ್ಣಗೊಳಿಸಲು 37 ರನ್ ಗಳಿಸಬೇಕಿದೆ. ಇನ್ನು ಐಪಿಎಲ್‌ನಲ್ಲಿ 100೦ ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲು ಎರಡು ಸಿಕ್ಸರ್ ಬಾರಿಸಬೇಕಿದೆ.

IPL 2022: ಗುಜರಾತ್ ಟೈಟನ್ಸ್‌ ಅಬ್ಬರ, ಅಂಕಪಟ್ಟಿಯಲ್ಲಿ ಸ್ಥಾನ ಮತ್ತಷ್ಟು ಭದ್ರ
*ಕೆಕೆಆರ್ ತಂಡದ ಆಟಗಾರ ನಿತೀಶ್ ರಾಣಾ ಇಂದಿನ ಪಂದ್ಯದಲ್ಲಿ 37 ರನ್‌ಗಳಿಸಿದರೆ ಐಪಿಎಲ್‌ನಲ್ಲಿ 2000 ರನ್‌ಗಳಿಸಿದಂತಾಗುತ್ತದೆ. ಇನ್ನು ಐಪಿಎಲ್‌ನಲ್ಲಿ 100 ಸಿಕ್ಸರ್ ಗಳಿಸಿದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲು ರಾಣಾ ಇಂದು ಎರಡು ಸಿಕ್ಸರ್ ಸಿಡಿಸಿಬೇಕಿದೆ.
*ಆಂಡ್ರೆ ರಸೆಲ್ ಐಪಿಎಲ್‌ನಲ್ಲಿ 2000 ರನ್‌ಗಳನ್ನು ಪೂರ್ಣಗೊಳಿಸಲು 73 ರನ್ ಬಾರಿಸಬೇಕಿದೆ.
*ಕೆಕೆಆರ್ ತಂಡದ ನಾಯಕ ಶ್ರೇಯಸ್ ಐಯ್ಯರ್ ಇಂದಿನ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮುನ್ನಡೆಸುವ ಮೂಲಕ ಐಪಿಎಲ್‌ನಲ್ಲಿ 50ನೇ ಪಂದ್ಯದಲ್ಲಿ ನಾಯಕತ್ವ ವಹಿಸಿಕೊಂಡಂತಾಗುತ್ತದೆ. ಇನ್ನು ಐಪಿಎಲ್‌ನಲ್ಲಿ 100 ಸಿಕ್ಸರ್ ಬಾರಿಸಿದ ಆಟಗಾರ ಎನಿಸಲು 5 ಸಿಕ್ಸರ್ ಬಾರಿಸಬೇಕಿದೆ.
*ಮುಸ್ತಪಿಜುರ್ ರಹ್ಮಾನ್ ಇಂದಿನ ಪಂದ್ಯದಲ್ಲಿ 4 ವಿಕೆಟ್ ಪಡೆಯಲು ಸಾಧ್ಯವಾದರೆ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 250 ವಿಕೆಟ್ ಪಡೆದಂತಾಗುತ್ತದೆ.
*ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಇಂದಿನ ಪಂದ್ಯದಲ್ಲಿ 102 ರನ್ ಗಳಿಸಿದರೆ ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ 4000 ರನ್ ಗಳಿಸಿದಂತಾಗುತ್ತದೆ.

Story first published: Thursday, April 28, 2022, 12:32 [IST]
Other articles published on Apr 28, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+